ಬೆಳ್ತಂಗಡಿ: ಪಟ್ರಮೆ ಅನಾರು ದೇವಸ್ಥಾನದಲ್ಲಿ ಕಳ್ಳತನ
ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳ ಕಳವು

ಬೆಳ್ತಂಗಡಿ, ಜೂ. 15:ಪಟ್ರಮೆ ಅನಾರು ದೇವಸ್ಥಾನಕ್ಕೆ ಮಂಗಳವಾರ ರಾತ್ರಿ ಕಳ್ಳರು ನುಗ್ಗಿದ್ದು, ದೇವರ ಆಭರಣಗಳು ಸೇರಿದಂತೆ ಚಿನ್ನ ಹಾಗೂ ಬೆಳ್ಳಿಯ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ.
ಅರ್ಚಕರು ಇಂದು ಬೆಳಗ್ಗೆ ದೇವಾಲಯದ ಬಾಗಿಲು ತೆರೆಯಲು ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಳವುಗೈಯ್ಯಲಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





