ಉಪ್ಪಿನಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣದ ಆರೋಪಿಗೆ ಜಾಮೀನು
ಉಪ್ಪಿನಂಗಡಿ, ಜೂ. 15: ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯಾಗಿದ್ದ ಪುತ್ತೂರು ನಿವಾಸಿ ಶೇಖ್ ಜಲೀಲ್ ಎಂಬಾತನಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.'
ಬಿಳಿಯೂರು ಬಳಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದಾಗ ಅಲ್ಲಿಂದ ಲಾರಿಯೊಂದರಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿರುವ ಪ್ರಕರಣ ಪತ್ತೆಯಾಗಿತ್ತು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಲಾರಿ ಚಾಲಕ ಮತ್ತು ಮಾಲಕ ಶೇಖ್ ಜಲೀಲ್ ಈ ಸಂದರ್ಭ ತಲೆಮರೆಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈತನಿಗೆ ಮಂಗಳೂರು ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಆರೋಪಿಯ ಪರವಾಗಿ ನ್ಯಾಯವಾದಿಗಳಾದ ಅನಿಲ್ ಕುಮಾರ್ ಉಪ್ಪಿನಂಗಡಿ ಹಾಗೂ ಸಂದೇಶ್ ನಟ್ಟಿಬೈಲ್ ವಾದಿಸಿದರು.
Next Story





