ಸಂಪುಟ ಪುನರ್‌ರಚನೆ ಅನಿವಾರ್ಯ: ಸಿಎಂ
ಸಚಿವರ ಸಹಕಾರಕ್ಕೆ ಮನವಿ

ಬೆಂಗಳೂರು, ಜೂ.15: ರಾಜ್ಯ ಸರಕಾರವು ಮೂರು ವರ್ಷಗಳನ್ನು ಪೂರೈಸಿರುವುದರಿಂದ ಸಚಿವ ಸಂಪುಟ ಪುನರ್‌ರಚನೆ ಅನಿವಾರ್ಯ. ಆದುದರಿಂದ, ಎಲ್ಲ ಸಚಿವರು ಇದಕ್ಕೆ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಮಂತ್ರಿಪರಿಷತ್ ಸಭೆಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ, ವಿಧಾನಸಭೆ ಚುನಾವಣೆಗೆ ಕೇವಲ ಎರಡು ವರ್ಷಗಳಿವೆ. ಆದುರಿಂದ, ಸಚಿವ ಸಂಪುಟದಿಂದ ಕೆಲವರನ್ನು ಕೈ ಬಿಟ್ಟು ಪಕ್ಷದ ಕೆಲಸಕ್ಕೆ ನಿಯೋಜನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.
ಸಚಿವ ಸಂಪುಟದಲ್ಲಿ ಯಾರು ಯಾರು ಮುಂದುವರೆಯುತ್ತಾರೋ, ಯಾರು ಯಾರು ಸಚಿವ ಸ್ಥಾನ ತ್ಯಜಿಸಿ ಪಕ್ಷದ ಕೆಲಸಕ್ಕೆ ನಿಯೋಜಿಸಲ್ಪಡುತ್ತಾರೋ ಎಂಬುದನ್ನು ಈ ಹಂತದಲ್ಲಿ ಹೇಳಲು ಸಾಧ್ಯವಿಲ್ಲ. ಹೈಕಮಾಂಡ್ ನಿರ್ದೇಶನದಂತೆ ಈ ಪ್ರಕ್ರಿಯೆ ನಡೆಯಲಿದೆ. ಆದುದರಿಂದ, ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿರುವಂತೆ ಸಚಿವರಿಗೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಯ ಬೆಂಬಲಕ್ಕೆ ನಿಂತ ಸಚಿವರು:
ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಶಿಮ್ಲಾ ಪ್ರವಾಸದಲ್ಲಿದ್ದು, ಗುರುವಾರ ಹೊಸದಿಲ್ಲಿಗೆ ಹಿಂದಿರುಗಲಿದ್ದಾರೆ. ಆನಂತರ ಅನಾರೋಗ್ಯಪೀಡಿತವಾಗಿರುವ ತಮ್ಮ ತಾಯಿಯನ್ನು ಭೇಟಿಯಾಗಲು ಸೋನಿಯಾ 15 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ.
ಹೈಕಮಾಂಡ್ ಭೇಟಿಗೆ ಕಾಲಾವಕಾಶ ಸಿಕ್ಕರೆ ಸಿದ್ದರಾಮಯ್ಯ ಗುರುವಾರ ಹೊಸದಿಲ್ಲಿಗೆ ತೆರಳಿ ಸಚಿವ ಸಂಪುಟ ಪುನರ್‌ರಚನೆಗೆ ಅನುಮತಿ ಪಡೆಯಲು ನಿರ್ಧರಿಸಿದ್ದಾರೆ. ಒಂದು ವೇಳೆ ಸೋನಿಯಾ ಭೇಟಿಗೆ ಅವಕಾಶ ಸಿಗದಿದ್ದರೆ ಸಚಿವ ಸಂಪುಟ ಪುನರ್‌ರಚನೆ ಪ್ರಕ್ರಿಯೆಯೂ ವಿಧಾನಮಂಡಲದ ಮುಂಗಾರು ಅಧಿವೇಶನ ಮುಕ್ತಾಯ ವಾಗುವವರೆಗೆ ಸ್ಥಗಿತಗೊಳ್ಳಲಿದೆ.
ಹೈಕಮಾಂಡ್ ಬೇಟಿಗೆ ಕಾಲಾವಕಾಶ ಸಿಕ್ಕರೆ ಸಿದ್ದರಾಮಯ್ಯ ಗುರುವಾರ ಹೊಸದಿಲ್ಲಿಗೆ ತೆರಳಿ ಸಚಿವ ಸಂಪುಟ ಪುನರ್‌ರಚನೆಗೆ ಅನುಮತಿ ಪಡೆಯಲು ನಿರ್ದರಿಸಿದ್ದಾರೆ. ಒಂದು ವೇಳೆ ಸೋನಿಯಾ ಭೇಟಿಗೆ ಅವಕಾಶ ಸಿಗದಿದ್ದರೆ ಸಚಿವ ಸಂಪುಟ ಪುನರ್‌ರಚನೆ ಪ್ರಕ್ರಿಯೆಯೂ ವಿಧಾನಮಂಡಲದ ಮುಂಗಾರು ಅಧಿವೇಶನ ಮುಕ್ತಾಯ ವಾಗುವವರೆಗೆ ಸ್ಥಗಿತಗೊಳ್ಳಲಿದೆ.
ಕೆಪಿಸಿಸಿ ಅಧ್ಯಕ್ಷನಾಗುವ ಆಸೆಯಿಲ್ಲ. ಪಕ್ಷದಲ್ಲಿ ಈಗಾಗಲೆ ಬಹುತೇಕ ಎಲ್ಲ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಸಚಿವ ಸ್ಥಾನ ಸಿಕ್ಕಿದ್ದು ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ. ಸಚಿವ ಸಂಪುಟದಲ್ಲಿ ಯಾರಿಗೆ ಅವಕಾಶ ನೀಡಬೇಕು, ಕೈ ಬಿಡಬೇಕು ಎಂಬುದು ಮುಖ್ಯಮಂತ್ರಿಯ ಪರಮಾಧಿಕಾರ.
-ವಿ.ಶ್ರೀನಿವಾಸ್‌ಪ್ರಸಾದ್, ಕಂದಾಯ ಸಚಿವ
ಮಂತ್ರಿಪರಿಷತ್ ಸಭೆಯಲ್ಲಿ ನಿಗದಿತ ವಿಷಯಗಳ ಕುರಿತು ಮಾತ್ರ ಚರ್ಚೆಯಾಗಿದೆ. ಸರಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ ಬಗ್ಗೆ ಚರ್ಚೆಯಾಗಿದೆ. ಸಚಿವ ಸಂಪುಟ ಪುನರ್‌ರಚನೆ ಬಗ್ಗೆ ಚರ್ಚೆ ಆಗಿಲ್ಲ. ಮುಖ್ಯಮಂತ್ರಿ ಯಾವ ಸಚಿವರ ರಾಜೀನಾಮೆಯನ್ನು ಕೇಳಿಲ್ಲ.
-ಆರ್.ವಿ.ದೇಶಪಾಂಡೆ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ







