Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ದಿನೇ ದಿನೇ ಹೆಚ್ಚುತ್ತಿದೆ...

ಬೆಳ್ತಂಗಡಿ: ದಿನೇ ದಿನೇ ಹೆಚ್ಚುತ್ತಿದೆ ಡೆಂಗ್ ಪೀಡಿತರ ಸಂಖ್ಯೆ

ವಾರ್ತಾಭಾರತಿವಾರ್ತಾಭಾರತಿ15 Jun 2016 7:52 PM IST
share
ಬೆಳ್ತಂಗಡಿ: ದಿನೇ ದಿನೇ ಹೆಚ್ಚುತ್ತಿದೆ ಡೆಂಗ್ ಪೀಡಿತರ ಸಂಖ್ಯೆ

ಬೆಳ್ತಂಗಡಿ, ಜೂ.15: ತಾಲೂಕಿನಾದ್ಯಂತ ಮಾರಣಾಂತಿಕವಾದ ಡೆಂಗ್ ಜ್ವರ ಹರಡುತ್ತಿದ್ದು ಪ್ರತಿನಿತ್ಯ ನೂರಾರು ಜನರು ಜ್ವರ ಪೀಡಿತರಾಗಿ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜ್ವರ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇವರಲ್ಲಿ ಹೆಚ್ಚಿನವರು ಡೆಂಗ್ ಪೀಡಿತರೇ ಆಗಿದ್ದಾರೆ ಎಂಬುದು ಅಪಾಯಕಾರಿ ವಿಚಾರವಾಗಿದೆ. ತಾಲೂಕಿನಲ್ಲಿ ಈಗಾಗಲೆ ಇಬ್ಬರು ಶಂಕಿತ ಡೆಂಗ್ ಜ್ವರಕ್ಕೆ ಬಲಿಯಾಗಿದ್ದಾರೆ. ಇದು ಜನರ ಭಯ ಹೆಚ್ಚಿಸಲು ಕಾರಣವಾಗಿದೆ.

ತಾಲೂಕಿನಲ್ಲಿ ಮೇ ವರೆಗೆ 35 ಪ್ರಕರಣಗಳು ದಾಖಲಾಗಿತ್ತು. ಇದೀಗ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ 66 ಮಂದಿ ಜ್ವರ ಪೀಡಿತರು ಚಿಕಿತ್ಸೆ ಪಡೆಯುತ್ತಿದ್ದು 22 ಮಂದಿ ಡೆಂಗ್ ಪೀಡಿತರಾಗಿದ್ದಾರೆ ಎಂಬುದು ಖಚಿತಗೊಂಡಿದೆ. ಇದು ಸರಕಾರಿ ಆಸ್ಪತ್ರೆಯ ದಾಖಲೆಯಾದರೆ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ ರೋಗದಿಂದ ಚಿಕಿತ್ಸೆ ಪಡೆದಿರುವವರ ಲೆಕ್ಕ ಯಾರ ಬಳಿಯೂ ಇಲ್ಲವಾಗಿದೆ. ಇದನ್ನು ಸಂಗ್ರಹಿಸುವ ಅಥವಾ ಡೆಂಗ್ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಯಾವುದೇ ಪ್ರಯತ್ನಗಳು ನಡೆದಿಲ್ಲ.

ಆರಂಭದಲ್ಲೇ ಡೆಂಗ್ ಪತ್ತೆಯಾಗಿರುವ ಪ್ರಕರಣಗಳಲ್ಲಿ ರೋಗಿಗಳು ಬೇಗನೆ ಗುಣಮುಖರಾಗುತ್ತಿದ್ದಾರೆ. ಆದರೆ ಆರಂಭದಲ್ಲಿ ರೋಗ ಪತ್ತೆಯಾಗದಿದ್ದರೆ ಚಿಕಿತ್ಸೆಗೆ ತೊಂದರೆಯಾಗುತ್ತಿದ್ದು ರೋಗ ತೀವ್ರ ಸ್ಥಿತಿಗೆ ತಲುಪಿರುವ ಹಲವರು ಈಗಾಗಲೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ತಾಲೂಕಿನಲ್ಲಿ ನಾವೂರು ಪ್ರದೇಶದಲ್ಲಿ ಅತ್ಯಂತ ಹೆಚ್ಚಾಗಿ ಡೆಂಗ್ ಜ್ವರ ಕಾಣಿಸಿಕೊಂಡಿದ್ದು, ಈಗಾಗಲೆ ಆರೋಗ್ಯ ಇಲಾಖೆಯ ವತಿಯಿಂದ ಗ್ರಾಮ ಪಂಚಾಯತಿನ ಸಹಕಾರದೊಂದಿಗೆ ಶುಚಿತ್ವ ಹಾಗೂ ಫಾಗಿಂಗ್ ಮಾಡಲಾಗಿದೆ. ಅದೇ ರೀತಿ ಡೆಂಗ್ ಪ್ರಕರಣಗಳು ದಾಖಲಾಗಿರುವ ವೇಣೂರು, ಹತ್ಯಡ್ಕ ಪ್ರದೇಶಗಳಲ್ಲಿಯೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಲೂಕಿನ ವಿವಿದೆಡೆಗಳಲ್ಲಿ ಡೆಂಗ್‌ನೊಂದಿಗೆ ಮಲೇರಿಯಾ ಜ್ವರವೂ ಹರಡುತ್ತಿದೆ. ಜ್ವರ ಪೀಡಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದ್ದರೂ ಯಾವುದೇ ಸಮರ್ಪಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬರುತ್ತಿದೆ.

ಮಳೆಗಾಲ ಆರಂಭಗೊಂಡು 15 ದಿನಗಳೇ ಕಳೆದಿದ್ದರೂ ಇನ್ನೂ ಸರಿಯಾಗಿ ಮಳೆ ಬಾರದಿರುವುದು ಸೊಳ್ಳೆಗಳ ಬೆಳವಣಿಗೆಗೆ ಪೂರಕವಾಗಿದ್ದು ಇದರಿಂದಾಗಿ ಸಾಂಕ್ರಮಿಕ ರೋಗಗಳು ಅತ್ಯಂತ ತೀವ್ರವಾಗಿ ಹರಡುತ್ತಿವೆ. ಈ ಹಿನ್ನಲೆಯಲ್ಲಿ ಇನ್ನೂ ಕೆಲ ದಿನಗಳ ಕಾಲ ಈ ರೋಗಗಳು ನಿಯಂತ್ರಣಕ್ಕೆ ಬರುವುದು ಕಷ್ಟ ಎನ್ನುವುದು ತಜ್ಞರ ಅಭಿಪ್ರಾಯ.

ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ಸೊಳ್ಳೆಗಳಿಂದ ಹರಡುವ ಈ ರೋಗಗಳು ಅತ್ಯಂತ ವೇಗವಾಗಿ ಹರಡುತ್ತಿದೆ. ಇಬ್ಬರು ಮೂವರು ಡೆಂಗ್ ಪೀಡಿತರು ಇರುವ ಮನೆಗಳು ಸಾಕಷ್ಟಿವೆ. ಇಲ್ಲಿರುವ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಪ್ರತಿನಿತ್ಯ ಲಭ್ಯರಿಲ್ಲದ ಹಿನ್ನಲೆಯಲ್ಲಿ ಗ್ರಾಮೀಣ ಪ್ರದೇಶಗಳ ರೋಗಿಗಳು ಚಿಕಿತ್ಸೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನೇ ಅವಲಂಬಿಸಬೇಕಾಗಿದೆ. ಖಾಸಗಿ ಆಸ್ಪತ್ರೆಗಳು ಮನಬಂದಂತೆ ರೋಗಿಗಳಿಂದ ಹಣ ವಸೂಲಿ ಮಾಡುತ್ತಿರುವ ಬಗ್ಗೆಯೂ ದೂರುಗಳು ಕೇಳಿಬರುತ್ತಿದೆ. ತಾಲೂಕಿನ ಯಾವುದೇ ಆಸ್ಪತ್ರೆಗೆ ಹೋದರೂ ಜ್ವರ ಪೀಡಿತರ ಗುಂಪೇ ಕಾಣಸಿಗುತ್ತದೆ.

ಪರಿಸ್ಥಿತಿ ನಿಯಂತ್ರಣದಲ್ಲಿ ಆರೋಗ್ಯಾಧಿಕಾರಿ

ತಾಲೂಕಿನಲ್ಲಿ ಡೆಂಗ್ ಜ್ವರ ಕಾಣಿಸಿಕೊಂಡಿದ್ದರೂ ನಿಯಂತ್ರಣದಲ್ಲಿದೆ. ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜೂ.16 ರಿಂದ 25ರ ವರೆಗೆ ಇಲಾಖೆಯ ವತಿಯಿಂದ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಾರ್ವಜನಿಕರು ರೋಗ ಹರಡದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ.

-ಡಾ.ಕಲಾಮಧು, ತಾಲೂಕು ಆರೋಗ್ಯಾಧಿಕಾರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X