ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ: ಸವಾರ ಸಾವು

ಮಂಗಳೂರು, ಜೂ. 15: ರಸ್ತೆ ದಾಟಲು ವಿಭಜಕದ ಬಳಿ ನಿಂತಿದ್ದ ದ್ವಿಚಕ್ರ ವಾಹನವೊಂದಕ್ಕೆ ಕಾರೊಂದು ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.
ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ರಾಜೇಂದ್ರ ಎಂಬವರು ಸುರತ್ಕಲ್ ಸಮೀಪದ ಹೊನ್ನಕಟ್ಟೆ ಜಂಕ್ಷನ್ ಬಳಿ ರಸ್ತೆ ದಾಟಲು ವಿಭಜಕದ ಬಳಿ ನಿಂತಿದ್ದರು. ಈ ಸಂದರ್ಭದಲ್ಲಿ ಸುರತ್ಕಲ್ ಕಡೆಯಿಂದ ಧಾವಿಸಿದ ಕಾರು ಢಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ದ್ವಿಚಕ್ರ ವಾಹನ ಸವಾರ ರಾಜೇಂದ್ರ ವಾಹನ ಸಮೇತ ರಸ್ತೆಗೆ ಅಪ್ಪಳಿಸಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರು ಚಾಲಕ ದಿನೇಶ್‌ನ ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದ್ದು, ರಾಜೇಂದ್ರರ ಸಹೋದರ ನೀಡಿದ ದೂರಿನಂತೆ ಸುರತ್ಕಲ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





