Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಳೆಗಾಲದಲ್ಲಿ ಕೆಸರು ಗುಂಡಿಯಾಗಿ...

ಮಳೆಗಾಲದಲ್ಲಿ ಕೆಸರು ಗುಂಡಿಯಾಗಿ ಪರಿಣಮಿಸುವ ಪ್ರತಿಷ್ಠಿತ ಬಡಾವಣೆಯ ರಸ್ತೆಗಳು!

ನಾಗರಿಕರ ದೂರು

ವಾರ್ತಾಭಾರತಿವಾರ್ತಾಭಾರತಿ15 Jun 2016 11:19 PM IST
share

ಶಿವಮೊಗ್ಗ, ಜೂ.15: ನಗರದ ಸವಳಂಗ ರಸ್ತೆಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಬಡಾವಣೆಯಲ್ಲಿನ ರಸ್ತೆಗಳು ಡಾಂಬರೀಕರಣಗೊಳ್ಳದ ಹಿನ್ನೆಲೆಯಲ್ಲಿ, ಮಳೆಗಾಲದ ವೇಳೆ ಅಕ್ಷರಶಃ ಕೆಸರು ಗುಂಡಿಯಾಗಿ ಮಾರ್ಪಾಡಾಗಿ, ನಾಗರಿಕರು ಓಡಾಡಲು ಹರಸಾಹಸ ಪಡುವಂತಾಗಿದೆ. ರಸ್ತೆ ಅವ್ಯವಸ್ಥೆ ಸರಿಪಡಿಸುವಂತೆ ಮಹಾನಗರ ಪಾಲಿಕೆ ಆಡಳಿತಕ್ಕೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಸ್ಥಳೀಯರೊಬ್ಬರು ಈ ರಸ್ತೆಗಳ ಅವ್ಯವಸ್ಥೆಯ ಬಗ್ಗೆ ಸಚಿತ್ರ ಮಾಹಿತಿ ಹಾಕಿದ್ದು, ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮಕೈಗೊಳ್ಳುವಂತೆ ಸ್ಥಳಿಯಾಡಳಿತಕ್ಕೆ ಒತ್ತಾಯಿಸಿದ್ದಾರೆ. ಲಾಲ್ ಬಹದ್ದೂರ್ ಶಾಸ್ತ್ರಿ ಬಡಾವಣೆಯು ನಗರದ ಪ್ರತಿಷ್ಠಿತ ಬಡಾವಣೆಗಳಲ್ಲೊಂದಾಗಿದೆ. ಮುಖ್ಯ ರಸ್ತೆಗಳು ಡಾಂಬರೀಕರಣಗೊಂಡಿವೆ. ಆದರೆ ಬಡಾವಣೆಯ ಹಲವು ಅಡ್ಡ ರಸ್ತೆಗಳು ಇಲ್ಲಿಯವರೆಗೂ ಡಾಂಬರೀಕರಣಗೊಂಡಿಲ್ಲ. ಗುಂಡಿ-ಗೊಟರುಗಳು ಬಿದ್ದಿವೆ. ಮಳೆಗಾಲದ ವೇಳೆ ಮಳೆ ನೀರು ನಿಂತುಕೊಂಡು ಸಾರ್ವಜನಿಕರು, ವಾಹನ ಸಂಚಾರ ಅಸಾಧ್ಯವಾಗಿ ಪರಿಣಮಿಸುತ್ತಿದೆ ಎಂದು ನಾಗರಿಕರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಜಿಗುಟು ಮಣ್ಣಿನ ರಸ್ತೆಗಳಾಗಿರುವುದರಿಂದ ಕೊಂಚ ಮಳೆಯಾದರೂ ಓಡಾಡಲು ಸಾಧ್ಯವಾಗುವುದಿಲ್ಲ. ಈ ಕುರಿತಂತೆ ವಾರ್ಡ್ ಕಾರ್ಪೋರೇಟರ್‌ರವರ ಗಮನಕ್ಕೆ ತರಲಾಗಿದೆ. ಅವರು ತಮ್ಮ ವಾರ್ಡ್ ವ್ಯಾಪ್ತಿ ವಿಶಾಲವಾಗಿದ್ದು, ಸೀಮಿತ ಅನುದಾನದಲ್ಲಿ ಎಲ್ಲೆಡೆ ಕೆಲಸ ಮಾಡಲು ಆಗುತ್ತಿಲ್ಲವೆಂದು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ ಎಂದು ನಾಗರಿಕರು ತಿಳಿಸಿದ್ದಾರೆ. ಮೂಲಸೌಕರ್ಯ ಕಲ್ಪಿಸುವುದು ಪಾಲಿಕೆ ಆಡಳಿತದ ಜವಾಬ್ದಾರಿಯಾಗಿದೆ. ಇದಕ್ಕಾಗಿಯೇ ನಾಗರಿಕರಿಂದ ತೆರಿಗೆ ಕೂಡ ವಸೂಲಿ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಬಡಾವಣೆಗೆ ಖುದ್ದು ಭೆೇಟಿಯಿತ್ತು ರಸ್ತೆಗಳ ಅವ್ಯವಸ್ಥೆ ಸರಿಪಡಿಸಬೇಕು. ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಕ್ರಮಕೈಗೊಳ್ಳಬೇಕು ಎಂದು ಬಡಾವಣೆಯ ನಿವಾಸಿಗಳು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X