ಪುತ್ತೂರು: ತೆಂಗಿನಮರ ಬಿದ್ದು ಮನೆಗೆ ಹಾನಿ

ಪುತ್ತೂರು, ಜೂ.16: ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ತೆಂಗಿನ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು ಮನೆಗೆ ಹಾನಿಯಾದ ಘಟನೆ ಬುಧವಾರ ರಾತ್ರಿ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕುಂಜೂರು ಪಂಜ ಎಂಬಲ್ಲಿ ನಡೆದಿದೆ.
ಕುಂಜೂರು ಪಂಜದ ದಿ. ಇಬ್ರಾಹೀಂ ಎಂಬವರ ಪತ್ನಿ ಕೈಜಮ್ಮ ಎಂಬವರ ಮನೆಗೆ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಮನೆಯ ಅಂಗಳದಲ್ಲಿದ್ದ ತೆಂಗಿನ ಮರ ಬುಡಸಮೇತ ಉರುಳಿ ಬಿದ್ದಿದೆ. ಇದರಿಂದಾಗಿ ಮನೆ ಹಿಂಭಾಗಕ್ಕೆ ಭಾಗಶ: ಹಾನಿಯಾಗಿದ್ದು ಸುಮಾರು 50 ಸಾವಿರ ರೂ. ನಷ್ಟ ಸಂಭವಿಸಿದೆ.
ಸ್ಥಳಕ್ಕೆ ಆರ್ಯಾಪು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಸಂತ ಶ್ರೀದುರ್ಗಾ, ತಾ.ಪಂ. ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ಗ್ರಾಮಕರಣಿಕ ಕನಕರಾಜ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Next Story





