Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ: ಅಧಿಕಾರಿಗಳ ಬೆವರಿಳಿಸಿದ ಸಚಿವ...

ಉಳ್ಳಾಲ: ಅಧಿಕಾರಿಗಳ ಬೆವರಿಳಿಸಿದ ಸಚಿವ ಯು.ಟಿ. ಖಾದರ್

ಬ್ರೇಕ್ ವಾಟರ್ ಕಾಮಗಾರಿ ಬಗ್ಗೆ ನಗರಸಭಾ ಸದಸ್ಯರ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ16 Jun 2016 8:13 PM IST
share
  • ಉಳ್ಳಾಲ: ಅಧಿಕಾರಿಗಳ ಬೆವರಿಳಿಸಿದ ಸಚಿವ ಯು.ಟಿ. ಖಾದರ್
  • ಉಳ್ಳಾಲ: ಅಧಿಕಾರಿಗಳ ಬೆವರಿಳಿಸಿದ ಸಚಿವ ಯು.ಟಿ. ಖಾದರ್

ಉಳ್ಳಾಲ, ಜೂ.16: ಈಗಾಗಲೇ ಉಳ್ಳಾಲ ಸಮುದ್ರತೀರದಲ್ಲಿ ಕಡಲ್ಕೊರೆತ ಶಾಶ್ವತ ತಡೆಯ ಬ್ರೇಕ್ ವಾಟರ್ ಕಾಮಗಾರಿ ನಡೆಯುತ್ತಿದ್ದು, ಯೋಜನೆಯ ನಿಯಮಕ್ಕೆ ವಿರುದ್ಧವಾಗಿ ನಾಲ್ಕನೆ ಹಂತದ ಮರಳು ತುಂಬಿದ ಮೂಟೆಗಳನ್ನು ಮುಂಚಿತವಾಗಿಯೇ ಕೋಟಿಗಟ್ಟಲೆ ರೂಪಾಯಿ ವ್ಯಯಿಸಿ ಸಮುದ್ರಕ್ಕೆ ಹಾಕಿದ್ದು, ಮೂಟೆಗಳ ಮರಳೆಲ್ಲಾ ಚೆಲ್ಲಿ ಗೋಣಿಚೀಲಗಳು ಸಮುದ್ರದಲ್ಲಿ ತೇಲುತ್ತಿವೆ. ಈ ಬಗ್ಗೆ ಯೋಜನೆಯ ಅಧಿಕಾರಿಗಳಲ್ಲಿ ಸ್ಥಳೀಯ ಕೌನ್ಸಿಲರ್ ಕೇಳಿದರೆ ಕುಡಿದು ಮಾತನಾಡಬೇಡಿ ಎಂದು ಗದರಿಸುತ್ತಾರೆಂದು ನಗರಸಭಾ ವಿರೋಧ ಪಕ್ಷದ ಸದಸ್ಯ ಇಸ್ಮಾಯೀಲ್ ಪೊಡಿಮೋನು ಗುರುವಾರ ಉಳ್ಳಾಲ ನಗರ ಸಭೆಯಲ್ಲಿ ಆರೋಪಿಸಿದ್ದು, ಈ ಬಗ್ಗೆ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆಯಿತು.

ಆರೋಗ್ಯ ಸಚಿವ ಯು.ಟಿ ಖಾದರ್ ಮಳೆಗಾಲದಲ್ಲಿ ಎದುರಾಗುವ ಆರೋಗ್ಯ, ರಸ್ತೆ, ಕಡಲ್ಕೊರೆತ, ಚರಂಡಿ, ಇನ್ನಿತರ ಸಮಸ್ಯೆಗಳನ್ನು ಎದುರಿಸುವ ಬಗ್ಗೆ ಉಳ್ಳಾಲ ನಗರಸಭೆಯಲ್ಲಿ ಗುರುವಾರ ಸಭೆಯನ್ನು ಕರೆದಿದ್ದರು.

ಉಳ್ಳಾಲ ನಗರಸಭಾ ವ್ಯಾಪ್ತಿಯ ರಸ್ತೆಗಳೆಲ್ಲಾ ಒಳಚರಂಡಿ(ಯುಜಿಡಿ)ಕಾಮಗಾರಿಯಿಂದ ಸಂಪೂರ್ಣವಾಗಿ ಕೆಟ್ಟು ಹೋಗಿದ್ದು, ಸಾರ್ವಜನಿಕರ ತೆರಿಗೆ ಹಣ ಪೋಲಾಗಿ ಹಲವು ವರ್ಷಗಳು ಉರುಳಿದರೂ ಕೂಡಾ ಅಧಿಕಾರಿಗಳು ಮಾತ್ರ ಕಾಮಗಾರಿಯನ್ನು ದಡ ಸೇರಿಸದೇ ಇರುವುದರ ಬಗ್ಗೆ ನಗರಸಭೆ ಅಧ್ಯಕ್ಷರೂ ಸೇರಿದಂತೆ ಕೌನ್ಸಿಲರ್‌ಗಳು ಸೇರಿ ಯುಜಿಡಿ ಅಧಿಕಾರಿಗಳನ್ನು ಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು.

ನಾಲ್ಕು ವರ್ಷಗಳ ಹಿಂದೆಯೇ ಉಳ್ಳಾಲದಲ್ಲಿ ಒಳಚರಂಡಿ ಕಾಮಗಾರಿ ಆರಂಭವಾಗಿದ್ದು ರಸ್ತೆ ಮಧ್ಯದಲ್ಲಿ ಅಗೆಸಿರುವ ಚೇಂಬರ್‌ನಿಂದಾಗಿ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆಗಳೆಲ್ಲಾ ಕೆಟ್ಟುಹೋಗಿದ್ದು, ಮಳೆಗಾಲದಲ್ಲಿ ಸಾರ್ವಜನಿಕರು ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುವಂತಾಗಿದೆ. ಈಗಾಗಲೇ ಹಲವಾರು ಮನೆಗಳಿಂದ ಒಳಚರಂಡಿಗೆ ತೆರಿಗೆಯನ್ನೂ ವಸೂಲಿ ಮಾಡಿದ್ದು, ಅವರಿಗೆ ಇನ್ನೂ ಒಳಚರಂಡಿ ಸಂಪರ್ಕ ನೀಡಲು ನಗರಸಭೆಯಿಂದ ಸಾಧ್ಯವಾಗಿಲ್ಲ.

ನಗರ ವ್ಯಾಪ್ತಿಯಲ್ಲಿ ಒಳಚರಂಡಿಯ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಇನ್ನೂ ಗುರುತಿಸದಿರುವುದು ಹಾಸ್ಯಾಸ್ಪದವಾಗಿದೆ. ಅಲ್ಲದೆ ಯುಜಿಡಿ ಕಾಮಗಾರಿಗೆ ಸಂಬಂಧಿಸಿದಂತೆ ಖಾಸಗಿ ವ್ಯಕ್ತಿಯೋರ್ವರು ನ್ಯಾಯಾಲಯದಲ್ಲಿ ಹೂಡಿದ ವ್ಯಾಜ್ಯವೂ ಕಾಮಗಾರಿ ವಿಳಂಬಕ್ಕೆ ಕಾರಣವಾಗಿದ್ದು, ಸಚಿವರು ಮಧ್ಯಪ್ರವೇಶಿಸಿ ಶೀಘ್ರನೆ ಕಾಮಗಾರಿ ಪೂರ್ತಿಗೊಳಿಸುವಂತೆ ನಗರಸಭಾ ಸದಸ್ಯ ಯು.ಎಚ್.ಫಾರೂಕ್ ಆಗ್ರಹಿಸಿದರು.

ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಮುಂದಿನ ರವಿವಾರವೇ ಎಲ್ಲಾ ವಾರ್ಡ್‌ಗಳ ಸದಸ್ಯರೂ ಮುಂದಾಳತ್ವ ವಹಿಸಿ ತಮ್ಮ ಕ್ಷೇತ್ರಗಳನ್ನು ಸ್ವಚ್ಛಗೊಳಿಸಿ, ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುವ ಯಾವುದೇ ಕಾಮಗಾರಿಯ ಕಡೆ ತೆರಳಿ ಅದಕ್ಕೆ ಸಂಬಂಧ ಪಟ್ಟವರಲ್ಲಿಯೇ ಪ್ರದೇಶವನ್ನು ಸ್ವಚ್ಛಗೊಳಿಸಿ ಎಂದು ಸಚಿವ ಯು.ಟಿ ಖಾದರ್ ಸಭೆಯಲ್ಲಿ ಆದೇಶಿಸಿದರು.

ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಚಿತ್ರಾ, ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಫತಾಕ್, ಪೌರಾಯುಕ್ತೆ ರೂಪಾ ಟಿ. ಶೆಟ್ಟಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X