ಮುಂಡಗೋಡ: ಕೂಲಿ ಕಾರ್ಮಿಕರನ್ನು ಕರೆಯೊಯ್ಯುತ್ತಿದ್ದ ವಾಹನ ಪಲ್ಟಿ; ಹಲವು ಮಂದಿಗೆ ಗಾಯ

ಮುಂಡಗೋಡ, ಜೂ.16: ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಮಹೇಂದ್ರ ಪಿಕಪ್ ವಾಹನ ಉರಳಿಬಿದ್ದು ಹಲವು ಕಾರ್ಮಿಕರು ಗಾಯಗೊಂಡ ಘಟನೆ ತಾಲೂಕಿನ ಹಾರೋಳ್ಳಿ ಗ್ರಾಮದ ಬಳಿ ಇಂದು ಮುಂಜಾನೆ ಸಂಭವಿಸಿದೆ.
ಕಾರ್ಮಿಕರೆಲ್ಲರೂ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಯಲಿವಾಳ ಹಾಗು ಆರೆಗೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ.
ವಾಹನದಲ್ಲಿ ಸುಮಾರು 40 ಜನ ಕಾರ್ಮಿಕರಿದ್ದು, ಯಲ್ಲಾಪುರ ತಾಲೂಕಿನ ಮಾವಿನಕಟ್ಟೆ ಹೆಗಡೆ ತೋಟಕ್ಕೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು ಎಂದು ಹೇಳಲಾಗಿದೆ.
ಅಪಘಾತದಲ್ಲಿ 23ಕ್ಕೂ ಅಧಿಕ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ವಾಹನ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಮುಂಡಗೋಡ ತಹಶೀಲ್ದಾರ್ ಅಶೋಕ ಗುರಾಣಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
Next Story





