ಜೂ.17ರಿಂದ ಪೊಲೀಸ್ ಸಿಬ್ಬಂದಿಗೆ ತುಳು ಭಾಷಾ ತರಬೇತಿ

ಮಂಗಳೂರು, ಜೂ. 16: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿಗೆ ಸುಲಲಿತವಾಗಿ ಕರ್ತವ್ಯ ನಿರ್ವಹಿಸಲು ತುಳು ಭಾಷೆ ಕಲಿಕಾ ತರಬೇತಿಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಜೂ.17ರಿಂದ ಆಯೋಜಿಸಲಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನುರಿತ ಭಾಷಾ ಭೋದಕರಿಂದ 10 ದಿನಗಳ ಕಾಲ ತರಬೇತಿಯನ್ನು ಆಯೋಜಿಸಲಾಗಿದೆ. ಸದ್ರಿ ಕಾರ್ಯಾಗಾರದಲ್ಲಿ ಮಂಗಳೂರು ನಗರ ಪೊಲೀಸ್‌ನ 22ಸಿಬ್ಬಂದಿ ಭಾಗವಹಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





