Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೇವು ಲೇಪಿತ ಯೂರಿಯಾದಿಂದ ರೈತರಿಗೆ ...

ಬೇವು ಲೇಪಿತ ಯೂರಿಯಾದಿಂದ ರೈತರಿಗೆ ಪ್ರಯೋಜನವಿಲ್ಲ: ಕೃಷಿ ಸಚಿವ ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ16 Jun 2016 11:20 PM IST
share
ಬೇವು ಲೇಪಿತ ಯೂರಿಯಾದಿಂದ ರೈತರಿಗೆ  ಪ್ರಯೋಜನವಿಲ್ಲ: ಕೃಷಿ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು, ಜೂ. 16: ಬೇವು ಲೇಪಿತ ಯೂರಿಯಾದಿಂದ ರೈತರಿಗೆ ಯಾವುದೇ ಪ್ರಯೋಜನವಿಲ್ಲ. ಆದರೆ, ಕೇಂದ್ರ ಸರಕಾರ ಬೇವು ಲೇಪಿತ ಯೂರಿಯಾ ಉತ್ಪಾದನೆಯಲ್ಲಿ ಕ್ರಾಂತಿ ಮಾಡಲಾಗಿದೆ ಎಂಬ ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಟೀಕಿಸಿದ್ದಾರೆ.
ಗುರುವಾರ ವಿಕಾಸಸೌಧದಲ್ಲಿ ತಮ್ಮ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೇವು ಲೇಪಿತ ಯೂರಿಯಾ ಬಗ್ಗೆ ಸುದ್ದಿವಾಹಿನಿಗಳಲ್ಲಿ ಪ್ರತೀ ಎರಡು ನಿಮಿಷಗಲಿಕ್ಕೊಮ್ಮೆ ಪ್ರಸಾರ ಮಾಡಲಾಗುತ್ತಿದ್ದು, ರೈತರ ಸಬ್ಸಿಡಿ ಹಣವನ್ನು ಬಳಕೆ ಮಾಡಲಾಗುತ್ತಿದೆ ಎಂದು ದೂರಿದರು.
ನಾಲ್ಕೈದು ವರ್ಷಗಳ ಹಿಂದೆಯೇ ಯೂರಿಯಾ ಗೊಬ್ಬರಕ್ಕೆ ಬೇವು ಲೇಪನ ಪ್ರಕ್ರಿಯೆ ಆರಂಭವಾಗಿದ್ದು, ಇದೀಗ ಅದು ಪೂರ್ಣ ಪ್ರಮಾಣದಲ್ಲಿ ಆಗಿದೆ ಎಂದ ಅವರು, ಬೇವು ಲೇಪನದಿಂದ ಕೃಷಿಯೇತರ ಚಟುವಟಿ ಕೆಗಳಿಗೆ ಯೂರಿಯಾ ಬಳಕೆ ತಡೆಗಟ್ಟಲಾಗಿದೆ. ಇದರಿಂದ ರೈತರಿಗೆ ಏನೂ ಲಾಭವಾಗಿಲ್ಲ ಎಂದು ವಿಶ್ಲೇಷಿಸಿದರು.
ಭೂಮಿ ನೀಡಲು ಸಿದ್ಧ: ಉತ್ತರ ಕರ್ನಾಟಕ ಭಾಗದಲ್ಲಿ ರಸಗೊಬ್ಬರ ಕಾರ್ಖಾನೆ ಆರಂಭಿಸಲು ಅಗತ್ಯ ಭೂಮಿ ನೀಡಲು ರಾಜ್ಯ ಸರಕಾರ ಸಿದ್ಧವಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಅನಂತ್ ಕುಮಾರ್ ಅವರಿಗೆ ಪತ್ರ ಬರೆದು ಭೂಮಿ ನೀಡುವ ಭರವಸೆ ನೀಡಿದ್ದಾರೆ. ಆದರೂ, ಕೇಂದ್ರ ಸಚಿವರು ರಾಜ್ಯ ಸರಕಾರದ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆಂದು ಅವರು ದೂರಿದರು.
ಮಾರುಕಟ್ಟೆ ವ್ಯವಸ್ಥೆಗೆ ಆದ್ಯತೆ: ಸಾವಯವ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ವಿಶೇಷ ಆದ್ಯತೆ ನೀಡಲಾಗಿದೆ. ಎರಡು ವರ್ಷಗಳಲ್ಲಿ 63 ಸಾವಿರ ಹೆಕ್ಟೇರ್ ಭೂಮಿಯನ್ನು ಸಾವಯವ ಕೃಷಿಗೆ ಒಳಪಡಿಸಲಾಗಿದೆ. ಕೆಎಂಎಫ್ ಮಾದರಿಯಲ್ಲೇ ರೈತರ ಒಕ್ಕೂಟ ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಕೃಷಿ ಹೊಂಡ: ಒಣಭೂಮಿ ಬೇಸಾಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ‘ಕೃಷಿಭಾಗ್ಯ’ ಯೋಜನೆಯಡಿ ಕೃಷಿ ಹೊಂಡ ತೆಗೆಸಲು ರೈತರಿಗೆ ನೆರವು ನೀಡುತ್ತಿದ್ದು, ಪ್ರಸಕ್ತ ಮುಂಗಾರು ಅವಧಿಗೆ ರಾಜ್ಯದಲ್ಲಿ 1ಲಕ್ಷ ಕೃಷಿ ಹೊಂಡಗಳು ನಿರ್ಮಾಣ ಆಗಲಿವೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರಿನಲ್ಲಿ ಬೆಳೆ ನಷ್ಟಕ್ಕೆ ಒಟ್ಟು 3,100 ಕೋಟಿ ರೂ.ಪರಿಹಾರ ನೀಡಿದ್ದು, ಹಿಂದಿನ ವರ್ಷಗಳಿಗೆ ಹೋಲಿಕೆ ಮಾಡಿದರೆ ಅತ್ಯಂತ ಹೆಚ್ಚು ಮೊತ್ತದ ಪರಿಹಾರವನ್ನು ಸಮರ್ಪಕವಾಗಿ ರೈತರಿಗೆ ವಿತರಣೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
‘ಫಸಲ್ ಬಿಮಾ’ಗೆ ಚಾಲನೆ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಇದಕ್ಕೆ 670 ಕೋಟಿ ರೂ.ಗಳನ್ನು ಮೀಸಲಿರಿಸ ಲಾಗಿದೆ. ಶೇ.25ರಷ್ಟು ರೈತರನ್ನು ಕೃಷಿ ಬೆಲೆ ವಿಮಾ ಯೋಜನೆಗೆ ಒಳಪಡಿಸಲು ಉದ್ದೇಶಿಸಲಾಗಿದೆ ಎಂದರು.

 ‘ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಹಣ್ಣು ಮತ್ತು ತರಕಾರಿಗಳ ಬೆಲೆ ಹೆಚ್ಚಳವಾಗಿದ್ದು, ಇದಕ್ಕೆ ಇಂಧನ ಬೆಲೆ ಏರಿಕೆಯೂ ಕಾರಣ. ಇನ್ನು ಹದಿನೈದು-ಇಪ್ಪತ್ತು ದಿನಗಳಲ್ಲಿ ಹಣ್ಣು ಮತ್ತು ತರಕಾರಿ ಬೆಳೆಗಳ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಆಗುವುದು ನಿಶ್ಚಿತ’
-ಕೃಷ್ಣ ಬೈರೇಗೌಡ ಕೃಷಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X