ಮಂಗಳೂರು, ಜೂ.16: ಬುಧವಾರ ರಾತ್ರಿಯಿಂದ ಸುರಿದ ಮಳೆ ಹಾಗೂ ಗಾಳಿಗೆ ಮಂಗಳೂರು ತಾಲೂಕಿನ ನಾಲ್ಕು ಮನೆಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಮನೆಗಳು ಭಾಗಶಃ ಹಾನಿಯಾಗಿದ್ದು, ಸುಮಾರು 81,500 ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.