Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರದ ಹೊಸ ಆಮದು-ರಫ್ತು ನೀತಿಗೆ ಖಂಡನೆ...

ಕೇಂದ್ರದ ಹೊಸ ಆಮದು-ರಫ್ತು ನೀತಿಗೆ ಖಂಡನೆ ಜೂ.27ಕ್ಕೆ ರೈತರಿಂದ 13 ಜಿಲ್ಲೆಗಳ ಬಂದ್

ವಾರ್ತಾಭಾರತಿವಾರ್ತಾಭಾರತಿ16 Jun 2016 11:46 PM IST
share

ಬೆಂಗಳೂರು, ಜೂ.16: ಕೇಂದ್ರ ಸರಕಾರದ ಆಮದು-ರಫ್ತು ನೀತಿ ಖಂಡಿಸಿ ಜೂ.27ರಂದು ರಾಜ್ಯದಲ್ಲಿ ಪ್ರಮುಖವಾಗಿ ಅಡಿಕೆ ಮತ್ತು ತೆಂಗು ಬೆಳೆಯುವ 13 ಜಿಲ್ಲೆಗಳಲ್ಲಿ ರೈತರಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಿಳಿಸಿದೆ.
ಗುರುವಾರ ಇಲ್ಲಿನ ಗಾಂಧಿನಗರದಲ್ಲಿರುವ ಸೇನೆಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಜೂ.27ರಂದು ಹಾವೇರಿ, ಚಿಕ್ಕಮಗಳೂರು, ತುಮಕೂರು ಸೇರಿದಂತೆ ಪ್ರಮುಖವಾಗಿ ಅಡಿಕೆ ಮತ್ತು ತೆಂಗು ಬೆಳೆಯುವ ಪ್ರದೇಶಗಳ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳನ್ನು ಬಂದ್ ಮಾಡಲಾಗುವುದೆಂದು ಹೇಳಿದರು.
ಅಂದು ಹೆದ್ದಾರಿ ತಡೆ, ನಗರಗಳ ಪ್ರಮುಖ ರಸ್ತೆಗಳಲ್ಲಿ ರ್ಯಾಲಿ ಸೇರಿದಂತೆ ಇನ್ನಿತರೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದ ಅವರು, ಕಳೆದ ಸಾಲಿನಲ್ಲಿ ಅಡಿಕೆ ಬೆಲೆ ಹೆಚ್ಚಾಗಿತ್ತು. ಆದರೆ, ಇದೀಗ ಕೇಂದ್ರ ಸರಕಾರದ ಆಮದು ನೀತಿಯಿಂದ ಅಡಿಕೆ ಬೆಲೆ ಸಾಕಷ್ಟು ಕುಸಿದಿದೆ. ಅಲ್ಲದೆ, ಇಂತಹ ದುರಂತ ನಡೆದರೂ ಕೇಂದ್ರ ಮತ್ತು ರಾಜ್ಯ ಸರಕಾರಗಳು ಈ ಬೆಳೆಗಾರರಿಗೆ ಯಾವುದೇ ಪರಿಹಾರ ನೀಡಲು ಮುಂದಾಗಿಲ್ಲ ಎಂದು ಕಿಡಿಕಾರಿದರು.
ಹೊರ ದೇಶಗಳಿಂದ ಅಡಿಕೆ ಮತ್ತು ತೆಂಗು ಆಮದು ಮಾಡಿಕೊಳ್ಳುತ್ತಿರುವುದರಿಂದ ದೇಶದ ಉತ್ಪಾದನೆಗೆ ತೀವ್ರ ಹಿನ್ನಡೆಯಾಗಿದೆ ಎಂದ ಅವರು, ಕಳೆದ ಬಾರಿ ತೊಗರಿಬೇಳೆ ಕ್ವಿಂಟಾಲ್‌ಗೆ 4ರಿಂದ5 ಸಾವಿರ ರೂ.ಗಳಿಗೆ ರೈತರಿಂದ ಖರೀದಿಸಿ, ಚಿಲ್ಲರೆ ಮಾರುಕಟ್ಟೆಯಲ್ಲಿ 160 ರಿಂದ 180 ರೂ.ಗಳಿಗೆ ಮಾರಾಟ ಮಾಡಲಾಗುತ್ತಿತ್ತು. ಇಂತಹ ವ್ಯವಸ್ಥೆ ಗ್ರಾಹಕರ ಜೇಬಿಗೆ ಕತ್ತರಿ ಹಾಕುವುದಲ್ಲದೆ, ರೈತರಿಗೆ ನಷ್ಟ ಉಂಟು ಮಾಡುತ್ತಿದೆ ಎಂದು ದೂರಿದರು.
ಕೇಂದ್ರ ಸರಕಾರವು ಕರ್ನಾಟಕ ರಾಜ್ಯದ ರೈತರಿಗೆ ತೆಂಗು ಮತ್ತು ಅಡಿಕೆ ಬೆಳೆಯಲ್ಲಿ ಆಗಿರುವ ನಷ್ಟ ತುಂಬಿಕೊಡಲು ಮುಂದಾಗಬೇಕೆಂದು ರಾಜ್ಯ ಸರಕಾರ ಇನ್ನು ಮುಂದಾದರೂ ಕೇಂದ್ರಕ್ಕೆ ಒತ್ತಾಯಿಸಬೇಕೆಂದರು.
ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ಲಕ್ಷ್ಮಣಸ್ವಾಮಿ, ಕೆಂಚೇಗೌಡ ಸೇರಿ ಪ್ರಮುಖರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X