‘ಸಮಾನತೆಯ ಕಡೆಗೆ ನಮ್ಮ ನಡಿಗೆ’ ಜೂ.20ಕ್ಕೆ ಅಂಬೇಡ್ಕರ್ ಜನ್ಮ ಶತಮಾನೋತ್ಸವ
ಬೆಂಗಳೂರು, ಜೂ. 16: ‘ಸಮಾನತೆಯ ಕಡೆಗೆ ನಮ್ಮ ನಡಿಗೆ’ ಎಂಬ ಘೋಷಣೆಯೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೆ ಜನ್ಮ ವರ್ಷಾಚರಣೆ ಸಮಾರಂಭವನ್ನು ಜೂ.20ಕ್ಕೆ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಪ್ರಗತಿಪರ ಮಠಾಧೀಶರ ವೇದಿಕೆ ನೇತೃತ್ವದಲ್ಲಿ ಏರ್ಪಡಿಸಲಾಗಿದೆ.
ಸಮಾರಂಭದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೆರವೇರಿಸಲಿದ್ದು, ನೇತೃತ್ವವನ್ನು ಗದಗದ ತೋಂಟದಾರ್ಯ ಮಠದ ಡಾ.ತೋಂಟದ ಸಿದ್ಧಲಿಂಗ ಸ್ವಾಮಿ ವಹಿಸಲಿದ್ದಾರೆ. ಸಚಿವರಾದ ಜಯಚಂದ್ರ, ಎಚ್.ಕೆ.ಪಾಟೀಲ್, ಶ್ರೀನಿವಾಸ ಪ್ರಸಾದ್, ಶಾಮನೂರು ಶಿವಶಂಕರಪ್ಪ, ಮಹದೇವಪ್ಪ, ಕೆ.ಜೆ.ಜಾರ್ಜ್, ಖಮರುಲ್ ಇಸ್ಲಾಂ ಸಹಿತ ಇನ್ನಿತರ ಸಚಿವರು ಪಾಲ್ಗೊಳ್ಳಲಿದ್ದಾರೆ.
ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮಿ, ಒಕ್ಕಲಿಗರ ಮಠದ ಚಂದ್ರಶೇಖರ ಸ್ವಾಮಿ, ಬಾಗಲಕೋಟೆಯ ಬಸವರಾಜ ಪಟ್ಟದಾರ್ಯ ಸ್ವಾಮಿ, ಬೆಳಗಾವಿಯ ಡಾ.ಸಿದ್ದರಾಮ ಸ್ವಾಮಿ, ಬೇಲಿಮಠದ ಶಿವರುದ್ರ ಸ್ವಾಮಿ, ದಕ್ಷಿಣ ಕನ್ನಡ ಮೂಡುಬಿದಿರೆ ಜೈನಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸೇರಿದಂತೆ ನಾಡಿನ ವಿವಿಧ ಮಠದ ಪೀಠಾಧ್ಯಕ್ಷರು ಭಾಗವಹಿಸಲಿದ್ದಾರೆ.





