ಸೋನಿಯಾ ಗಾಂಧಿ ಭೇಟಿಯಾದ ಖರ್ಗೆ

ಬೆಂಗಳೂರು, ಜೂ. 17: ಲೋಕಸಭೆಯಲ್ಲಿ ಕಾಂಗ್ರೆಸ್ ನ ಸಂಸದೀಯ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಅವರ ನಿವಾಸದಲ್ಲಿ ಭೇಟಿಯಾದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಖರ್ಗೆ ಅವರ ಭೇಟಿ ಹೆಚ್ಚಿನ ಮಹತ್ವ ಪಡೆದಿದೆ.
ಲಭ್ಯ ಮಾಹಿತಿಯಂತೆ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆಂದು ಗೊತ್ತಾಗಿದೆ.
Next Story





