ಕಾಸರಗೋಡು: ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ ಪ್ರಕರಣಕ್ಕೆ ಹೊಸ ಸೇರ್ಪಡೆ

ಕಾಸರಗೋಡು, ಜೂ.17: ಕಾಸರಗೋಡು ಜಿಲ್ಲೆಯಲ್ಲಿ ಬ್ಯಾಂಕ್‌ಗಳಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷಾಂತರ ರೂ. ಸಾಲ ಪಡೆದು ವಂಚಿಸುವ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಿದ್ದು, ಈ ಸಾಲಿಗೆ ಮತ್ತೊಂದು ಪ್ರಕರಣ ಸೇರ್ಪಡೆಗೊಂಡಿದೆ.
ಇಲ್ಲಿನ ಪಿಲಿಕ್ಕೋಡು ಸೇವಾ ಸಹಕಾರಿ ಬ್ಯಾಂಕ್ ನಲ್ಲೂ ನಕಲಿ ಚಿನ್ನಾಭರಣ ಅಡವಿಟ್ಟು 70 ಲಕ್ಷ ರೂ. ಸಾಲ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮುಟ್ಟತ್ತೋಡಿ ಸೇವಾ ಸಹಕಾರಿ ಬ್ಯಾಂಕ್ನಲ್ಲಿ ನಾಲ್ಕು ಕೋಟಿ ರೂ.ಗಳ ವಂಚನೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಪಿಲಿಕ್ಕೋಡು ಬ್ಯಾಂಕ್ನಲ್ಲೂ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಬ್ಯಾಂಕ್‌ನ ಉನ್ನತ ಅಧಿಕಾರಿಗಳ ತಪಾಸಣೆಯ ವೇಳೆ ಕೃತ್ಯ ಬೆಳಕಿಗೆ ಬಂದಿದೆ.
ಈ ಮಧ್ಯೆ ಬ್ಯಾಂಕ್‌ನ ಮ್ಯಾನೇಜರ್ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳು ತಪಾಸಣೆಯನ್ನು ತೀವ್ರಗೊಳಿಸಿದ್ದು, ತನಿಖೆಯಿಂದ ಇನ್ನಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
Next Story





