ಸುಲ್ಕೇರಿ: ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಬೆಳ್ತಂಗಡಿ, ಜೂ.17: ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಎಲ್ಲರಂತೆ ಅವರೂ ಉನ್ನತ ಸ್ಥಾನಕ್ಕೇರಬೇಕು. ಅನುದಾನಿತ ಶಾಲೆಗೆ ಸರಕಾರದಿಂದ ಯಾವುದೇ ಸೌಲಭ್ಯಗಳು ಇಲ್ಲದಿರುವುದರಿಂದ ಉಚಿತ ಪುಸ್ತಕ ನೀಡುತ್ತಿದ್ದೇವೆ ಎಂದು ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎನ್. ಜೀವಂಧರ ಕುಮಾರ್ ಹೇಳಿದರು.
ಅವರು ಮಂಗಳವಾರ ಸುಲ್ಕೇರಿಯಲ್ಲಿರುವ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಂಘದ ವತಿಯಿಂದ ಬರೆಯುವ ಪುಸ್ತಕಗಳನ್ನು ಉಚಿತವಾಗಿ ವಿತರಿಸಿ ಶುಭ ಹಾರೈಸಿದರು.
ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷ ಸಂಜೀವ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀಧರ ಗೌಡ, ಸಹಕಾರ ಸಂಘದ ನಿರ್ದೇಶಕ ಸದಾನಂದ ಗೌಡ ಉಪಸ್ಥಿತರಿದ್ದರು.
Next Story





