Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇನ್‌ಲ್ಯಾಂಡ್ ವಿಂಡ್ಸರ್ಸ್‌ಗೆ ‘ಪರಿಸರ...

ಇನ್‌ಲ್ಯಾಂಡ್ ವಿಂಡ್ಸರ್ಸ್‌ಗೆ ‘ಪರಿಸರ ಶ್ರೇಷ್ಠತಾ’ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ17 Jun 2016 11:47 PM IST
share
ಇನ್‌ಲ್ಯಾಂಡ್ ವಿಂಡ್ಸರ್ಸ್‌ಗೆ ‘ಪರಿಸರ ಶ್ರೇಷ್ಠತಾ’ ಪ್ರಶಸ್ತಿ

ಮಂಗಳೂರು, ಜೂ.17: ನಗರ ಪುರಭವನದಲ್ಲಿ ಜಿಲ್ಲಾಡಳಿತ, ಮಂಗಳೂರು ಮಹಾನಗರಪಾಲಿಕೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಶ್ರಯದಲ್ಲಿ ಇಂದು ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ನಗರದ ಮೇರಿಹಿಲ್‌ನಲ್ಲಿರುವ ಪ್ರತಿಷ್ಠಿತ ವಸತಿ ಸಮುಚ್ಚಯ ‘ಇನ್‌ಲ್ಯಾಂಡ್ ಬಿಲ್ಡರ್ಸ್‌’ ಸಂಸ್ಥೆಯ ‘ಇನ್‌ಲ್ಯಾಂಡ್ ವಿಂಡ್ಸರ್ಸ್‌’ ಗೆ ‘ಪರಿಸರ ಶ್ರೇಷ್ಠತಾ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಇನ್‌ಲ್ಯಾಂಡ್ ಗ್ರೂಪ್‌ನ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಸಿರಾಜ್ ಅಹ್ಮದ್ ಮತ್ತು ನಿರ್ದೇಶಕ ವಹಾಜ್ ಯೂಸುಫ್ ಅವರಿಗೆ ರಾಜ್ಯ ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಪ್ರಶಸ್ತಿ ಪ್ರದಾನಿಸಿ, ಗೌರವಿಸಿದರು.

ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯಾದ ‘ಸುರಕ್ಷಾ ಪುರಸ್ಕಾರ್-2011’ನೊಂದಿಗೆ ಇನ್‌ಲ್ಯಾಂಡ್ ವಿಂಡ್ಸರ್ಸ್‌ ಪಡೆದ 6ನೆ ಪ್ರಶಸ್ತಿ ಇದಾಗಿದೆ. ಎನ್‌ಐಟಿಕೆಯ ಪ್ರೊ.ಜಿ.ಶ್ರೀನಿಕೇತನ್, ಕೆಸಿಸಿಐ ಅಧ್ಯಕ್ಷ ರಾಮ್‌ಮೋಹನ್ ಪೈ ಮಾರೂರು, ಜಿಲ್ಲಾ ಕೈಗಾರಿಕಾ ಜಂಟಿ ನಿರ್ದೇಶಕ ಗೋಕುಲ್‌ದಾಸ್ ನಾಯಕ್, ಪರಿಸರ ಇಲಾಖೆಯ ಪದ್ಮನಾಭ ಗೌಡ, ಕಾರ್ಖಾನೆಗಳು ಮತ್ತು ಬಾಯ್ಲರ್‌ಗಳ ಹಿರಿಯ ಉಪ ನಿರ್ದೇಶಕ ನಂಜಪ್ಪ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರತಿನಿಧಿ ಮೂರ್ತಿ, ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ರಾಜಶೇಖರ್ ಪುರಾಣಿಕ್ ಅವರನ್ನೊಳಗೊಂಡ ತೀರ್ಪುಗಾರರ ಸಮಿತಿಯು ‘ಇನ್‌ಲ್ಯಾಂಡ್ ವಿಂಡ್ಸರ್ಸ್‌’ ಕಟ್ಟಡವನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲನಗೌಡ ಪಾಟೀಲ್, ಶಾಸಕ ಮೊಯ್ದಿನ್ ಬಾವ, ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ, ಜಿಪಂ ಸಿಇಒ ಶ್ರೀವಿದ್ಯಾ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮನಪಾ ಆಯುಕ್ತ ಡಾ. ಎಚ್.ಎನ್.ಗೋಪಾಲಕೃಷ್ಣ, ಎಲ್.ನಾರಾಯಣಸ್ವಾಮಿ ಉಪಸ್ಥಿತರಿದ್ದರು.

‘ಇನ್‌ಲ್ಯಾಂಡ್ ವಿಂಡ್ಸರ್ಸ್‌’ನಲ್ಲಿ ಹಲವಾರು ಅತ್ಯಾಧುನಿಕ ಪರಿಸರ ಸ್ನೇಹಿ ತಂತ್ರಜ್ಞಾನಗಳು ಹಾಗೂ ಉಪಕರಣಗಳನ್ನು ಅಳವಡಿಸಲಾಗಿದೆ. ತ್ಯಾಜ್ಯ ಸಂಸ್ಕರಣಾ ಘಟಕ, ಮಳೆ ನೀರಿನ ಪುನರ್ಬಳಕೆ, ತ್ಯಾಜ್ಯ ನೀರಿನ ಪುನರ್ಬಳಕೆ, ಗಾರ್ಬೇಜ್ ಚೂಟ್‌ಗಳ ಮೂಲಕ ಘನತ್ಯಾಜ್ಯಗಳ ಸೂಕ್ತ ವಿಲೇವಾರಿ, ಎಲ್‌ಇಡಿ ಲೈಟ್‌ಗಳ ಬಳಕೆ ಹಾಗೂ ಕಟ್ಟಡದ ಸುತ್ತಮುತ್ತಲು ಸಾಕಷ್ಟು ಹಸಿರು- ಇವುಗಳ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಇನ್‌ಲ್ಯಾಂಡ್ ವಿಂಡ್ಸರ್ಸ್‌ ಕೊಡುಗೆಯನ್ನು ನೀಡುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ಸಿರಾಜ್ ಅಹ್ಮದ್ ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X