ಎಸೆಸೆಲ್ಸಿ ಪೂರಕ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ
ಮಂಗಳೂರು, ಜೂ.17: ಎಸೆಸೆಲ್ಸಿ ಪೂರಕ ಪರೀಕ್ಷೆಗಳು ಸುಗಮವಾಗಿ ನಡೆಯುವ ಹಿತದೃಷ್ಟಿಯಿಂದ ಜೂ.20 ರಿಂದ 27ರ ತನಕ ದ.ಕ.ಜಿಲ್ಲಾದ್ಯಂತ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯ ಸುತ್ತಳತೆಯಲ್ಲಿ 1973ರ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144ರಡಿ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆ ಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಯಾವುದೇ ವಸ್ತುಗಳನ್ನು ಹಂಚುವುದು/ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ.
Next Story





