ಕಾಶ್ಮೀರ: ಸೋಪೋರ್ನಲ್ಲಿ ಇಬ್ಬರು ಉಗ್ರರ ಹತ್ಯೆ
ಶ್ರೀನಗರ,ಜೂ.17: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪಟ್ಟಣದಲ್ಲಿ ಶುಕ್ರವಾರ ಭದ್ರತಾ ಪಡೆಗಳೊಂದಿಗಿನ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಕೊಲ್ಲಲ್ಪಟ್ಟಿದ್ದಾರೆ.
ಪಟ್ಟಣದ ಬೊಮಾಯಿ ಪ್ರದೇಶದಲ್ಲಿ ಉಗ್ರರು ಬಚ್ಚಿಟ್ಟುಕೊಂಡಿದ್ದಾರೆಂಬ ಮಾಹಿತಿ ಪಡೆದಿದ್ದ ಭದ್ರತಾ ಪಡೆಗಳು ಬೆಳಗ್ಗೆ ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದ್ದರು. ಮುಂದೊತ್ತಿ ಬರುತ್ತಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಕೊಲ್ಲಲ್ಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದರು.
ಗುಂಡಿನ ಕಾಳಗ ಅಂತ್ಯಗೊಂಡ ಬಳಿಕ ಸ್ಥಳೀಯ ನಿವಾಸಿಗಳು ಭದ್ರತಾ ಪಡೆಗಳ ಮೇಲೆ ಕಲ್ಲುತೂರಾಟ ನಡೆಸಿದ್ದರೆಂದು ಅವರು ತಿಳಿಸಿದರು.
ಗುರುವಾರ ಕುಪ್ವಾರಾ ಜಿಲ್ಲೆಯ ತಂಗಧಾರ್ನಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರು ಕೊಲ್ಲಲ್ಪಟ್ಟಿದ್ದರು. ಈ ಸಂದರ್ಭದಲ್ಲಿ ಓರ್ವ ಯೋಧ ಕೂಡ ಹುತಾತ್ಮನಾಗಿದ್ದ.
Next Story