Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯದಲ್ಲಿ ಜಿಲ್ಲಾಧಿಕಾರಿಯಿಂದ ಅಹವಾಲು...

ಸುಳ್ಯದಲ್ಲಿ ಜಿಲ್ಲಾಧಿಕಾರಿಯಿಂದ ಅಹವಾಲು ಸ್ವೀಕಾರ

ಗೋಮಾಳ ಜಮೀನು ಸಮಸ್ಯೆ ಪರಿಹಾರಕ್ಕೆ ಸಾರ್ವಜನಿಕರ ಮನವಿ

ವಾರ್ತಾಭಾರತಿವಾರ್ತಾಭಾರತಿ18 Jun 2016 6:25 PM IST
share
ಸುಳ್ಯದಲ್ಲಿ ಜಿಲ್ಲಾಧಿಕಾರಿಯಿಂದ ಅಹವಾಲು ಸ್ವೀಕಾರ

  ಸುಳ್ಯ: ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಸುಳ್ಯಕ್ಕೆ ಆಗಮಿಸಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಜಾಲ್ಸೂರು ಕೋನಡ್ಕ ಪದವಿನ ಸುಮಾರು 50ಕ್ಕೂ ಹೆಚ್ಚುಮಂದಿ ತಮ್ಮ ಅಹವಾಲನ್ನು ಡಿ.ಸಿ.ಯವರ ಮುಂದಿಟ್ಟರು. ತಾ.ಪಂ. ಸದಸ್ಯ ತೀರ್ಥರಾಮ ಜಾಲ್ಸೂರು, ಗ್ರಾ.ಪಂ. ಅಧ್ಯಕ್ಷೆ ಶಶಿಕಲಾ ನಾಯಕ್, ಮಾಜಿ ಅಧ್ಯಕ್ಷ ಭಾಸ್ಕರ, ಕನಕಮಜಲು ಗ್ರಾ.ಪಂ. ಸದಸ್ಯ ಪವಾಜ್‌ರವರ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಮಹಿಳೆಯರು ಆಗಮಿಸಿದ್ದರು. ಜಿಲ್ಲಾಧಿಕಾರಿಗೆ ಅಹವಾಲು ಸಲ್ಲಿಸಿದ ಫಲಾನುಭವಿಗಳು, ‘ಜಾಲ್ಸೂರು ಗ್ರಾಮದ ಕೋನಡ್ಕಪದವು ದೇವಸ್ಥಾನದ ಬಳಿ ಸುಮಾರು 33 ಕುಟುಂಬದವರು ಗೋಮಾಳಕ್ಕೆ ಮೀಸಲಾಗಿಟ್ಟ ಸ್ಥಳದಲ್ಲಿ ಹಲವು ವರ್ಷಗಳ ಹಿಂದೆ ಮನೆಗಳನ್ನು ಕಟ್ಟಿ ವಾಸವಾಗಿದ್ದು, ತಮಗೆ ಹಕ್ಕು ಪತ್ರ ಇದುವರೆಗೆ ಸಿಕ್ಕಿಲ್ಲ. 94 ಸಿಯಲ್ಲಿ ಅರ್ಜಿ ಸಲ್ಲಿಸಿದ್ದು, ಹಕ್ಕುಪತ್ರ ನೀಡಲು ಸಾಧ್ಯವಾಗುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದ್ದರಿಂದ ಈ ಕುರಿತು ಪರಿಶೀಲಿಸಿ ನಮಗೆ ಹಕ್ಕುಪತ್ರ ಕೊಡಿಸಬೇಕು’ ಎಂದು ಮನವಿ ಮಾಡಿದರು. ಇದು ಸರಕಾರದ ಮಟ್ಟದಲ್ಲಿ ಆಗಬೇಕಾಗಿರುವ ಪ್ರಕ್ರಿಯೆ ಯಾಗಿರುವುದರಿಂದ ನಾವು ಇಲ್ಲಿಂದ ನಿಮ್ಮ ಮನವಿ ಕಳುಹಿಸುವುದಾಗಿ ಹೇಳಿದರು. ಇಂತಹ ಪ್ರಕರಣಗಳು ತಾಲೂಕಿನಲ್ಲಿ ಎಲ್ಲೆಲ್ಲಿ ಇವೆಯೋ ಅದೆಲ್ಲವನ್ನು ಒಟ್ಟು ಸೇರಿಸಿ, ಕಳುಹಿಸಿಕೊಡುವಂತೆ ಉಪ ತಹಶೀಲ್ದಾರ್‌ರಿಗೆ ಜಿಲ್ಲಾಧಿಕಾರಿ ಆದೇಶಿಸಿದರು. ಆರ್.ಟಿ.ಇ. ಯಲ್ಲಿ ಆಯ್ಕೆಯಾಗಿ ಮೆಸೇಜ್ ಬಂದರೂ ಶಾಲೆಯಲ್ಲಿ ದಾಖಲಾತಿ ಮಾಡಿಕೊಳ್ಳದಿರುವ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ಹೇಳಿಕೊಂಡ ಘಟನೆಯೂ ನಡೆಯಿತು. ಶಾರಿಕ್ ಮೊಗರ್ಪಣೆ, ಮಜೀದ್, ಹಂಸ ಮೊದಲಾದವರ ನೇತೃತ್ವದಲ್ಲಿ ದೂರು ನೀಡಲಾಯಿತು. ಈ ದೂರಿನ ಹಿನ್ನಲೆಯಲ್ಲಿ ಡಿ.ಸಿ.ಯವರು ಬಿ.ಇ.ಒ. ಕೆಂಪಲಿಂಗಪ್ಪರನ್ನು ತಾಲೂಕು ಕಚೇರಿಗೆ ಕರೆಸಿಕೊಂಡು ವಿವರಣೆ ಪಡೆದು ಕೊಂಡರು. "ಮೊದಲ ಹಂತದಲ್ಲಿ ಆಯ್ಕೆಯಾದ ಮಕ್ಕಳ ದಾಖಲಾತಿಯಂತೆ ನೇಮಕ ಪ್ರಕ್ರಿಯೆ ನಡೆದಿದೆ. ಈಗ 2ನೇ ಹಂತದಲ್ಲಿ ದಾಖಲಾತಿ ಮಾಡಲಾಗುತ್ತಿದೆ. ಮೆಸೇಜ್‌ಗಳು ಪೋಷಕರಿಗೆ ಬರುವುದರಿಂದ ಅವರು ನಮ್ಮ ಬಳಿಗೆ ಬಂದ ಬಳಿಕವೇ ಯಾವ ಮಗು ಆಯ್ಕೆಯಾಗಿದೆ ಎಂದು ನಮಗೆ ತಿಳಿಯುತ್ತದೆ. ನಮಗೆ ನೀಡಿರುವ ಗೈಡ್‌ಲೈನ್ ಪ್ರಕಾರವೇ ನಾವು ದಾಖಲಾತಿ ಮಾಡುತ್ತಿದ್ದೇವೆ" ಎಂದು ಬಿ.ಇ.ಒ. ಕೆಂಪಲಿಂಗಪ್ಪ ಡಿ.ಸಿ.ಯವರಿಗೆ ಹೇಳಿದರು. ಆರ್.ಟಿ.ಇ. ಗೊಂದಲದ ಕುರಿತು ಪತ್ರಕರ್ತರು ಜಿಲ್ಲಾಧಿಕಾರಿಗಳನ್ನು ಕೇಳಿದಾಗ, ‘ಈ ಬಾರಿ ಕೆಲವೊಂದು ಗೊಂದಲಗಳು ಆಗಿದೆ. ಈ ಎಲ್ಲ ಗೊಂದಲಗಳ ಕುರಿತು ನಾವು ಬರೆಯುತ್ತೇವೆ. ಮುಂದೆ ಈ ರೀತಿ ಆಗದಂತೆ ಮಾಡಬೇಕಾಗಿದೆ’ ಎಂದು ಹೇಳಿದರು.

ಆಲೆಟ್ಟಿ ಗ್ರಾಮದ ಮಿತ್ತಡ್ಕ-ಕುದ್ಕುಳಿ ಎಂಬಲ್ಲಿ ಜಾಗದ ಮಾಲಿಕರ ಅನುಮತಿ ಪಡೆಯದೇ ಮೆಸ್ಕಾಂನವರು ವಿದ್ಯುತ್ ಲೈನ್ ಎಳೆದಿರುವ ಕುರಿತು ರೇಖಾ, ಲೀಲಾವತಿ ಎಂಬವರು ಜಿಲ್ಲಾಧಿಕಾರಿಗಳ ಗಮನ ಸೆಳೆದರು. ಮೆಸ್ಕಾಂ ಇಲಾಖೆಯ ಅಧಿಕಾರಿಗಳನ್ನು ಸ್ಥಳಕ್ಕೆ ಬರಮಾಡಿಕೊಂಡ ಜಿಲ್ಲಾಧಿಕಾರಿಯವರು "ಅವರನ್ನು ಪ್ರಶ್ನಿಸಿ, ಒಂದು ವಾರದೊಳಗೆ ಸಮಸ್ಯೆ ಬಗೆಹರಿಸುವಂತೆ ತಿಳಿಸಿದರು.

94 ಸಿಯಲ್ಲಿ ಕುಕ್ಕಂದೂರಿನ ಸಿ.ಆರ್.ಸಿ. ಕಾಲೊನಿಯವರು ಅರ್ಜಿ ಸಲ್ಲಿಸಿದ್ದು, ಅಧಿಕಾರಿಗಳು ಅರಣ್ಯ ಎಂದು ಹೇಳುತ್ತಿದ್ದಾರೆ ಎಂದು ಸತ್ಯಶಾಂತಿ ತ್ಯಾಗಮೂರ್ತಿಯವರ ನೇತೃತ್ವದಲ್ಲಿ ಹಲವರು ಅಹವಾಲು ವ್ಯಕ್ತ ಪಡಿಸಿದರು. ಕಂದಾಯ, ಅರಣ್ಯ, ಸರ್ವೆಯವರಿದ್ದು ಜಂಟಿ ಸರ್ವೆ ನಡೆಸುವಂತೆ ಡಿ.ಸಿ.ಯವರು ತಹಶೀಲ್ದಾರಿಗೆ ಸೂಚನೆ ನೀಡಿದರು.

ವಿಶ್ವನಾಥ್ ಅಲೆಕ್ಕಾಡಿಯವರು 94 ಸಿ ಅರ್ಜಿ ಪೆಂಡಿಂಗ್ ಇರುವ ಕುರಿತು, ಸರಕಾರದಿಂದ ಮಂಜೂರಾಗಿರುವ ಮನೆಕಟ್ಟಲು ಫಲಾನುಭವಿಗಳಿಗೆ ಮರಳಿನ ತೊಂದರೆ ಇರುವು ಕುರಿತು ಗಮನ ಸೆಳೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X