ಉತ್ತಮ ಆರೋಗ್ಯಕ್ಕೆ ಯೋಗ ಸಹಕಾರಿ: ಹೆಚ್.ಎಸ್.ಪ್ರಕಾಶ್
ಹಾಸನ,ಜೂನ್18: ಮನುಷ್ಯನ್ನು ಉತ್ತಮ ಆರೋಗ್ಯ ಹೊಂದಲು ಯೋಗಭ್ಯಾಸದ ಅವಶ್ಯಕತೆ ಇದ್ದು, ದಿನ ನಿತ್ಯದ ಬದುಕಿನಲ್ಲಿ ಒತ್ತಡ ನಿವಾರಣೆಗೆ ಯೋಗ ಸಹಕಾರಿಯಾಗಲಿದೆ ಎಂದು ಶಾಸಕರಾದ ಹೆಚ್.ಎಸ್.ಪ್ರಕಾಶ್ ಅವರು ತಿಲಿಸಿದರು.
ಜೂನ್ 21 ರಂದು ನಡೆಯುವ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಇಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾಧಿಕಾರಿಯವರ ಕಚೇರಿ ಆವರಣದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ಹಮ್ಮಿಕೊಂಡಿದ್ದ ಯೋಗ ನಡೆಗೆ ಜಾಥಾಕ್ಕೆ ಶಾಸಕರಾದ ಹೆಚ್.ಎಸ್.ಪ್ರಕಾಶ್ ಅವರು ಬಿಳಿ ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಪ್ರತಿನಿತ್ಯ ಯೋಗ ಮಾಡುವುದರಿಂದ ವಿವಿಧ ರೋಗಗಳು ಗುಣಮುಖವಾಗುತ್ತವೆ ಎಂದರು.
ನಗರ ಸಭೆ ಅಧ್ಯಕ್ಷರಾದ ಡಾ:ಹೆಚ್.ಎಸ್.ಅನಿಲ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ತಹಸೀಲ್ದಾರ್ ವಿ.ಮಂಜುನಾಥ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕಾಂತರಾಜ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ ಡಾ:ನರಸಿಂಹ ಭಟ್, ಆಯ್ಯುಷ್ ಇಲಾಖೆ ಡಾ:ರಾಮಚಂದ್ರ ಮತ್ತಿತರ ಅಧಿಕಾರಿಗಳು ಹಾಜರಿದ್ದರು. ಜಾಥಾದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ವಿವಿಧ ಯೋಗ ಕೇಂದ್ರಗಳ ಪದಾಧಿಕಾರಿಗಳು ಭಾಗವಹಿಸಿದ್ದರು.







