Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎರಡನೆ ಅವಧಿಗೆ ಆರ್ ಬಿಐ ಗವರ್ನರ್...

ಎರಡನೆ ಅವಧಿಗೆ ಆರ್ ಬಿಐ ಗವರ್ನರ್ ಆಗಲಾರೆ: ಆರ್ ಬಿ ಐ ಗವರ್ನರ್ ರಘುರಾಮ್ ರಾಜನ್

► ಆರ್‌ಬಿಐ ಸಿಬ್ಬಂದಿಗೆ ರಾಜನ್ ಪತ್ರ ► ಶಿಕ್ಷಣ ಕ್ಷೇತ್ರಕ್ಕೆ ಮರಳುವ ಇಂಗಿತ

ವಾರ್ತಾಭಾರತಿವಾರ್ತಾಭಾರತಿ18 Jun 2016 8:52 PM IST
share
ಎರಡನೆ ಅವಧಿಗೆ ಆರ್ ಬಿಐ ಗವರ್ನರ್ ಆಗಲಾರೆ: ಆರ್ ಬಿ ಐ ಗವರ್ನರ್ ರಘುರಾಮ್ ರಾಜನ್

ಹೊಸದಿಲ್ಲಿ,ಜೂ.19: ಭಾರತೀಯ ರಿಸರ್ವ್ ಬ್ಯಾಂಕ್‌ನ ಗವರ್ನರ್ ಆಗಿ ಎರಡನೆ ಅವಧಿಗೆ ಕಾರ್ಯನಿರ್ವಹಿಸಲು ರಘುರಾಮ್ ರಾಜನ್ ನಿರಾಕರಿಸಿದ್ದಾರೆ. ತನ್ನ ವಿರುದ್ಧ ತೀವ್ರ ಸಂದೇಹ ಹಾಗೂ ಟೀಕೆಗಳು ಕೇಳಿಬಂದ ಬೆನ್ನಲ್ಲೇ ಅವರು ಈ ಪ್ರಕಟಣೆಯನ್ನು ನೀಡಿದ್ದಾರೆ. ರಾಜನ್ ಆರ್‌ಬಿಐ ಸಿಬ್ಬಂದಿಯನ್ನುದ್ದೇಶಿಸಿ ಬರೆದ ಪತ್ರದಲ್ಲಿ, ರಾಜನ್, ಸೆಪ್ಟೆಂಬರ್ 4ರಂದು ತನ್ನ ಅಧಿಕಾರಾವಧಿ ಮುಗಿದ ಬಳಿಕ ಶಿಕ್ಷಣ ಕ್ಷೇತ್ರಕ್ಕೆ ಮರಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್‌ನ 23ನೇ ಗವರ್ನರ್ ಆಗಿ ನಾನು ಸೆಪ್ಟೆಂಬರ್ 2013ರಂದು ಅಧಿಕಾರ ಸ್ವೀಕರಿಸಿದ ಸಮಯದಲ್ಲಿ ಕರೆನ್ಸಿಯ ವೌಲ್ಯವು ಪ್ರತಿದಿನವೂ ಕುಸಿಯುತ್ತಲೇ ಇತ್ತು. ಹಣದುಬ್ಬರ ಅಧಿಕವಾಗಿತ್ತು ಹಾಗೂ ಆರ್ಥಿಕ ಬೆಳವಣಿಗೆ ದುರ್ಬಲವಾಗಿತ್ತು. ಭಾರತವು ಐದು ದುರ್ಬಲ ರಾಷ್ಟ್ರಗಳಲ್ಲೊಂದೆಂದೇ ಪರಿಗಣಿಸಲ್ಪಟ್ಟಿತ್ತು. ಗವರ್ನರ್ ಆದ ಬೆನ್ನಲ್ಲೇ ಹಣದುಬ್ಬರವನ್ನು ಇಳಿಸುವ ಬಗ್ಗೆ ಗಮನಹರಿಸಿದೆ. ವಿದೇಶಿ ವಿನಿಮಯ ಸಂಗ್ರಹವನ್ನು ಹೆಚ್ಚಿಸಲು ಅನಿವಾಸಿಗಳ ವಿದೇಶಿ ಕರೆನ್ಸಿ ಠೇವಣಿಯ ಹೆಚ್ಚಳ ಸೇರಿದಂತೆ ನೂತನ ಆರ್ಥಿಕ ಕಾರ್ಯಚೌಕಟ್ಟನ್ನು ರೂಪಿಸಿದ್ದಾಗಿ ಅವರು ಹೇಳಿದ್ದಾರೆ. ಭಾರತ್ ಬಿಲ್ ಪಾವತಿ ವ್ಯವಸ್ಥೆ ಹಾಗೂ ವಾಣಿಜ್ಯ ಸ್ವೀಕೃತಿಗಳ ವಿನಿಮಯ ಹಾಗೂ ಮೊಬೈಲ್ ಫೋನ್‌ಗಳ ಮೂಲಕ ಪಾವತಿ ವ್ಯವಸ್ಥೆಗಳನ್ನು ಆರಂಭಿಸುವ ಮೂಲಕ ಬ್ಯಾಂಕಿಂಗ್‌ನ ಗುಣಮಟ್ಟದಲ್ಲಿ ಭಾರೀ ಸುಧಾರಣೆ ತರಲು ಪ್ರಯತ್ನಿಸಿದ್ದಾಗಿ ಅವರು ಹೇಳಿದ್ದಾರೆ.
ಜಾಗತಿಕ ಆರ್ಥಿಕ ಮಾರುಕಟ್ಟೆಗಳಲ್ಲಿ ಉಂಟಾದ ಬಿರುಗಾಳಿಯ ಅಲೆಗಳ ಮೇಲೆಯೇ ತಾನು ಭಾರತದ ಭವಿಷ್ಯಕ್ಕೊಂದು ಸೇತುವೆಯನ್ನು ನಿರ್ಮಿಸಿರುವುದಾಗಿ ರಾಜನ್ ಪತ್ರದಲ್ಲಿ ಹೇಳಿದ್ದಾರೆ.
 ‘‘‘ ಆರ್‌ಬಿಐನ ವಿವಿಧ ಕ್ರಮಗಳಿಂದಾಗಿ ಬಡ್ಡಿದರಗಳನ್ನು 150 ಬೇಸಿಕ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಲು ಸಾಧ್ಯವಾಗಿದೆ. ಸರಕಾರಕ್ಕೆ ಇದೇ ಮೊದಲ ಬಾರಿಗೆ 40 ವರ್ಷಗಳ ಬಾಂಡ್‌ಗಳನ್ನು ಬಿಡುಗಡೆಗೊಳಿಸಿತು. ಅಂತಿಮವಾಗಿ ಕರೆನ್ಸಿ ವೌಲ್ಯವು ಕೂಡಾ ಸ್ಥಿರಗೊಂಡಿತು. ವಿದೇಶಿ ಕರೆನ್ಸಿಗಳ ಹೊರಹರಿವಿಗೆ ನಾವು ಸಂಪೂರ್ಣ ಅವಕಾಶ ನೀಡಿದ ಹೊರತಾಗಿಯೂ ನಮ್ಮ ದೇಶದ ವಿದೇಶಿ ವಿನಿಮಯ ಸಂಗ್ರಹವು ದಾಖಲೆಯ ಮಟ್ಟಕ್ಕೆ ತಲುಪಿದೆ. ಇಂದು ನಾವು ಜಗತ್ತಿನ ಅತ್ಯಂತ ತ್ವರಿತವಾಗಿ ಬೆಳೆಯುತ್ತಿರುವ ಆರ್ಥಿಕತೆಯುಳ್ಳ ದೇಶವಾಗಿದ್ದೇವೆ ಮತ್ತು ಐದು ಆರ್ಥಿಕ ದುರ್ಬಲ ರಾಷ್ಟ್ರಗಳ ಪಟ್ಟಿಯಿಂದ ನಿರ್ಗಮಿಸಿದ್ದೇವೆ ’’ಎಂದು ರಾಜನ್ ಪತ್ರದಲ್ಲಿ ತಿಳಿಸಿದ್ದಾರೆ.
  ತಾನೋರ್ವ ಶಿಕ್ಷಣತಜ್ಞನಾಗಿದ್ದು, ಚಿಂತನೆಗಳ ವಲಯವೇ ತನ್ನ ಅಂತಿಮ ತಾಣವಾಗಿದೆ. ತನ್ನ ಮೂರು ವರ್ಷಗಳ ಅಧಿಕಾರಾಧಿ ಹಾಗೂ ಚಿಕಾಗೋ ವಿವಿಗೆ ತಾನು ಹಾಕಿರುವ ರಜೆಯ ಅವಧಿ ಇವೆರಡೂ ಮುಕ್ತಾಯದ ಹಂತವನ್ನು ತಲುಪಿವೆ. ಸರಕಾರದ ಜೊತೆ ಸಮಾಲೋಚನೆಯನ್ನು ನಡೆಸಿದ ಬಳಿಕ 2016 ಸೆಪ್ಟೆಂಬರ್ 4ರಂದು ಆರ್‌ಬಿಐ ಗವರ್ನರ್ ಆಗಿ ತನ್ನ ಅಧಿಕಾರಾವಧಿ ಪೂರ್ಣಗೊಂಡ ಬಳಿಕ ಶಿಕ್ಷಣಕ್ಷೇತ್ರಕ್ಕೆ ಮರಳಲು ತೀರ್ಮಾನಿಸಿರುವೆ. ಆದೇನಿದ್ದರೂ, ಅಗತ್ಯಬಿದ್ದಲ್ಲಿ ನನ್ನ ದೇಶಕ್ಕೆ ಸೇವೆ ಸಲ್ಲಿಸಲು ಸದಾ ಲಭ್ಯವಿರುವೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ. ತನ್ನೊಂದಿಗೆ ಸಮರ್ಪಣಾ ಮನೋಭಾವ ಹಾಗೂ ದೃಢ ಬೆಂಬಲದೊಂದಿಗೆ ಕಾರ್ಯನಿರ್ವಹಿಸಿದ ಆರ್‌ಬಿಐ ಸಿಬ್ಬಂದಿಗೆ ರಾಜನ್ ಪತ್ರದಲ್ಲಿ ಕೃತಜ್ಞತೆ ಅರ್ಪಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X