ಬೆಲ್ಜಿಯಂ: ಹೊಸ ದಾಳಿಗೆ ಸಂಚು ಆರೋಪದಲ್ಲಿ 12 ಮಂದಿಯ ಬಂಧನ
ಬ್ರಸೆಲ್ಸ್, ಜೂ. 18: ಬೆಲ್ಜಿಯಂನಲ್ಲಿ ಹೊಸದಾಗಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಸಂಚು ಹೂಡಿದ ಆರೋಪದಲ್ಲಿ ಪೊಲೀಸರು ಶುಕ್ರವಾರ ರಾತ್ರಿ 12 ಮಂದಿಯನ್ನು ಬಂಧಿಸಿದ್ದಾರೆ ಎಂದು ಫೆಡರಲ್ ಪ್ರಾಸಿಕ್ಯೂಟರ್ ಕಚೇರಿ ಶನಿವಾರ ಬಿಡುಗಡೆ ಮಾಡಿದ ಹೇಳಿಕೆಯೊಂದು ತಿಳಿಸಿದೆ.
ಶುಕ್ರವಾರ ರಾತ್ರಿ ದೇಶಾದ್ಯಂತ ಬೃಹತ್ ಕಾರ್ಯಾಚರಣೆ ನಡೆಸಿದ ಪೊಲೀಸರು 40 ಮನೆಗಳನ್ನು ಶೋಧಿಸಿದರು.
‘‘ಭಯೋತ್ಪಾದನೆಗೆ ಸಂಬಂಧಿಸಿದ ಆರೋಪಗಳ ತನಿಖೆಗಾಗಿ 40 ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅವರ ಪೈಕಿ 12 ಮಂದಿಯನ್ನು ಬಂಧಿಸಲಾಗಿದೆ’’ ಎಂದು ಹೇಳಿಕೆ ತಿಳಿಸಿದೆ.
Next Story





