ಸಜಿಪಮುನ್ನೂರು:ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ವಶ

ವಿಟ್ಲ, ಜೂ.20: ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಎಂಬಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 30 ಲೋಡ್ ಮರಳನ್ನು ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಗಿರೀಶ್ ಮೋಹನ್ ನೇತೃತ್ವದ ಅಧಿಕಾರಿಗಳ ತಂಡ ಶನಿವಾರ ಸಂಜೆ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.
ಸಹಾಯಕ ಅಧಿಕಾರಿ ಮಹದೇವಪ್ಪ, ಪಿಡಬ್ಲ್ಯುಡಿ ಕಿರಿಯ ಇಂಜಿನಿಯರ್ ಅರುಣ್ ಪ್ರಕಾಶ್ ಡಿಸೋಜ, ಚಾಲಕ ಕೇಶವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Next Story





