ನೆಲಮಂಗಲದ ಬಳಿ ಕಂಟೇನರ್ -ಕಾರು ಡಿಕ್ಕಿ ; ಆರು ಸಾವು

ಬೆಂಗಳೂರು, ಜೂ.20: ರಸ್ತೆ ಬದಿ ನಿಂತಿದ್ದ ಕಂಟೇನರ್ ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನೆಲಂಗಲದ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.
ತುಮಕೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಕಾರು ನೆಲಮಂಗಲದ ಕೆಂಪೋಹಳ್ಳಿ ಗೇಟ್ ಬಳಿ ಕಂಟೇನರ‍್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಫಘಾತದಲ್ಲಿ ಹುಬ್ಬಳ್ಳಿಯ ನರಗುಂದದ ಒಂದೆ ಕುಟುಂಬದ ಐವರು ಸಾವಿಗೀಡಾಗಿದ್ದಾರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಮೃತರೆಲ್ಲರೂ ಹುಬ್ಬಳ್ಳಿಯ ನರಗುಂದ ನಿವಾಸಿಗಳು ಎಂದು ಗೊತ್ತಾಗಿದೆ.ಅವರು ತುಮಕೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ದಾಬಸ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





