Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಂದುವರಿದ ಅಂಬರೀಷ್ ಅಭಿಮಾನಿಗಳ...

ಮುಂದುವರಿದ ಅಂಬರೀಷ್ ಅಭಿಮಾನಿಗಳ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ20 Jun 2016 11:10 PM IST
share
ಮುಂದುವರಿದ ಅಂಬರೀಷ್ ಅಭಿಮಾನಿಗಳ ಪ್ರತಿಭಟನೆ

ಇಬ್ಬರ ಆತ್ಮಹತ್ಯೆಗೆ ಯತ್ನ
ಮಂಡ್ಯ, ಜೂ.20: ಅಂಬರೀಷ್ ಅವರನ್ನು ಸಚಿವ ಸಂಪುಟ ದಿಂದ ಕೈಬಿಟ್ಟಿರುವುದನ್ನು ಖಂಡಿಸಿ ಮಂಡ್ಯದಲ್ಲಿ ಅಭಿಮಾನಿಗಳ ಪ್ರತಿಭಟನೆ ಮುಂದುವರಿದಿದ್ದು, ಸೋಮವಾರ ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದ ಇಬ್ಬರಲ್ಲಿ ಓರ್ವ ತೀವ್ರ ಅಸ್ವಸ್ಥ ಗೊಂಡಿದ್ದಾನೆ.

ನಗರದ ಬೆಂಗಳೂರು-ಮೈಸೂರು ಹೆದ್ದಾರಿಯ ಸಂಜಯ್ ವೃತ್ತದಲ್ಲಿ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬೇವಿನಹಳ್ಳಿ ಕನಕಮ್ಮ ಎಂಬವರು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ಅಂಬರೀಷ್ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಕಾರರು, ಅಂಬರೀಷ್ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ತೆಗೆದುಕೊಳ್ಳಬೇಕು. ಅಂಬರೀಷ್ ಅವರು ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್‌ನ ಜಿಲ್ಲಾ ಘಟಕದ ಕಾರ್ಯದರ್ಶಿ ಪಲ್ಲವಿ, ತಾಪಂ ಮಾಜಿ ಅಧ್ಯಕ್ಷೆ ವಿಜಯ ರಾಧಾಕೃಷ್ಣ, ನಗರಸಭೆ ಮಾಜಿ ಅಧ್ಯಕ್ಷೆ ನಾಗಮಣಿ, ಸುನಿತಾ, ರಾಧ, ಮಮತಾ ಮತ್ತಿತರರು ಪಾಲ್ಗೊಂಡಿದ್ದರು.
ಮದ್ದೂರು ವರದಿ: ತಾಲೂಕಿನ ಭಾರತಿನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಂಬರೀಷ್ ಅಭಿಮಾನಿ ಕರಡಕೆರೆ ಗ್ರಾಮದ ಪುಟ್ಟಸ್ವಾಮಿ(32) ವಿಷ ಸೇವಿಸಿ ಕುಸಿದುಬಿದ್ದರು. ತಕ್ಷಣ ಅವರನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಲಾಯಿತು.
ಪ್ರತಿಭಟನೆ ಮುಂದುವರಿಸಿದ ಅಂಬರೀಷ್ ಬೆಂಬಲಿಗರು, ಯಾವುದೇ ಕಪ್ಪುಚುಕ್ಕಿ ಇಲ್ಲದಂತೆ ವಸತಿ ಇಲಾಖೆಯನ್ನು ಮುನ್ನಡೆಸಿದ ಅಂಬರೀಷ್ ಅವರನ್ನು ಏಕಾಏಕಿ ಸಚಿವ ಸ್ಥಾನದಿಂದ ಕಿತ್ತುಹಾಕು ಮೂಲಕ ಸಿಎಂ ಸಿದ್ದರಾಮಯ್ಯ ಒಕ್ಕಲಿಗರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಮತ್ತು ಪಕ್ಷದ ವರಿಷ್ಠರ ನಡೆಯಿಂದ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಂಬರೀಷ್ ಅಭಿಮಾನಗಳು ಆಕ್ರೋಶಗೊಂಡಿದರು. ಮುಖ್ಯಮಂತ್ರಿಗಳು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಪ್ರತಿಭಟನಕಾರರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಬೇಲೂರು ಸೋಮ ಶೇಖರ್, ಮುಖಂಡರಾದ ತೊರೆಚಾಕನಹಳ್ಳಿ ಶಂಕರೇಗೌಡ, ಛತ್ರದಹೊಸಹಳ್ಳಿ ಸಿದ್ದರಾಜು, ಗುರುದೇವರಹಳ್ಳಿ ಸಿದ್ದರಾಜು, ಬಿದರಹಳ್ಳಿ ಚಂದ್ರಶೇಖರ್, ಅಣ್ಣೂರು ಸಿದ್ದರಾಜು, ದೇವರಾಜು, ದೇಸಿಗೌಡ, ಅಜಯ್ ಪಾಲ್ಗೊಂಡಿದ್ದರು.
ಅಂಬರೀಷ್ ಅವರು ಸ್ವಗ್ರಾಮ ದೊಡ್ಡರಸಿನಕೆರೆ ಸಮೀಪ ಅಂಬರೀಷ್ ಅಭಿಮಾನಿಗಳು ರಸ್ತೆಯಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಕೂಡಲೇ ಅಂಬರೀಷ್ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಗೊಳಿಸಬೇಕೆಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X