Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕದ್ದುಮುಚ್ಚಿ ಸಭೆ ನಡೆಸುವ ಬಿಜೆಪಿ,...

ಕದ್ದುಮುಚ್ಚಿ ಸಭೆ ನಡೆಸುವ ಬಿಜೆಪಿ, ಕಾಂಗ್ರೆಸ್ :ಶಾಸಕ ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ20 Jun 2016 11:22 PM IST
share
ಕದ್ದುಮುಚ್ಚಿ  ಸಭೆ ನಡೆಸುವ ಬಿಜೆಪಿ, ಕಾಂಗ್ರೆಸ್ :ಶಾಸಕ ಮಧು ಬಂಗಾರಪ್ಪ

ಸೊರಬ, ಜೂ.20: ತಾಪಂ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಜೆಡಿಎಸ್ ಬಹಿರಂಗವಾಗಿ ಮತದಾರರ ಮುಂದೆ ಸಭೆೆಗಳನ್ನು ನಡೆಸುತ್ತಿದ್ದಾರೆಯೇ ವಿನಃ, ಕಾಂಗ್ರೆಸ್ ಹಾಗೂ ಬಿಜೆಪಿಯವರ ಹಾಗೆ ಜನರ ಮುಂದೆ ಬಾರದೇ ಗೋದಾಮುಗಳಲ್ಲಿ ಕದ್ದುಮುಚ್ಚಿ ಸಭೆೆಗಳನ್ನು ನಡೆಸುತ್ತಿಲ್ಲ ಎಂದು ಶಾಸಕ ಮಧು ಬಂಗಾರಪ್ಪ ನುಡಿದರು. ಸೋಮವಾರ ತಾಲೂಕಿನ ಮಾವಲಿ ಗ್ರಾಮದಲ್ಲಿ ತಾಪಂ ಚುನಾವಣಾ ಪ್ರಚಾರ ಸಭೆೆಯಲ್ಲಿ ಪಾಲ್ಗೊಂಡು ಮಾತನಾಡಿ, ತಾಲೂಕಿನ ಜನತೆ ಜೆಡಿಎಸ್‌ನವರನ್ನು ಪ್ರೀತಿ ವಿಶ್ವಾಸದಿಂದ ಆಯ್ಕೆ ಮಾಡಿದ್ದಾರೆ. ಜೆಡಿಎಸ್ ಪಕ್ಷದ ವಿರುದ್ಧ ಹುರುಳಿಲ್ಲದ ವೈಯಕ್ತಿಕ ಟೀಕೆಯಲ್ಲಿ ಬಿಜೆಪಿಯವರು ತೊಡಗಿದ್ದಾರೆ. ಪ್ರಜ್ಞಾವಂತ ತಾಲೂಕಿನ ಜನತೆ ಇವರ ಕಾರ್ಯವನ್ನು ಮನಗೊಂಡು ವಿಧಾನ ಸಭೆ ಹಾಗೂ ಜಿಪಂ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಿದ್ದಾರೆ ಎಂಬುದನ್ನು ಮರೆಯಬಾರದು ಎಂದು ಮಾಜಿ ಸಚಿವ ಹರತಾಳು ಹಾಲಪ್ಪನವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ ಆಶೀರ್ವಾದದಿಂದ ಜನತೆಯಲ್ಲಿ ಗುರುತಿಸಿಕೊಂಡಿದ್ದ ಹರತಾಳು ಹಾಲಪ್ಪರವರ ಸ್ವಯಂಕೃತ ಅಪರಾಧ ದಿಂದ ಅವರನ್ನು ತಾಲೂಕಿನ ಜನತೆ ತಿರಸ್ಕರಿಸಿದ್ದು, ನಮ್ಮ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ತಾಲೂಕಿನ ಮತದಾರರು ಪ್ರಬುದ್ಧರಾಗಿದ್ದು, ಯಾರು ತಾಲೂಕಿನ ಅಭಿವೃದ್ಧಿ ಮಾಡುತ್ತಾರೆ ಎಂಬುದನ್ನು ಮನಗಂಡಿದ್ದಾರೆ. ಬಂಗಾರಪ್ಪನವರ ಕುಟುಂಬದ ಆಸ್ತಿ ಬಗ್ಗೆ ಮಾತನಾಡಲು ಕುಟುಂಬದವರನ್ನು ಹೊರತು ಪಡಿಸಿ ಬೇರೆಯವರಿಗೆ ಹಕ್ಕಿಲ್ಲ. ಇದರ ಬಗ್ಗೆ ಕುತೂಹಲವಿದ್ದಲ್ಲಿ ನಮ್ಮ ಆಸ್ತಿಯನ್ನು ನೋಡಿಕೊಳ್ಳುವ ಮೇಲುಸ್ತುವಾರಿಯ ಜವಾಬ್ದಾರಿ ಕೆಲಸ ನೀಡಲು ಸಿದ್ಧ ಎಂದರು. ತಾಲೂಕಿನಲ್ಲಿ ಕೇವಲ ಮತಗಳಿಕೆಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿಯವರು ಜಾತ್ಯತೀತತೆಯ ಮಾತನಾ ಡುತ್ತಿದ್ದು, ಅಭ್ಯರ್ಥಿಗಳ ಆಯ್ಕೆಯಲ್ಲಿ ನಿಜವಾದ ಬಣ್ಣ ಬಯಲಾಗಿದೆ. ಆದರೆ ಜೆಡಿಎಸ್‌ನಲ್ಲಿ ಎಲ್ಲಾ ಜಾತಿ, ವರ್ಗದವರಿಗೂ ಅವಕಾಶ ನೀಡುವ ಮೂಲಕ ನಿಜವಾದ ಜಾತ್ಯತೀತ ಪಕ್ಷ ಎಂಬುದನ್ನು ಸಾಬೀತು ಪಡಿಸಿದೆ. ಈ ಬಾರಿ ತಾಪಂ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳೇ ಮೇಲುಗೈ ಸಾಧಿಸಲಿದ್ದು, ತಾಲೂಕಿನ 19 ಕ್ಷೇತ್ರಗಳಲ್ಲೂ ಜಯಗಳಿಸುವ ಮೂಲಕ ಮತದಾರರು ಕಾಂಗ್ರೆಸ್ ಹಾಗೂ ಬಿಜೆಪಿಯ ಹಣೆಬರಹ ಜೂ.28 ರಂದು ಬರೆಯಲಿದ್ದಾರೆ ಎಂದು ಭವಿಷ್ಯ ನುಡಿದರು. ಮಾವಲಿ ಕ್ಷೇತ್ರದ ತಾಪಂ ಚುನಾವಣಾ ಜೆಡಿಎಸ್ ಅಭ್ಯರ್ಥಿ ಅಮೃತಾ ಲೋಕೇಶ್ ಮತಯಾಚನೆ ಮಾಡಿದರು. ಸಭೆಯಲ್ಲಿ ಜಿಪಂ ಸದಸ್ಯೆ ತಾರಾ ಶಿವಾನಂದ, ಮುಖಂಡರಾದ ಎಚ್.ಗಣಪತಿ, ಸುರೇಶ್ ಬಿಳುವಾಣಿ, ಪುಟರಾಜ ಗೌಡ, ಶಿವಕುಮಾರ, ಗಿರಿಯಪ್ಪ, ಪರಸಪ್ಪ, ಲೋಕೇಶ್, ಘೋಷೇಂದ್ರ, ನಾಗೇಂದ್ರಪ್ಪ, ಹುಚ್ಚಪ್ಪ, ಪರಮೇಶಪ್ಪ, ರಾಜಪ್ಪ, ನೀಲಕಂಠಪ್ಪ, ಹನುಮಂತಮ್ಮ ಬೂದೇವಮ್ಮ, ಡಾಕಾಧರಪ್ಪ, ವಿನಾಯಕ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X