ಕುಮಟಾ:ಭೀಕರ ರಸ್ತೆ ಅಪಘಾತ, ಓರ್ವ ಮೃತ್ಯು
.jpg)
ಕುಮಟಾ: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬರ್ಗಿಯಲ್ಲಿ ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬರ್ಗಿ ಬಳಿಯ ರಾಷ್ಟ್ರಿಯ ಹೆದ್ದಾರಿ 66ರಲ್ಲಿ ಲಾರಿ ಹಾಗೂ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಚಲಾಯಿಸುತ್ತಿದ್ದ ಮಾದ್ಯ ನಾಯಕ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಕಾರಿನಲ್ಲಿದ್ದ ಆತನ ಪತ್ನಿ ಹಾಗೂ ಮಗು ಗಂಭೀರ ಗಾಯಗೊಂಡಿದ್ದು, ಗಾಯಗೊಂಡವರನ್ನು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





