Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ರಾಜಧಾನಿ ಜುವೆಲ್ಲರ್ಸ್’ ಶೂಟೌಟ್...

‘ರಾಜಧಾನಿ ಜುವೆಲ್ಲರ್ಸ್’ ಶೂಟೌಟ್ ಪ್ರಕರಣದ ಪ್ರಮುಖ ಆರೋಪಿ ಬಂಧನ

ವಾರ್ತಾಭಾರತಿವಾರ್ತಾಭಾರತಿ21 Jun 2016 5:30 PM IST
share
‘ರಾಜಧಾನಿ ಜುವೆಲ್ಲರ್ಸ್’ ಶೂಟೌಟ್ ಪ್ರಕರಣದ ಪ್ರಮುಖ ಆರೋಪಿ ಬಂಧನ

ಮಂಗಳೂರು, ಜೂ.21: ಪುತ್ತೂರಿನ ರಾಜಧಾನಿ ಜುವೆಲ್ಲರ್ಸ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಮುಹಮ್ಮದ್ ಹನೀಫ್ ಅಲಿಯಾಸ್ ಅಲಿ ಅಲಿಯಾಸ್ ಮುನ್ನಾ ಎಂಬಾತನನ್ನು ಇಂದು ಮುಂಜಾನೆ ಬಂಧಿಸಲಾಗಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್‌ರಾವ್ ಬೊರಸೆ ತಿಳಿಸಿದ್ದಾರೆ.

ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಅವರು, ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಒಟ್ಟು ನಾಲ್ಕು ಮಂದಿಯನ್ನು ಬಂಧಿಸಲಾಗಿದ್ದು, ಇನ್ನು ಮೂವರು ಆರೋಪಿಗಳಿಗಾಗಿ ಶೋಧ ಮುಂದುವರೆದಿದೆ. ಇಂದು ಬಂಧಿಸಲ್ಪಟ್ಟ ಆರೋಪಿಯಿಂದ ದೇಶೀ ನಿರ್ಮಿತ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ ಎಂದರು.

ಆರೋಪಿಯನ್ನು ವಿಟ್ಲದ ಉಕ್ಕುಡ ಪ್ರಯಾಣಿಕರ ತಂಗುದಾಣದ ಬಳಿ ದಸ್ತಗಿರಿ ಮಾಡಿದ್ದು, ಆತನ ಮನೆಯಿಂದ ಪ್ರಕರಣಕ್ಕೆ ಬಳಸಿದ್ದ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ 2015ರ ಅಕ್ಟೋಬರ್ 6ರಂದು ನಡೆದ ಶೂಟೌಟ್ ಪ್ರಕರಣದಲ್ಲಿ ದುಷ್ಕರ್ಮಿಗಳು ಮೋಟಾರು ಸೈಕಲ್‌ನಲ್ಲಿ ಬಂದು ಪಿಸ್ತೂಲಿನಿಂದ ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದರು. ಘಟನೆಯಂದ ಜುವೆಲ್ಲರ್ಸ್‌ನ ಶಟರ್, ಗ್ಲಾಸ್ ಮತ್ತು ಗೋಡೆಗೆ ಗುಂಡು ತಗುಲಿತ್ತು. ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ಆಸೀರ್ ಎಂಬಾತನನ್ನು ಕಳೆದ ಎಪ್ರಿಲ್ ಒಂದರಂದು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಪ್ರಕರಣದ ಪೂರ್ತಿ ಚಿತ್ರಣ ಬಯಲುಗೊಂಡಿತ್ತು.

ಪ್ರಕರಣದಲ್ಲಿ ಭೂಗತ ಜಗತ್ತಿನ ನಂಟು!

ಪ್ರಕರಣದಲ್ಲಿ ಭೂಗತ ಜಗತ್ತಿನ ಪಾತಕಿ ಕಲಿ ಯೋಗೀಶ್ ತನ್ನ ಸಹಚರರಾದ ಖಾಲಿಯಾ ರಫೀಕ್, ಮುಹಮ್ಮದ್ ಹನೀಫ್ ಎಂಬವರ ಮೂಲಕ ಪುತ್ತೂರಿನ ಮುಳಿಯ ಜುವೆಲ್ಲರ್ಸ್ ಮತ್ತು ರಾಜಧಾನಿ ಜುವೆಲ್ಲರ್ಸ್‌ಗೆ ಗುಂಡಿನ ದಾಳಿ ನಡೆಸಿ ಹಫ್ತಾ ಪಡೆಯಲು ಒಳಸಂಚು ನಡೆಸಿದ್ದರು. ಮುಳಿಯ ಜ್ಯುವೆಲ್ಲರಿಯಲ್ಲಿ ಸಾಕಷ್ಟು ಭದ್ರತಾ ವ್ಯವಸ್ಥೆಯಿದ್ದ ಕಾರಣ ಖಾಲಿಯಾ ರಫೀಕ್‌ನ ನಿರ್ಧಾರದಂತೆ ರಾಜಧಾನಿ ಜುವೆಲ್ಲರ್ಸ್‌ಗೆ ಗುಂಡಿನ ದಾಳಿ ನಡೆಸಿ ಹಫ್ತಾಕ್ಕೆ ಬೇಡಿಕೆ ಇರಿಸಲು ಯೋಜನೆ ರೂಪಿಸಲಾಗಿತ್ತು. ಖಾಲಿಯಾ ರಫೀಕ್ ಮತ್ತು ಮುಹಮ್ಮದ್ ಹನೀಫ್ ಸೇರಿಕೊಂಡು ಅವರ ಸಹಚರರಾದ ಕುಂಬ್ಳೆಯ ಅಬ್ದುಲ್ ಆಸೀರ್, ರಮೀಝಾ ರಾಜಾ, ಪೈಯ ಅಲಿಯಾಸ್ ಫಯಾಝ್, ಅನ್ವರ್ ಸುಂಕದಕಟ್ಟೆ ಎಂಬವರೊಂದಿಗೆ ಸೇರಿಕೊಂಡು ಗುಂಡಿನ ದಾಳಿ ನಡೆಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಅಬ್ದುಲ್ ಆಸೀರ್ ಹಾಗೂ ಅನ್ವರ್‌ನನ್ನು ದಸ್ತಗಿರಿ ಮಾಡಲಾಗಿದ್ದು, ಇವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದ ಸಂದರ್ಭ ಬಳಸಲಾದ ಆಲ್ಟೋ ಕಾರು ಹಾಗೂ ಮೋಟಾರು ಸೈಕಲನ್ನು ಕೂಡಾ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಖಾಲಿಯಾ ರಫೀಕ್ ಎಂಬಾತನನ್ನು ತ್ರಿಶೂರು ಜೈಲಿನಿಂದ ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ತನಿಖೆಗೆ ಒಳಪಡಿಸಲಾಗಿದೆ. ಈತನನ್ನು ಗೂಂಡಾ ಕಾಯ್ದೆಯಡಿ ಮಂಜೇಶ್ವರ ಪೊಲೀಸರು ಬಂಧಿಸಿದ್ದು, ಪ್ರಸ್ತುತ ಜೈಲಿನಲ್ಲಿದ್ದಾನೆ.

ಆರೋಪಿ ಮುಹಮ್ಮದ್ ಹನೀಫ್ ಅಲಿಯಾಸ್ ಮುನ್ನಾ ಕಾಸರಗೋಡು ಜಿಲ್ಲೆಯವನಾಗಿದ್ದು, ಈತನ ಮೇಲೆ ಬೆಂಗಳೂರಿನ ಏರ್‌ಪೋರ್ಟ್ ಪೊಲೀಸ್ ಠಾಣೆಯಲ್ಲಿ ಖೋಟಾನೋಟು ಪ್ರಕರಣ, ವಿಟ್ಲ ಠಾಣೆಯಲ್ಲಿ ದರೋಡೆಗೆ ಸಂಚು ಪ್ರಕರಣ, ಕಾಸರಗೋಡು ಪೊಲೀಸ್ ಠಾಣೆಯ ಬೇವಿಂಜೆ ಶೂಟೌಟ್ ಪ್ರಕರಣ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಶೂಟೌಟ್ ಪ್ರಕರಣ ಹಾಗೂ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಕಾಯಿತಿಗೆ ಸಂಚು ಪ್ರಕರಣ ಸೇರಿದಂತೆ ಒಟ್ಟು ಏಳು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ಈ ಪ್ರಕರಣದ ಕಾರ್ಯಾಚರಣೆಯಲ್ಲಿ ಪುತ್ತೂರು ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ರಿಷ್ಯಂತ್, ಪುತ್ತೂರು ನಗರ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್, ಪುತ್ತೂರು ನಗರ ಠಾಣಾ ಪೊಲೀಸ್ ಉಪನಿರೀಕ್ಷಕ ಹಾಗೂ ತನಿಖಾಧಿಕಾರಿ ಅಬ್ದುಲ್ ಖಾದರ್, ಎಎಸೈ ಪಾಂಡುರಂಗ, ವೆಂಕಟರಮಣ ಗೌಡ ಹಾಗೂ ತಂಡದ ಕಾರ್ಯದಕ್ಷತೆಯನ್ನು ಹಿರಿಯ ಅಧಿಕಾರಿಗಳು ಪ್ರಶಂಸಿಸಿ 25,000 ರೂ. ನಗದು ಬಹುಮಾನ ಘೋಷಿಸಿದ್ದಾರೆ ಎಂದು ಎಸ್ಪಿ ಗುಲಾಬ್‌ರಾವ್ ತಿಳಿಸಿದರು.

ವಿದೇಶದಲ್ಲಿರುವ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ

ಪ್ರಕರಣಕ್ಕೆ ಸಂಬಂಧಿಸಿ ಭೂಗತ ಪಾತಕಿ ಕಲಿ ಯೋಗೀಶ್ ರಮೀಝ್ ರಾಜಾ, ಪೈಯ ಅಲಿಯಾಸ್ ಫಯಾಝ್‌ರನ್ನು ಬಂಧಿಸಬೇಕಾಗಿದ್ದು, ಇವರು ಮೂವರು ವಿದೇಶದಲ್ಲಿ ತಲೆಮಲೆಸಿಕೊಂಡಿದ್ದಾರೆ. ಅವರ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಎಸ್ಪಿ ಗುಲಾಬ್‌ರಾವ್ ವಿವರ ನೀಡಿದರು.

26ರಂದು ಶಾಲಾ ವಾಹನ ಚಾಲಕರು, ಮುಖ್ಯಸ್ಥರ ಸಭೆ: ಎಸ್ಪಿ

ಕುಂದಾಪುರದ ತ್ರಾಸಿಯಲ್ಲಿ ಇಂದು ನಡೆದ ರಸ್ತೆ ಅಪಘಾತ ತೀವ್ರ ಆಘಾತಕಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲಾ ಶಾಲಾ ವಾಹನಗಳ ಚಾಲಕರು ಹಾಗೂ ಶಾಲಾ ಮುಖ್ಯಸ್ಥರ ಸಭೆಯನ್ನು ಜೂ. 26ರಂದು ಕರೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್‌ರಾವ್ ಬೊರಸೆ ತಿಳಿಸಿದರು.

ಸರಕಾರಿ ಸುತ್ತೋಲೆಯ ಪ್ರಕಾರ ಶಾಲಾ ವಾಹನಗಳು ಹಳದಿ ಬಣ್ಣದಿಂದ ಕೂಡಿದ್ದು, ಹಸಿರು ಬಣ್ಣದಲ್ಲಿ ಶಾಲೆಯ ಹೆಸರನ್ನು ನಮೂದಿಸಬೇಕು ಸೇರಿದಂತೆ ಹಲವಾರು ನಿರ್ದೇಶನಗಳನ್ನು ಈಗಾಗಲೇ ಶಾಲೆಗಳಿಗೆ ನೀಡಲಾಗಿದೆ. ಈಗ ಮತ್ತೊಮ್ಮೆ ಶಾಲಾ ಮುಖ್ಯಸ್ಥರಿಗೆ ಈ ನಿರ್ದೇಶನಗಳನ್ನು ತಿಳಿಸಲಾಗುವುದಲ್ಲದೆ, ಚಾಲಕರು ಸಮರ್ಪಕ ತರಬೇತು ಹೊಂದಿರುವ ಬಗ್ಗೆ ಹಾಗೂ ಅಧಿಕ ವೇಗ ಹಾಗೂ ಓವರ್ ಟೇಕ್ ಬಗ್ಗೆ ಚಾಲಕರಿಗೆ ಸೂಕ್ತ ಮಾರ್ಗದರ್ಶನವನ್ನು ಒದಗಿಸಲಾಗುವುದು ಎಂದು ಅವರು ಈ ಸಂದರ್ಭ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X