ವಿಶ್ವಯೋಗ ದಿನಾಚರಣೆ

ಕಾರವಾರ, ಜೂ.21: ತಾಲೂಕಿನ ವಿವಿಧ ಸ್ಥಳಗಳಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯಲ್ಲಿ ನೂರಾರು ಜನರು ಉತ್ಸಾಹದಿಂದ ಪಾಲ್ಗೊಂಡಿದ್ದು ಕಂಡು ಬಂತು. ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಇಲ್ಲಿನ ಗುರುಮಠ, ದೈವಜ್ಞ ಕಲ್ಯಾಣ ಮಂಟಪ, ವಿವಿಧ ಶಾಲಾ ಕಾಲೇಜುಗಳಲ್ಲೂ ವಿಶ್ವಯೋಗ ದಿನಾಚರಣೆ ನಡೆಯಿತು.
ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಉಜ್ವಲ್‌ಕುಮಾರ್ ಘೋಷ್, ಸಿಇಒ ರಾಮಪ್ರಸಾದ್ ಮನೋಹರ್ ಪಾಲ್ಗೊಂಡು ವಿವಿಧ ಆಸನಗಳನ್ನು ಪ್ರದರ್ಶಿಸಿದರು. ವಿಶೇಷ ಎನ್ನುವಂತೆ ಭಾರತದ ಬೃಹತ್ ಯೋಜನೆಗಳಲ್ಲಿ ಒಂದಾದ ಕಾರವಾರದ ನೌಕಾನೆಲೆಯಲ್ಲಿ ಆರೋಗ್ಯ ವೃದ್ಧಿಗೆ ಯೋಗ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ನೌಕಾನೆಲೆಯ ಐಎನ್‌ಎಸ್ ವಿಕ್ರಮಾದಿತ್ಯ ಸಿಬ್ಬಂದಿ, ರಕ್ಷಣಾ ನಾಗರಿಕರು, ನೌಕಾ ನೆಲೆಯ ವಿದ್ಯಾರ್ಥಿಗಳು ಹಾಗೂ ವಿವಿಧ ವಯೋವರ್ಗದವರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಯೋಗದ ಲಾಭಗಳ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
Next Story





