Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಸಿಬಿಯಿಂದ ಕೇಜ್ರಿವಾಲ್-ಶೀಲಾ ಸರಕಾರಗಳ...

ಎಸಿಬಿಯಿಂದ ಕೇಜ್ರಿವಾಲ್-ಶೀಲಾ ಸರಕಾರಗಳ ವಿರುದ್ಧ ಎಫ್‌ಐಆರ್

400 ಕೋಟಿ ರೂ. ಟ್ಯಾಂಕರ್ ಹಗರಣ

ವಾರ್ತಾಭಾರತಿವಾರ್ತಾಭಾರತಿ21 Jun 2016 11:25 PM IST
share
ಎಸಿಬಿಯಿಂದ ಕೇಜ್ರಿವಾಲ್-ಶೀಲಾ ಸರಕಾರಗಳ ವಿರುದ್ಧ ಎಫ್‌ಐಆರ್

ಹೊಸದಿಲ್ಲಿ, ಜೂ.21: ದಿಲ್ಲಿ ಸರಕಾರದ ಭ್ರಷ್ಟಾಚಾರ ವಿರೋಧಿ ಬ್ಯೂರೊ(ಎಸಿಬಿ) ರೂ. 400 ಕೋಟಿಯ ಟ್ಯಾಂಕರ್ ಹಗರಣಕ್ಕೆ ಸಂಬಂಧಿಸಿ ಹಿಂದಿನ ಶೀಲಾ ದೀಕ್ಷಿತ್ ಸರಕಾರ ಹಾಗೂ ಈಗಿನ ಅರವಿಂದ ಕೇಜ್ರಿವಾಲ್ ಸರಕಾರದ ವಿರುದ್ಧ ಸೋಮವಾರ ಎಫ್‌ಐಆರ್ ಒಂದನ್ನು ದಾಖಲಿಸಿದೆ.

ಕೇಜ್ರಿವಾಲ್ ಹಾಗೂ ಶೀಲಾ ದೀಕ್ಷಿತ್‌ರನ್ನು ವಿಚಾರಣೆಗಾಗಿ ಕರೆಸುವ ಸಾಧ್ಯತೆಯಿದೆ ಎಂದು ಎಸಿಬಿ ಮುಖ್ಯಸ್ಥ ಮುಕೇಶ್ ಮೀನಾ ತಿಳಿಸಿದ್ದಾರೆ. ಇದು ಕೇಂದ್ರ ಹಾಗೂ ರಾಜ್ಯದ ನಡುವಿನ ಸಂಬಂಧವನ್ನು ಇನ್ನಷ್ಟು ಹದಗೆಡಿಸುವ ನಿರೀಕ್ಷೆಯಿದೆ.
ಭ್ರಷ್ಟಾಚಾರ ತಡೆ ಕಾಯ್ದೆಯೊಂದಿಗೆ ಇತರ 2 ಸೆಕ್ಷನ್‌ಗಳನ್ವಯ ಎಫ್‌ಐಆರ್ ದಾಖಲಿಸಲಾಗಿದೆಯೆಂದು ಮೀನಾ ಹೇಳಿದ್ದಾರೆ.
ಅಧಿಕಾರ ದುರುಪಯೋಗಕ್ಕೆ ಸಂಬಂಧಿಸಿದ ಸೆ.13(1ಡಿ), ಕ್ರಿಮಿನಲ್ ಪಿತೂರಿ ಹಾಗೂ ಸಾರ್ವಜನಿಕ ಸೇವಕನಿಂದ ಕ್ರಿಮಿನಲ್ ವಿಶ್ವಾಸಘಾತವನ್ನುಲ್ಲೇಖಿಸುವ ಸೆ.120 ಬಿ ಹಾಗೂ 409ಗಳನ್ನೂ ಜಾಗೃತಗೊಳಿಸಲಾಗಿದೆಯೆಂದು ಟಿಒಐಗೆ ತಿಳಿದುಬಂದಿದೆ. ಎಫ್‌ಐಆರ್(ನ.10) ಎಎಪಿ ಸರಕಾರ ನಡೆಸಿದ್ದ ತನಿಖಾ ವರದಿ ಹಾಗೂ ಗುತ್ತಿಗೆ ರದ್ದುಗೊಳಿಸದಿದ್ದುದಕ್ಕಾಗಿ ಕೇಜ್ರಿವಾಲ್ ವಿರುದ್ಧವೂ ತನಿಖೆ ನಡೆಸುವಂತೆ ಆಗ್ರಹಿಸಿ ಬಿಜೆಪಿಯ ವಿಜೇಂದರ್ ಗುಪ್ತಾ ಸಲ್ಲಿಸಿರುವ ದೂರೊಂದನ್ನು ಆಧರಿಸಿದೆ. ಸರಕಾರದ ತನಿಖಾ ವರದಿಯನ್ನು ಲೆಫ್ಟಿನೆಂಟ್ ಗವರ್ನರ್ ಎಸಿಬಿಗೆ ಕಳುಹಿಸಿದ್ದರು.
 ಈ ಪ್ರಕರಣವು 2012ರಲ್ಲಿ ನಡೆದುದಾಗಿದೆ. ದೀಕ್ಷಿತ್ ಅಧ್ಯಕ್ಷೆಯಾಗಿದ್ದ ದಿಲ್ಲಿ ಜಲಮಂಡಳಿಯು ಖಾಸಗಿ ಕಂಪೆನಿಗಳಿಂದ 385 ಸ್ಟೇನ್‌ಲೆಸ್ ಸ್ಟೀಲ್ ಟ್ಯಾಂಕರ್‌ಗಳನ್ನು ಬಾಡಿಗೆಗೆ ಪಡೆಯಲು ಟೆಂಡರ್ ನೀಡಿತ್ತು. ಕಳೆದ ವರ್ಷ ಜೂ.19ರಂದು ಎಎಪಿ ಸರಕಾರವು, ಈ ವ್ಯವಹಾರದ ಕುರಿತು ಸತ್ಯಶೋಧನ ಸಮಿತಿಯೊಂದನ್ನು ರಚಿಸಿತ್ತು. ಅದು ಆಗಸ್ಟ್‌ನಲ್ಲಿ ತನ್ನ ವರದಿಯನ್ನು ಸಲ್ಲಿಸಿದ್ದು, ಇದರಲ್ಲಿ ರೂ. 400 ಕೋಟಿಯ ಅವ್ಯವಹಾರ ನಡೆದಿದೆಯೆಂದು ಆರೋಪಿಸಿತ್ತು.
ನಾಮಮಾತ್ರ ನೆಲೆಯಲ್ಲಿ ಸಲಹೆಗಾರನೊಬ್ಬನನ್ನು ನೇಮಿಸಿದ್ದು, ಅದರಿಂದ ರೂ. 36.5 ಕೋಟಿ ನಷ್ಟವಾಗಿರುವುದನ್ನು ಸಮಿತಿ ಪತ್ತೆಹಚ್ಚಿತ್ತು. ಮೊದಲು ಏಕೈಕ ಟೆಂಡರ್ ಎಂಬ ನೆಲೆಯಲ್ಲಿ ಒಂದು ಕಂಪೆನಿಯ ಟೆಂಡರನ್ನು ತಿರಸ್ಕರಿಸಿದ್ದರೂ, ಬಳಿಕ ಏಕೈಕ ಟೆಂಡರ್‌ನ ಮೇಲೆಯೇ ಕೆಲಸವನ್ನು ಒಪ್ಪಿಸಲಾಗಿತ್ತು. ಇನ್ನೊಂದು ಕಂಪೆನಿ ನಮೂದಿಸಿದ್ದ ರೂ. 323.9 ಕೋಟಿಗಳ ಟೆಂಡರ್‌ಗೆ ಹೋಲಿಸಿ, ಹೆಚ್ಚು ದರಕ್ಕೆ ಕೆಲಸ ಒಪ್ಪಿಸಿದುದರಿಂದ ನಷ್ಟವನ್ನು ಅದು ಲೆಕ್ಕ ಹಾಕಿತ್ತು.
ಎಫ್‌ಐಆರ್ ಮೊದಲು ಸತ್ಯಶೋಧನ ಸಮಿತಿಯನ್ನು ಉಲ್ಲೇಖಿಸಿದ್ದು, ಅದರ ವರದಿಯನ್ನು ಬೆಂಬಲಿಸಿದೆ. ಬಳಿಕ ಅದು ಕೇಜ್ರಿವಾಲ್ ಸರಕಾರವನ್ನುಲ್ಲೇಖಿಸಿ, ಅವ್ಯವಹಾರದ ಆರೋಪ ತೀವ್ರ ಸ್ವರೂಪದ್ದಾಗಿದೆ ಹಾಗೂ ಸಾರ್ವಜನಿಕರ ಹಣವನ್ನೊಳಗೊಂಡಿದೆ. ಮೇಲ್ನೋಟಕ್ಕೆ, ಹಿಂದಿನ ಹಾಗೂ ಈಗಿನ ಸರಕಾರಗಳ ಮೇಲೆ ಅಪರಾಧವನ್ನು ರೂಪಿಸಬಹುದಾಗಿದೆಯೆಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X