Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಲಾಲ್ ಮಾಂಸ ರಫ್ತು ಕಂಪೆನಿ ಸ್ಥಾಪಕ...

ಹಲಾಲ್ ಮಾಂಸ ರಫ್ತು ಕಂಪೆನಿ ಸ್ಥಾಪಕ ನಾನೇ: ಬಿಜೆಪಿ ಶಾಸಕ ಸಂಗೀತ್ ಸೋಮ್

ಗೋಮಾಂಸ ವಿರೋಧಿ ಹೋರಾಟದ ಮುಂಚೂಣಿ ನಾಯಕ!

ವಾರ್ತಾಭಾರತಿವಾರ್ತಾಭಾರತಿ21 Jun 2016 11:27 PM IST
share
ಹಲಾಲ್ ಮಾಂಸ ರಫ್ತು ಕಂಪೆನಿ ಸ್ಥಾಪಕ ನಾನೇ: ಬಿಜೆಪಿ ಶಾಸಕ ಸಂಗೀತ್ ಸೋಮ್

ಲಕ್ನೋ, ಜೂ.21: ಗೋಮಾಂಸ ವಿರೋಧಿ ಚಳವಳಿಯ ಮುಂಚೂಣಿ ನಾಯಕ, ಮುಝಫ್ಫರ್ ನಗರ ಗಲಭೆಯ ಆರೋಪಿ ಹಾಗೂ ಬಿಜೆಪಿ ಶಾಸಕ ಸಂಗೀತ್ ಸೋಮ್, ಹಲಾಲ್ ಮಾಂಸ ರಫ್ತು ಕಂಪೆನಿಯ ಮಾಲಕ ಎಂಬ ಸತ್ಯ ಇದೀಗ ಬಹಿರಂಗವಾಗಿದೆ. ಅಲ್-ದುವಾ ಫುಡ್ ಪ್ರೊಸೆಸಿಂಗ್ ಪ್ರೈವೆಟ್ ಲಿಮಿಟೆಡ್ ಕಂಪೆನಿಯನ್ನು ಸೋಮ್, ಮೊನುದ್ದೀನ್ ಖುರೇಶಿ ಹಾಗೂ ಮತ್ತೊಬ್ಬ ಪಾಲುದಾರನ ಜೊತೆ ಸೇರಿ 2005ರಲ್ಲಿ ಆರಂಭಿಸಿದ್ದರು. ಕಂಪೆನಿಯ ವೆಬ್‌ಸೈಟ್ ಪ್ರಕಾರ, ಇದು ಈಗ ಹಲಾಲ್ ಮಾಂಸ ಉತ್ಪಾದನೆ ಹಾಗೂ ರಫ್ತಿನ ಪ್ರಮುಖ ಕಂಪೆನಿಯಾಗಿದೆ.

ದೇಶದಲ್ಲಿ ಮಾಂಸ ರಫ್ತು ದಂಧೆ ಹೆಚ್ಚುತ್ತಿದೆ ಎಂಬ ಬಿಜೆಪಿ ಕೂಗಿಗೆ ವಿರುದ್ಧವಾಗಿ ಪಕ್ಷದ ಶಾಸಕನೇ ಈ ವಹಿವಾಟಿನಲ್ಲಿ ತೊಡಗಿಸಿಕೊಂಡಿರುವುದು ಪಕ್ಷವನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 2014ನೆ ಚುನಾವಣಾ ಪ್ರಚಾರದಲ್ಲಿ ಅಧಿಕ ಮಾಂಸ ರಫ್ತು ಹೆಚ್ಚು ಗೋಹತ್ಯೆಗೆ ಕಾರಣವಾಗುತ್ತದೆ ಎಂದು ಪ್ರತಿಪಾದಿಸಿದ್ದರು.
ಸೋಮ್ ಮಾಂಸ ರಪ್ತು ವಹಿವಾಟಿನಲ್ಲಿ ತೊಡಗಿಸಿಕೊಂಡಿರು ವುದಕ್ಕೆ ದಾಖಲೆ ಸಿಕ್ಕಿದ್ದರೂ, ಅವರನ್ನು ಸಂಪರ್ಕಿಸಿದಾಗ, ಸೋಮ್ ನಿರಾಕರಿಸಿದ್ದಾರೆ. ನಾನು ಮಾಂಸ ಮಾರಾಟ ವಹಿವಾಟಿನಲ್ಲಿ ತೊಡಗಿಸಿಕೊಂಡಿಲ್ಲ. ನಾನು ಅಪ್ಪಟ ಹಿಂದೂ. ಹಿಂದೂ ಭಾವನೆಗಳಿಗೆ ವಿರುದ್ಧವಾದ ಯಾವ ಕೆಲಸವೂ ಮಾಡುವುದಿಲ್ಲ. ನಾನು ಠಾಕೂರ್ ಆಗಿದ್ದು, ಮೊಟ್ಟೆ ಕೂಡಾ ಸೇವಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಆದರೆ 2005 ಡಿಸೆಂಬರ್ 19ರಂದು ಸಲ್ಲಿಸಿದ, ಅಲ್-ದುವಾ ಆಹಾರ ಸಂಸ್ಕರಣೆ ಕಂಪೆನಿಯ ಪಾಲುದಾರಿಕೆ ಪತ್ರದ ಅನ್ವಯ, ಅರಬ್ ದೇಶಗಳಿಗೆ ಹಲಾಲ್ ಮಾಂಸ ಮಾರಾಟ ಮಾಡುತ್ತಿರುವ ಕಂಪೆನಿಯ ಕಾರ್ಯ ಚಟುವಟಿಕೆಗಳು ಮುಖ್ಯವಾಗಿ ಮಾಂಸ ಹಾಗೂ ಮಾಂಸದ ಉತ್ಪನ್ನಗಳ ಉತ್ಪಾದನೆ, ಸಂಸ್ಕರಣೆ, ಖರೀದಿ ಮತ್ತು ಮಾರಾಟ.
ಈ ಕಂಪೆನಿ ಸಾಲ ನೀಡಿರುವುದು ಮತ್ತು ಪಡೆದಿರುವುದು, 2005-06ರಲ್ಲಿ 30.78 ಲಕ್ಷ ರೂಪಾಯಿಗೆ ಭೂಮಿ ಖರೀದಿಸಿರುವುದಕ್ಕೂ ದಾಖಲೆಗಳು ಲಭ್ಯವಾಗಿವೆ. 2008ರ ಮಾರ್ಚ್ 27ರಂದು ಕಂಪೆನಿಯ 20 ಸಾವಿರ ಷೇರುಗಳನ್ನು ಮಾರಾಟ ಮಾಡಿ ನಿರ್ದೇಶಕತ್ವವನ್ನು ನಸೀರಾ ಬೇಗಂ ಎಂಬವರಿಗೆ ವಹಿಸಿಕೊಟ್ಟಿದ್ದಾರೆ. ಸೋಮ್ ಅವರು ಪ್ರಮುಖ ಮಾಂಸ ರಫ್ತುದಾರ ಖುರೇಷಿ ಜೊತೆ ಅಲ್ ಅನಾಮ್ ಆಗ್ರೊ ಫುಡ್ಸ್ ನಲ್ಲೂ ಪಾಲುದಾರರಾಗಿದ್ದಾರೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X