ಡಿಸಿಸಿ ಬ್ಯಾಂಕ್ ನಿರ್ದೇಶಕರ ಮೇಲಿನ ಹಲ್ಲೆಗೆ ಬಿಜೆಪಿ ಖಂಡನೆ

ತರೀಕೆರೆ, ಜೂ.21: ಪಟ್ಟಣದಲ್ಲಿ ಇತ್ತೀಚೆಗೆ ಡಿಸಿಸಿ ಬ್ಯಾಂಕ್ ನಿರ್ದೇಶಕರೋಬ್ಬರ ಮೇಲೆ ಹಲ್ಲೆ ನಡೆದಿರುವುದನ್ನು ಭಾರತೀಯ ಜನತಾ ಪಕ್ಷವು ಮಂಗಳವಾರ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ತೀವ್ರವಾಗಿ ಖಂಡಿಸಿತು.
ಈ ವೇಳೆ ಮಾತನಾಡಿದ ಮಾಜಿ ಶಾಸಕ ಡಿ.ಎಸ್.ಸುರೇಶ್ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಪೊಲೀಸ್ ಇಲಾಖೆ ನಿಷ್ಕ್ರಿಯವಾಗಿದೆ. ರಾಜಕೀಯ ಪ್ರಭಾವಕ್ಕೆ ಒಳಗಾಗಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆ ಜನಪರವಾಗಿಲ್ಲ. ತಾಲೂಕಿನಲ್ಲಿ ಅಕ್ರಮ ಮದ್ಯಸಾಗಾಟ,ಬರ ಪರಿಹಾರ ಕಾಮಗಾರಿಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಶಾಸಕರ ಪ್ರಭಾವದಿಂದ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷೆ ಚೈತ್ರಾ, ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಎನ್.ಮಂಜುನಾಥ್, ಶ್ರೀ ಮಾಲತೇಶ್, ತಾಪಂ ಅಧ್ಯಕ್ಷೆ ಪದ್ಮಾವತಿ ಸಂಜೀವ್ ಕುಮಾರ್, ಪಕ್ಷದ ಕಾರ್ಯದರ್ಶಿ ಟಿ.ಜಿ.ಸದಾನಂದ ಮತ್ತಿತರರು ಉಪಸ್ಥಿತರಿದ್ದರು.
Next Story





