Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೋಮವಾರಪೇಟೆಯಲ್ಲಿ ಅಮಾಯಕರ ಬಂಧನ

ಸೋಮವಾರಪೇಟೆಯಲ್ಲಿ ಅಮಾಯಕರ ಬಂಧನ

ಪಿಎಫ್‌ಐ ಆರೋಪ

ವಾರ್ತಾಭಾರತಿವಾರ್ತಾಭಾರತಿ22 Jun 2016 11:20 PM IST
share
ಸೋಮವಾರಪೇಟೆಯಲ್ಲಿ ಅಮಾಯಕರ ಬಂಧನ

ಮಡಿಕೇರಿ, ಜೂ.22: ಸೋಮವಾರಪೇಟೆಯಲ್ಲಿ ಜೂ.19ರಂದು ಮೋಹನ್ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಶಾಂತಿ ಕದಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಿಎಫ್‌ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಎ.ಹಾರಿಸ್, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಹನ್ ಅವರ ಸಹೋದರ ಸಂತೋಷ್ ಪೂರ್ವಾಗ್ರಹ ಪೀಡಿತರಾಗಿ ಅಮಾಯಕ ಯುವಕರ ವಿರುದ್ಧ ಸುಳ್ಳು ದೂರನ್ನು ನೀಡಿದ್ದಾರೆ. ಪೊಲೀಸರು ಕೂಡ ಯಾವುದೇ ತನಿಖೆ ನಡೆಸದೆ ಅಮಾಯಕ ಯುವಕರನ್ನು ಬಂಧಿಸಿದ್ದಾರೆ ಎಂದು ಆರೋಪಿಸಿದರು.

ಈಗ ರಮಝಾನ್ ತಿಂಗಳಾಗಿರುವುದರಿಂದ ಸಂಜೆ 7ರಿಂದ ರಾತ್ರಿ 10:30ರವರೆಗೆ ಇಫ್ತಾರ್ ಹಾಗೂ ರಾತ್ರಿಯ ಪ್ರಾರ್ಥನೆಗಾಗಿ ಮುಸಲ್ಮಾನರು ಮಸೀದಿಯಲ್ಲಿರುತ್ತಾರೆ. ಬಂಧಿಸಲ್ಪಟ್ಟಿರುವ ಯುವಕರು ಕೂಡ ರಾತ್ರಿ 10:30ರವರೆಗೆ ಮಸೀದಿಯಲ್ಲೇ ಇದ್ದರು ಎನ್ನುವುದಕ್ಕೆ ಪ್ರತ್ಯಕ್ಷದರ್ಶಿಗಳೇ ಸಾಕ್ಷಿಯಾಗಿದ್ದಾರೆ. ಆದರೂ ರಾತ್ರಿ 12 ಗಂಟೆಗೆ ಸುಮಾರಿಗೆ ಮನೆಯಲ್ಲಿದ್ದ ಯುವಕರನ್ನು ಬಂಧಿಸಲಾಗಿದೆ. ಸೋಮವಾರಪೇಟೆಯಲ್ಲಿ ಮುಸ್ಲಿಮ್ ಯುವಕರ ಮೇಲೆ ವಿನಾಕಾರಣ ಇಲ್ಲ ಸಲ್ಲದ ಆರೋಪ ಮಾಡಲಾಗುತ್ತಿದ್ದು, ಅವರ ವ್ಯಾಪಾರ ವಹಿವಾಟುಗಳನ್ನು ಕುಂಠಿತ ಗೊಳಿಸುವ ಪ್ರಯತ್ನ ನಡೆಯುತ್ತಿದೆ. ಕೋಮು ಭಾವನೆ ಮೂಡಿಸಲು ಕೆಲವೊಂದು ಸಂಘಟನೆ ಮತ್ತು ರಾಜಕೀಯ ನಾಯಕರು ಪ್ರಯತ್ನಿಸುತ್ತಿದ್ದು, ಇವರ ಒತ್ತಡಕ್ಕೆ ಮಣಿದ ಪೊಲೀಸರು ಅಮಾಯಕರನ್ನು ಬಂಧಿಸಿದ್ದಾರೆ ಎಂದು ಹಾರಿಸ್ ಆರೋಪಿಸಿದರು.

ಘಟನೆಯ ದಿನ ರಾತ್ರಿ ಕೆಲವೊಂದು ಅಮಾಯಕ ಯುವಕರ ಮನೆಗೆ ತೆರಳಿದ ಕೆಲವರು ಮನೆಯಲ್ಲಿದ್ದ ಮಹಿಳೆಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕ್ ಮತ್ತು ಕಾರುಗಳನ್ನು ಧ್ವಂಸ ಮಾಡಿದ್ದಾರೆ. ವರ್ಕ್ ಶಾಪಿನಲ್ಲಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಶಾಂತಿಯುತ ಸೋಮವಾರಪೇಟೆ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟು ಮಾಡಿದ್ದಾರೆ ಎಂದು ಆರೋಪಿಸಿದ ಅವರು ಶಾಂತಿ ಕದಡಲು ಪ್ರಯತ್ನಿಸುತ್ತಿರುವ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದರು.

ಹಲ್ಲೆಗೊಳಗಾದ ಮೋಹನ್, ವೈಯಕ್ತಿಕವಾಗಿ ಹಲವರ ದ್ವೇಷವನ್ನು ಕಟ್ಟಿಕೊಂಡಿದ್ದು, ಕಳೆದ 2-3 ತಿಂಗಳಿನಿಂದ ಕೆಲವು ಅಹಿತಕರ ಘಟನೆಗಳು ನಡೆದಿದೆ. ಪೊಲೀಸರು ಸೂಕ್ತ ತನಿಖೆ ನಡೆಸಿದಾಗ ಮಾತ್ರ ನೈಜ್ಯ ಆರೋಪಿಗಳನ್ನು ಬಂಧಿಸಲು ಸಾಧ್ಯವೆಂದು ಅವರು ಅಭಿಪ್ರಾಯಪಟ್ಟರು.

ಬಂಧಿತರಲ್ಲಿ ಒಬ್ಬರು ಬಾಲ ಆರೋಪಿಯಾಗಿದ್ದು, ಇವರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾದರೂ ಅದಕ್ಕೆ ಸಂಬಂಧಿಸಿದವರೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ವಲಯಾಧ್ಯಕ್ಷ ಜುನೈದ್, ಕಾರ್ಯದರ್ಶಿ ಇಸ್ಮಾಯೀಲ್ ಹಾಗೂ ಸದಸ್ಯ ಕಬೀರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X