ಜಿಲ್ಲಾ ಕಾಂಗ್ರೆಸ್‌ನಿಂದ ದಿನೇಶ್ ಗುಂಡೂರಾವ್‌ಗೆ ಸ್ವಾಗತ

ಮಡಿಕೇರಿ ಜೂ.22 : ರಾಜ್ಯ ಕಾಂಗ್ರೆಸ್‌ನ ನೂತನ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ ದಿನೇಶ್ ಗುಂಡೂರಾವ್ ಅವರನ್ನು ಬೆಂಗಳೂರಿನ ದೇವನಹಳ್ಳಿ ವಿಮಾನ ನಿಲ್ದಾಣ ದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್‌ನ ಪ್ರಮುಖರು ಆತ್ಮೀಯವಾಗಿ ಬರಮಾಡಿಕೊಂಡರು.
ನಂತರ ಕೆಪಿಸಿಸಿ ಕಚೇರಿಗೆ ತೆರಳಿದ ಮುಖಂಡರು ಹಾಗೂ ಪದಾಧಿಕಾರಿಗಳು ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಅಭಿನಂದಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾಗಿ ಉತ್ತಮ ಕಾರ್ಯ ನಿರ್ವಹಿಸಿರುವುದನ್ನು ಸ್ಮರಿಸಿದ ಪ್ರಮುಖರು, ಪಕ್ಷದ ಬಲವರ್ಧನೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ. ರಮೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಕೊಡವ ಸಾಹಿತ್ಯ ಅಕಾಡಮಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ, ಪಕ್ಷದ ವಕ್ತಾರ ಕೆ.ಕೆ. ಮಂಜುನಾಥ್ ಕುಮಾರ್, ವಕ್ಫ್ ಬೋರ್ಡ್ ಜಿಲ್ಲಾಧ್ಯಕ್ಷ ಅಬ್ದುಲ್ ರೆಹ್ಮಾನ್ ಕೆಎಸ್ಸಾರ್ಟಿಸಿ ನಿಗಮದ ನಿರ್ದೇಶಕ ಶೌಕತ್, ಜಿಲ್ಲಾ ಪಂಚಾಯತ್ ಸದಸ್ಯ ಪೃಥ್ಯು, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಯಾಕುಬ್ ಮತ್ತಿತರ ಮುಖಂಡರಿದ್ದರು.





