Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೂ.24ರಂದು ‘ಮಹೀಂದ್ರಾ ಅಡ್ವೆಂಚರ್...

ಜೂ.24ರಂದು ‘ಮಹೀಂದ್ರಾ ಅಡ್ವೆಂಚರ್ ಮಾನ್ಸೂನ್ ಚಾಲೆಂಜ್ 2016’ ಮೋಟಾರ್ ರ್ಯಾಲಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ23 Jun 2016 11:34 PM IST
share

ಮಂಗಳೂರು, ಜೂ. 22: ಮಹೀಂದ್ರ ಅಡ್ವೆಂಚರ್ ತಂಡವು ಇಂಡಿಯನ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ ಆಫ್ ಇಂಡಿಯಾ (ಐಎಂಎಸ್‌ಸಿ) ಸಹಯೋಗದೊಂದಿಗೆ ನಡೆಯಲಿರುವ ಮಹೀಂದ್ರಾ ಅಡ್ವೆಂಚರ್ ಮಾನ್ಸೂನ್ ಚಾಲೆಂಜ್ 2016 ಮೋಟಾರ್ ರ್ಯಾಲಿಗೆ ನಗರದ ಫಿಝಾ ಫೋರಂ ಮಾಲ್‌ನಲ್ಲಿ ಜೂನ್ 24ರಂದು ಸಂಜೆ 6 ಗಂಟೆಗೆ ಚಾಲನೆ ದೊರಕಲಿದೆ ಎಂದು ಮಹೀಂದ್ರಾ ಅಡ್ವೆಂಚರ್‌ನ ಸೀನಿಯರ್ ಮ್ಯಾನೇಜರ್ ಕೆ.ಎಸ್.ವೆಂಕಟೇಶ್ ತಿಳಿಸಿದ್ದಾರೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಯೆಟ್ ಟಯರ್ ಸಂಸ್ಥೆಯು ಪ್ರಸ್ತುತ ಪಡಿಸುವ ಅತಿದೊಡ್ಡ ಟಿಎಸ್‌ಡಿ (ಟೈಮ್, ಸ್ಪೀಡ್, ಡಿಸ್ಟೆನ್ಸ್) ರ್ಯಾಲಿ ಆಗಿದ್ದು, 30ಕ್ಕೂ ಅಧಿಕ ವಾಹನಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ವಾಹನಗಳು ಎರಡು ದಿನಗಳಲ್ಲಿ 650 ಕಿ.ಮೀ. ದೂರ ಸಂಚರಿಸಲಿದೆ ಎಂದರು.

ರ್ಯಾಲಿಯು ವೇಗದ ಜೊತೆಗೆ ನಿಗದಿತ ಅವಧಿಯಲ್ಲಿ ನಿಗದಿತ ಅಂತರ ಕ್ರಮಿಸುವ ಗುರಿಯನ್ನೂ ಹೊಂದಿದೆ. ಚಾಲಕ ಮತ್ತು ಮಾರ್ಗದರ್ಶಕ ಇಬ್ಬರೂ ಅಂತರ ಮತ್ತು ಸಮಯದ ಮೇಲೆ ನಿಗಾ ಇಟ್ಟಿರಬೇಕು. ಶುಕ್ರವಾರ ಚಾಲನೆ ದೊರಕುವ ರ್ಯಾಲಿಯು ಮಂಗಳೂರಿನಿಂದ ಪ್ರಾರಂಭಗೊಂಡು ಶಿವಮೊಗ್ಗಕ್ಕೆ ತೆರಳಲಿದ್ದು, ಅಲ್ಲಿಂದ ಗೋವಾಕ್ಕೆ ಜೂನ್ 26ಕ್ಕೆ ತಲುಪಲಿದೆ. ಮಾರ್ಗದುದ್ದಕ್ಕೂ ಹೆದ್ದಾರಿಗಳು, ಬಿ ರಸ್ತೆಗಳು, ಕಚ್ಚಾ ರಸ್ತೆಗಳು, ಪಶ್ಚಿಮಘಟ್ಟ ಪ್ರದೇಶಗಳು ಇರಲಿವೆ.

ಈ ಸವಾಲಿನಡಿ ಸ್ಪರ್ಧಿಗಳು ಯಾವುದೇ ವಿಭಾಗದಲ್ಲೂ ಭಾಗವಹಿಸಬಹುದು. ಚಾಲೆಂಜ್ (ಪ್ರೊಫೆಷನಲ್) ಅಮೆಚೂರ್, ಕಾರ್ಪೊರೇಟ್, ಲೇಡಿಸ್, ಕಪಲ್ ಮತ್ತು ಮೀಡಿಯಾ ವಿಭಾಗದಲ್ಲಿ ಪಾಲ್ಗೊಳ್ಳಬಹುದು. ‘ವಿದ್ ಯು ಹಮೇಶಾ’ ಸೇವಾ ತಂಡವು ರ್ಯಾಲಿಯುದ್ದಕ್ಕೂ ಸ್ಪರ್ಧಿಗಳಿಗೆ ಸೇವೆ ಒದಗಿಸಲು ಸಜ್ಜಾಗಿರುತ್ತದೆ. 4 ಲಕ್ಷ ರೂ. ಮೊತ್ತದ ಬಹುಮಾನ ಇದೆ ಎಂದು ವೆಂಕಟೇಶ್ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಿಯೆಟ್ ಟಯರ್ ಸಂಸ್ಥೆಯ ಪ್ರೊಡಕ್ಟ್ ಮ್ಯಾನೇಜರ್ ಸುನಿಲ್, ಕರ್ನಾಟಕ ಏಜೆನ್ಸಿ ಮಂಗಳೂರಿನ ಆಡಳಿತ ಪಾಲುದಾರ ಸಂತೋಷ್ ರಾಡ್ರಿಗಸ್, ಐಎಂಎಸ್‌ಸಿ ಅಧ್ಯಕ್ಷ ಮೂಸಾ ಶರೀಫ್, ಕಾರ್ಯದರ್ಶಿ ಅಶ್ವಿನ್ ನಾಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X