ಹೆಚ್ಚುತ್ತಿರುವ ಅಪಘಾತಗಳು: ಮುಂಜಾಗ್ರತಾ ಕ್ರಮಕ್ಕೆ ಒತ್ತಾಯ
ಮಂಗಳೂರು, ಜೂ.23: ರಾಷ್ಟ್ರೀಯ ಹೆದ್ದಾರಿ ಹಾಗೂ ಇತರ ಪ್ರಮುಖ ರಸ್ತೆಗಳಲ್ಲಿ ಪ್ರತಿ ದಿನ ಅಪಘಾತಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ದ.ಕ. ಹಾಗೂ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್. ಮುಹಮ್ಮದ್ ಮಸೂದ್, ಉಪಾಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್, ಕೆ.ಅಶ್ರಫ್, ಹಾಜಿ ಅಹ್ಮದ್ ಬಾಷಾ ತಂಙಳ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್ ಒತ್ತಾ ಯಿಸಿದರು. ಅಲ್ಲದೆ ನಗರದಲ್ಲಿ ಪದೇ ಪದೇ ಸಂಭವಿಸುವ ಟ್ರಾಫಿಕ್ ಜಾಮ್ ನಿವಾರಿಸಲು ಕೂಡ ಸೂಕ್ತ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ.
Next Story





