ನಾಳೆ ಮಾದಕ ವಸ್ತು ವಿರುದ್ಧ ಜನಜಾಗೃತಿ ಜಾಥಾ
ಮಂಗಳೂರು, ಜೂ.23: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಆಶ್ರಯದಲ್ಲಿ ಜೂ.25ರಂದು ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಹಾಗೂ ಜನಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮುಹಮ್ಮದ್ ಇಸ್ಮಾಯೀಲ್, ನಗರದ ಪುರಭವನದಲ್ಲಿ ಬೆಳಗ್ಗೆ 9 ಗಂಟೆಗೆ ಸಚಿವ ಯು.ಟಿ.ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದರು. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ, ಎಂ.ಆರ್. ರಂಗಶ್ಯಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಉಮರಬ್ಬ, ತಿಮ್ಮಯ್ಯ ನಾಯಕ್, ಉದಯ ಆಳ್ವ ಉಪಸ್ಥಿತರಿದ್ದರು.
Next Story





