ವಾರಸುದಾರರಿಗೆ ಸೂಚನೆ
ಉಡುಪಿ, ಜೂ.23: ಅಜ್ಜರಕಾಡಿನಲ್ಲಿರುವ ಉಡುಪಿ ಜಿಲ್ಲಾಸ್ಪತ್ರೆಗೆ ಜೂ.14 ರಂದು ಒಳರೋಗಿಯಾಗಿ ದಾಖಲಾದ ಸುಮಾರು 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ. *ಅದೇ ರೀತಿ ಜೂ.16ರಂದು ಜಿಲ್ಲಾಸ್ಪತ್ರೆಗೆ ಒಳರೋಗಿಯಾಗಿ ದಾಖಲು ಮಾಡ ಲಾದ ಸುಮಾರು 65 ವರ್ಷ ಪ್ರಾಯದ ಬೊಗ್ಗು ಎಂಬ ವೃದ್ಧರ ಸ್ಥಿತಿ ಚಿಂತಾ ಜನಕವಾಗಿದೆ. ಈ ಇಬ್ಬರ ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರದ ದೂರವಾಣಿ ಸಂಖ್ಯೆ 0820-2520555ನ್ನು ಸಂಪರ್ಕಿಸುವಂತೆ ಆಸ್ಪತ್ರೆಯ ಪ್ರಕಟನೆ ತಿಳಿಸಿದೆ.
Next Story