ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳಿಗೆ ಅನಾರೋಗ್ಯ

ತುಮಕೂರು,ಜೂ.24: ತ್ರಿವಿಧ ದಾಸೋಹ ಸ್ವಾಮೀಜಿ ಸಿದ್ದಗಂಗಾ ಮಠದ ಶಿವಕುಮಾರ್ ಶ್ರೀಗಳು ಅನಾರೋಗ್ಯದಿಂದ ಬಳಲುತ್ತಿದ್ದಾರೆ.
109ರ ಹರೆಯದ ಸ್ವಾಮೀಜಿ ಜ್ವರದಿಂದ ಬಳಲುತ್ತಿರುವುದಾಗಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ಬಿಜಿಎಸ್ ಆಸ್ಪತ್ರೆಯ ಉಪಾಧ್ಯಕ್ಷ ಡಾ.ವೆಂಕಟರಮಣ ತಿಳಿಸಿದ್ದಾರೆ. ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Next Story





