ಬಾಳಿಗಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈ ಬಂಧನ?

ಮಂಗಳೂರು, ಜೂ. 22: ಮಾರ್ಚ್ 21ರಂದು ನಗರದಲ್ಲಿ ನಡೆದ ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಮೋ ಬ್ರಿಗೇಡ್‌ನ ಸಂಸ್ಥಾಪಕ ನರೇಶ್ ಶೆಣೈಯನ್ನು ಇಂದು ನಗರ ಪೊಲೀಸರು ಬಂಧಿಸಿದ್ದಾರೆ ಎಂಬ ವದಂತಿ ವ್ಯಾಪಕವಾಗಿ ಹರಡಿದ್ದು, ಆದರೆ, ಪೊಲೀಸರು ಬಂಧನವನ್ನು ನಿರಾಕರಿಸಿದ್ದಾರೆ.
ನರೇಶ್ ಶೆಣೈಯನ್ನು ಗುರುವಾರ ರಾತ್ರಿ ನಗರ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ ಬಂಧನವನ್ನು ನಗರ ಪೊಲೀಸ್ ಆಯುಕ್ತ ಚಂದ್ರಶೇಖರ್ ಎಂ. ಹಾಗೂ ಕೊಲೆ ಪ್ರಕರಣ ತನಿಖಾಧಿಕಾರಿಯಾಗಿರುವ ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ತಿಲಕ್‌ಚಂದ್ರ ಅವರು ನಿರಾಕರಿಸಿದ್ದಾರೆ.
ಬಾಳಿಗಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನರೇಶ್ ಶೆಣೈ ಸೇರಿದಂತೆ ಏಳು ಮಂದಿಯ ವಿರುದ್ಧ ನಗರ ಪೊಲೀಸರು ಗುರುವಾರ ಮಂಗಳೂರಿನ ಜೆಎಂಎಫ್‌ಸಿ ಮೂರನೆ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಿದ್ದರು.
Next Story





