ಜೂ.26ರಂದು ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಸಭೆ

ಮಂಗಳೂರು,ಜೂ.24: ವಿದ್ಯಾರ್ಥಿಗಳನ್ನು ಕರೆಯೊಯ್ಯುವ ವಾಹನಗಳಲ್ಲಿ ಸುರಕ್ಷತೆಯ ಕುರಿತಂತೆ ಜೂ.26ರಂದು ಬೆಳಿಗ್ಗೆ 11 ಗಂಟೆಗೆ ಪುತ್ತೂರಿನ ಕೊಂಬೆಟ್ಟು ಬಂಟರ ಭವನದಲ್ಲಿ ದ.ಕ. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸಭೆಯನ್ನು ಆಯೋಜಿಸಲಾಗಿದೆ.
ಸಭೆಗೆ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರು, ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷರು, ಶಾಲಾ ಆಡಳಿತ ಮಂಡಳಿ, ವಾಹನ ಚಾಲಕರು ಹಾಗೂ ಪೋಷಕರನ್ನು ಆಹ್ವಾನಿಸಲಾಗಿದೆ.
ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
Next Story





