Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೆಳೆತನದ ಹುಚ್ಚಾಟದಲ್ಲಿ ಗೆಳೆಯನಿಂದಲೇ...

ಗೆಳೆತನದ ಹುಚ್ಚಾಟದಲ್ಲಿ ಗೆಳೆಯನಿಂದಲೇ ಪ್ರಾಣ ಕಳಕೊಂಡ ಅಪ್ರಾಪ್ತ ವಯಸ್ಸಿನ ಬಾಲಕಿ!

ವಾರ್ತಾಭಾರತಿವಾರ್ತಾಭಾರತಿ25 Jun 2016 4:12 PM IST
share
ಗೆಳೆತನದ ಹುಚ್ಚಾಟದಲ್ಲಿ ಗೆಳೆಯನಿಂದಲೇ ಪ್ರಾಣ ಕಳಕೊಂಡ ಅಪ್ರಾಪ್ತ ವಯಸ್ಸಿನ ಬಾಲಕಿ!

ಔರೈಯಾ, ಜೂನ್ 25: ಅಪ್ರಾಪ್ತ ಬಾಯ್ ಫ್ರೆಂಡ್ ತನ್ನ ಗರ್ಲ್‌ಫ್ರೆಂಡನ್ನೇ ಕಗ್ಗೊಲೆಗೈದ ಹೃದಯ ವಿದ್ರಾವಕ ಘಟನೆ ದಿಲ್ಲಿಯಿಂದ ವರದಿಯಾಗಿದೆ. ಗರ್ಲ್‌ಫ್ರೆಂಡ್ ಮದುವೆಮಾಡಿಕೊಳ್ಳುವಂತೆ ಒತ್ತಾಯಿಸಿದ್ದರಿಂದ ಕಂಗೆಟ್ಟ ಅಪ್ರಾಪ್ತ ವಯಸ್ಸಿನ ಬಾಲಕ ತನ್ನ ಸಹೋದರನೊಂದಿಗೆ ಸೇರಿ ರೆಡ್‌ಲೈಟ್ ಏರಿಯಾಕ್ಕೆ ಮಾರಲು ಯತ್ನಿಸಿ ವಿಫಲನಾದಾಗ ಇಬ್ಬರೂ ಸೇರಿ ಬಾಲಕಿಯನ್ನು ಹತ್ಯೆಗೈದರೆಂದು ಪೊಲಿಸರು ತಿಳಿಸಿದ್ದಾರೆ. ಪೊಲೀಸರ ವಶದಲ್ಲಿರುವ ಆರೋಪಿಗಳನ್ನು ಪ್ರಶ್ನಿಸಲಾಗುತ್ತಿದೆ.

ದಿಲ್ಲಿಯ ಕೃಷ್ಣನಗರದಿಂದ ಹದಿನಾರು ವರ್ಷದ ಹುಡುಗಿಯೊಬ್ಬಳು ನಾಪತ್ತೆಯಾಗಿದ್ದಾಳೆ ಎಂದು ಪೊಲೀಸರಿಗೆ ಮಾರ್ಚ್ 18ರಂದು ದೂರು ನೀಡಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಂದ ಯಾವುದೇ ಸುಳಿವು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಬಾಲಕಿಯ ಮೊಬೈಲ್ ಮನೆಯಲ್ಲೇ ಇತ್ತು. ಆದ್ದರಿಂದ ಪತ್ತೆಹಚ್ಚುವುದು ಪೊಲೀಸರಿಗೆ ತೀರಾ ಕಷ್ಟವಾಗಿ ಪರಿಣಮಿಸಿತ್ತು. ಹೀಗಿರುವಾಗ ಬಾಲಕಿ ಎರಡು ತಿಂಗಳ ಹಿಂದೆ ಉತ್ತರ ಪ್ರದೇಶದ ಔರೈಯ್ಯೆ ಜಿಲ್ಲೆಯ ಯಾವುದೋ ಸಂಬಂಧಿಕರ ಮನೆಗೆ ಹೋಗಿದ್ದಳು ಎಂದು ಮಾಹಿತಿ ಪೊಲೀಸರಿಗೆ ಸಿಕ್ಕಿತು. ಈ ಜಾಡು ಹಿಡಿದು ಅಲ್ಲಿಗೆ ಹೋಗಿ ಪೊಲೀಸರು ತನಿಖೆ ಆರಂಭಿಸಿದ್ದರು.

ಔರೈಯ್ಯದಲ್ಲಿ ಬಾಲಕಿಗೊಬ್ಬ ಗೆಳೆಯನಿದ್ದಾನೆ ಎಂದು ಪೊಲೀಸರು ತನಿಖೆಯಲ್ಲಿ ಕಂಡುಹುಡುಕುವಲ್ಲಿ ಯಶಸ್ವಿಯಾದರು. ಮಾತ್ರವಲ್ಲ ಆತ ಕಳೆದ ತಿಂಗಳು ಊರಿನಿಂದ ಕಾಣೆಯಾಗಿದ್ದಾನೆ ಎಂಬ ವಿವರವೂ ಪೊಲೀಸರಿಗೆ ದೊರಕಿತು. ಆತ ದಿಲ್ಲಿಯಲ್ಲಿದ್ದಾನೆ ತಿಳಿದಾಗ ಪೊಲೀಸರು ದಿಲ್ಲಿಗೆ ಮರಳಿ ಆತನನ್ನು ಬಂದಿಸಲು ಯಶಸ್ವಿಯಾದರು. ಆರೋಪಿಯೂ ಅಪ್ರಾಪ್ತ ವಯಸ್ಸಿನ ಹುಡುಗನಾಗಿದ್ದ. ಗರ್ಲ್‌ಫ್ರೆಂಡ್‌ನ್ನು ಕೊಲೆಗೈದುದಾಗಿ ಆತ ಪೊಲೀಸರಲ್ಲಿ ಒಪ್ಪಿಕೊಂಡಿದ್ದಾನೆ. ಮೊದಲಿನಿಂದಲೂ ಪರಿಚಿತಳಾಗಿದ್ದ ಬಾಲಕಿಯನ್ನು ಭೇಟಿಯಾಗಲು ಆತ ದಿಲ್ಲಿಗೆ ಬಂದಿದ್ದ. ನಂತರ ಇಬ್ಬರು ಫೋನ್‌ನಲ್ಲಿ ಮಾತಾಡಿಕೊಂಡು ತುಘಲಕಾಬಾದ್‌ನಲ್ಲಿದ್ದ ತನ್ನ ಸಹೋದರನ ಮನೆಗೆ ಅವಳನ್ನು ಕರೆಯಿಸಿಕೊಂಡಿದ್ದ. ಅಲ್ಲಿಯೇ ಮೂವರೂ ಉಳಿದುಕೊಂಡಿದ್ದರು. . ತನ್ಮಧ್ಯೆ ಬಾಲಕಿ ಆ ಅಪ್ರಾಪ್ತ ಬಾಲಕನಲ್ಲಿ ಮದುವೆ ಆಗುವಂತೆ ಒತ್ತಾಯಿಸಿದ್ದಳು. ಮದುವೆಯಾಗಲು ನಿರಾಕರಿಸಿದಾಗ ಆತನ ಅಣ್ಣನನ್ನು ಮದುವೆಯಾಗುವಂತೆ ಬಾಲಕಿ ಒತ್ತಾಯಿಸತೊಡಗಿದ್ದಾಳೆ. ಆತನಿಗೆ ಮೊದಲಿಂದಲೂ ಒಬ್ಬಳು ಗರ್ಲ್‌ಫ್ರೆಂಡ್ ಇದ್ದಳಾದ್ದರಿಂದ ಆತ ಇಕ್ಕಟ್ಟಿಗೆ ಸಿಲುಕಿದ್ದ ಅಂತಿಮವಾಗಿ ಹುಡುಗಿಗೆ ಒಂದು ಗತಿ ತೋರಿಸುವ ನಿರ್ಧಾರಕ್ಕೆ ಅವರಿಬ್ಬರೂ ಬಂದಿದ್ದರು. ಮೊದಲು ದಿಲ್ಲಿಯ ರೆಡ್‌ಲೈಟ್ ಏರಿಯದಲ್ಲಿ ಮಾರಲು ಯತ್ನಿಸಿ ಅದಾಗದಾಗ ಬಾಲಕಿಯನ್ನು ಹತ್ಯೆಗೈದಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X