Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರವಾರ: ಮೈಕ್ರೋಮ್ಯಾಕ್ಸ್ ಮೊಬೈಲ್...

ಕಾರವಾರ: ಮೈಕ್ರೋಮ್ಯಾಕ್ಸ್ ಮೊಬೈಲ್ ಕಂಪೆನಿಗೆ ದಂಡ

ಕಳಪೆ ಗುಣಮಟ್ಟದ ಮೊಬೈಲ್ ಪೂರೈಕೆ

ವಾರ್ತಾಭಾರತಿವಾರ್ತಾಭಾರತಿ25 Jun 2016 6:06 PM IST
share
ಕಾರವಾರ: ಮೈಕ್ರೋಮ್ಯಾಕ್ಸ್ ಮೊಬೈಲ್ ಕಂಪೆನಿಗೆ ದಂಡ

ಕಾರವಾರ, ಜೂ.25: ಕಳಪೆ ಗುಣಮಟ್ಟದ ಮೊಬೈಲ್ ಮಾರಾಟ ಮಾಡಿ ಗ್ರಾಹಕರನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ಗ್ರಾಹಕ ವೇದಿಕೆ ಮೈಕ್ರೋಮ್ಯಾಕ್ಸ್ ಮೊಬೈಲ್ ಕಂಪೆನಿಗೆ ದಂಡ ವಿಧಿಸಿದೆ. ಶನಿವಾರ ಬೆಳಗ್ಗೆ ಜಿಲ್ಲಾ ಗ್ರಾಹಕ ವೇದಿಕೆಯಲ್ಲಿ ಮೈಕ್ರೋಮ್ಯಾಕ್ಸ್ ಕಂಪೆನಿ ಪರ ವಕೀಲರು ಗ್ರಾಹಕರಿಗೆ ದಂಡದ ಮೊತ್ತವನ್ನು ಪರಿಹಾರ ರೂಪದಲ್ಲಿ ವಿತರಿಸಿದರು. 

ಯಲ್ಲಾಪುರದ ನಕ್ಷತ್ರ ಮೊಬೈಲ್‌ನಲ್ಲಿ ತಟಗಾರ ಗ್ರಾಮದ ಜೋಗದಮನೆಯ ವಿನಾಯಕ ನಾರಾಯಣ ಭಟ್ ಎಂಬವರು 7,000 ಸಾವಿರ ರೂ. ನೀಡಿ ಮೈಕ್ರೊಮಾಕ್ಸ್ ಮೊಬೈಲ್ ಖರೀದಿಸಿದ್ದರು. ಆದರೆ ಮೊಬೈಲ್ ಗುಣಮಟ್ಟದಿಂದ ಕೂಡಿರಲಿಲ್ಲ. ಖರೀದಿಸಿದ ಮೊಬೈಲ್‌ಗೆ ಒಂದು ವರ್ಷದ ವಾರಂಟಿ ಇದ್ದು, ಎರಡು ಬಾರಿ ದುರಸ್ತಿ ಮಾಡಿಸಿದ್ದರೂ ಸರಿಯಾಗಿರಲಿಲ್ಲ. ಪರ್ಯಾಯವಾಗಿ ಗುಣಮಟ್ಟದ ಮೊಬೈಲ್ ವಿತರಿಸುವಂತೆ ವಿನಾಯಕ ಭಟ್ ಕೇಳಿದಾಗ ಅಂಗಡಿಯವರು ಹಾರಿಕೆ ಉತ್ತರ ನೀಡುತ್ತಿದ್ದರು. ಇದಾದ ನಂತರ ಕಂಪೆನಿಗೆ ದೂರಿದರೂ ಸೂಕ್ತ ಸ್ಪಂದನೆ ದೊರೆಯದ ಕಾರಣ ನ್ಯಾಯ ಕೋರಿ ಗ್ರಾಹಕ ವೇದಿಕೆಗೆ ದೂರು ಸಲ್ಲಿಸಿದ್ದರು.

ಮೊಬೈಲ್ ಅಂಗಡಿಯವರು ದುರಸ್ತಿಗೆಂದು ನೀಡಿದ ಮೊಬೈಲ್‌ನ್ನು ಸಕಾಲಕ್ಕೆ ಮರಳಿಸದೇ ಸೇವಾ ನ್ಯೂನ್ಯತೆ ಪ್ರದರ್ಶಿಸಿದ್ದರು. ಅದಾದ ನಂತರ ಮೊಬೈಲ್ ಹಿಂತಿರುಗಿಸದೇ ಮೋಸ ಮಾಡಲು ಯತ್ನಿಸಿದ್ದಾರೆ ಎಂದು ವಿನಾಯಕ ಭಟ್ ಜಿಲ್ಲಾ ಗ್ರಾಹಕ ವೇದಿಕೆಗೆ ದೂರು ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಗ್ರಾಹಕ ವೇದಿಕೆ ಅಧ್ಯಕ್ಷ ವಿಶ್ವೇಶ್ವರ ಭಟ್, ಕಂಪೆನಿ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡರು. ದೂರುದಾರರಿಗೆ ಪರಿಹಾರ ರೂಪದಲ್ಲಿ 33,500 ರೂ. ವಿತರಿಸುವಂತೆ ಆದೇಶಿಸಿದ್ದರು. ಈ ಆದೇಶವನ್ನು ಉಲ್ಲಂಘಿಸಲು ಕಂಪೆನಿ ಯತ್ನಿಸಿದಾಗ ಕಾನೂನಿನಲ್ಲಿ ಅವಕಾಶ ಇರುವಂತೆ ಆದೇಶ ಉಲ್ಲಂಘನೆ ಮಾಡುವವರನ್ನು ಬಂಧಿಸಿ, ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿ ತಮಗೆ ಪರಿಹಾರ ವಿತರಿಸುವಂತೆ ದೂರುದಾರರು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ವೇಳೆ ಹಾಜರಾದ ಮೈಕ್ರೊಮ್ಯಾಕ್ಸ್ ಕಂಪೆನಿ ಪರ ವಕಿಲರು ಪರಿಹಾರದ ಮೊತ್ತವನ್ನು ವಿತರಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X