Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಜಮಾಡಿ: ಟೋಲ್‌ಗೇಟ್ ವಿರುದ್ಧ...

ಹೆಜಮಾಡಿ: ಟೋಲ್‌ಗೇಟ್ ವಿರುದ್ಧ ಪ್ರತಿಭಟನೆ; ಸಮಸ್ಯೆ ಪರಿಹಾರಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ25 Jun 2016 8:07 PM IST
share
ಹೆಜಮಾಡಿ: ಟೋಲ್‌ಗೇಟ್ ವಿರುದ್ಧ ಪ್ರತಿಭಟನೆ; ಸಮಸ್ಯೆ ಪರಿಹಾರಕ್ಕೆ ಒತ್ತಾಯ

ಪಡುಬಿದ್ರೆ, ಜೂ.25: ಹೆಜಮಾಡಿಯಲ್ಲಿ ನಿರ್ಮಾಣಗೊಂಡಿರುವ ಬೃಹತ್ ಟೋಲ್‌ಗೇಟ್ ಹಾಗೂ ಟ್ರಕ್ ಯಾರ್ಡ್‌ನಿಂದಾಗುವ ಸಮಸ್ಯೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೆಜಮಾಡಿ ನಾಗರಿಕ ಹೋರಾಟ ಸಮಿತಿ ನೇತೃತ್ವದಲ್ಲಿ ಹೆಜಮಾಡಿಯಲ್ಲಿ ಶನಿವಾರ ಪ್ರತಿಟನೆ ನಡೆಯಿತು.

ಹೆಜಮಾಡಿಯ ಟೋಲ್‌ಗೇಟ್ ಬಳಿ ಜಮಾಯಿಸಿದ ಹೆಜಮಾಡಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಟೋಲ್‌ಗೇಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹಿಸಬಾರದು. ಸ್ಥಳೀಯ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಬೇಕು, ಜನ ಸಂಚಾರಕ್ಕೆ ಅನುಕೂಲವಾಗುವಂತೆ ಅಂಡರ್ ಪಾಸ್ ನಿರ್ಮಿಸಬೇಕು. ಟೋಲ್‌ಗೇಟ್ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡವರಿಗೆ ನಿವೇಶನ ಹಂಚಿಕೆ ಹಾಗೂ ಹೆಚ್ಚಿನ ಪರಿಹಾರ ನೀಡಬೇಕು. ಪಡುಬಿದ್ರೆ ಬೀಡು ಬಳಿಯ ಸುಜ್ಲಾನ್ ಗೇಟ್‌ನಿಂದ ಕಣ್ಣಂಗಾರ್ ಬೈಪಾಸ್‌ವರೆಗೆ ಶೀಘ್ರ ಸರ್ವಿಸ್ ರಸ್ತೆ ನಿರ್ಮಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಡಿಸಿ ನೇತೃತ್ವದಲ್ಲಿ ಸಭೆ

ಟೋಲ್‌ಗೇಟ್ ಹಾಗೂ ಟ್ರಕ್‌ಯಾರ್ಡ್‌ನಿಂದಾಗುವ ಸಮಸ್ಯೆ ಪರಿಹರಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಒಂದು ವಾರದಲ್ಲಿ ಸಭೆ ನಡೆಸಲಾಗುವುದು ಎಂದು ಶಾಸಕ ವಿನಯಕುಮಾರ್ ಸೊರಕೆ ಹೇಳಿದರು.

ಗ್ರಾ.ಪಂ ಹಾಗೂ ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆಗಳನ್ನು ಪರಿಹರಿಸಬೇಕು. ಇಲ್ಲವಾದರೆ ಕ್ಷೇತ್ರದ ಜನರನ್ನು ಸೇರಿಸಿಕೊಂಡು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಕಂದಾಯ ಅಧಿಕಾರಿ ಅಸಾದಿ ಹಾಗೂ ನವಯುಗ ನಿರ್ಮಾಣ ಸಂಸ್ಥೆಯ ಉಪ ಯೋಜನಾ ವ್ಯವಸ್ಥಾಪಕ ಎಂ.ವಿ.ವಿ. ಶ್ರೀನಿವಾಸ್‌ರಿಗೆ ಮನವಿ ಸಲ್ಲಿಸಲಾಯಿತು. ಶಾಸಕ ವಿನಯಕುಮಾರ್ ಸೊರಕೆ ಹಾಗೂ ಉಡುಪಿಯ ಉಪ ತಹಶೀಲ್ದಾರ್ ಅಸದಿಯವರಿಗೆ ಹೋರಾಟ ಸಮಿತಿಯ ವತಿಯಿಂದ ಮನವಿಯನ್ನು ಹಸ್ತಾಂತರಿಸಲಾಯಿತು.

ಜಿ.ಪಂ. ಸದಸ್ಯ ಶಶಿಕಾಂತ ಪಡುಬಿದ್ರೆ, ಹೆಜಮಾಡಿ ಗ್ರಾ. ಪಂ. ಅಧ್ಯಕ್ಷೆ ವಿಶಾಲಾಕ್ಷಿ ಪುತ್ರನ್, ಉಪಾಧ್ಯಕ್ಷ ಸುಧಾಕರ ಕರ್ಕೇರ, ಹೋರಾಟ ಸಮಿತಿಯ ಅಧ್ಯಕ್ಷ ಗುಲಾಂ ಮುಹಮ್ಮದ್, ಗೌರವಾಧ್ಯಕ್ಷ ಶಂಕರ ಶೆಟ್ಟಿ ಪಟೇಲ ಮನೆ, ಪ್ರಧಾನ ಕಾರ್ಯದರ್ಶಿ ಶೇಖರ ಹೆಜಮಾಡಿ, ಅಶೋಕ ದೇವಾಡಿಗ, ಅಬ್ದುಲ್ ಅಜೀಝ್, ನವೀನ್‌ಚಂದ್ರ ಶೆಟ್ಟಿ, ವೈ, ದೀಪಕ್ ಇದ್ದರು.

  
ಹೆಜಮಾಡಿ ನಾಗರಿಕ ಹೋರಾಟ ಸಮಿತಿಯ ಅಧ್ಯಕ್ಷ ಗುಲಾಂ ಮುಹಮ್ಮದ್, ಪ್ರಧಾನ ಕಾರ್ಯದರ್ಶಿ ಶೇಖರ ಹೆಜಮಾಡಿ, ಜಿಲ್ಲಾ ಪಂಚಾಯತ್ ಸದಸ್ಯ ಶಶಿಕಾಂತ್ ಪಡುಬಿದ್ರೆ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ, ಅಬ್ದುಲ್ ಅಜೀಝ್ ಹೆಜಮಾಡಿ, ಶಂಕರ ಶೆಟ್ಟಿ ಪಟೇಲರ ಮನೆ, ವಾಮನ ಕೋಟ್ಯಾನ್ ಮತ್ತಿತರರು ಮಾತಾಡಿದರು.

ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ ಪುತ್ರನ್, ಉಪಾಧ್ಯಕ್ಷ ಸುಧಾಕರ ಕರ್ಕೇರ, ಶೇಷಗಿರಿ ರಾವ್, ರಾಲಿ ಡಿ‘ಕೋಸ್ಟ, ಮಾಧವ ಸನಿಲ್, ಲಲಿತಾ ಸಾಲ್ಯಾನ್, ಕಿನ್ನಿಗೋಳಿ ವಲಯ ಬಸ್ ಮಾಲಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ಹೆಗ್ಡೆ, ಕಾರ್ಯದರ್ಶಿ ಸ್ವರಾಜ್ ಶೆಟ್ಟಿ,, ಲಾರಿ ಚಾಲಕ ಮಾಲಕರ ಸಂಘ ಮೂಲ್ಕಿ, ಅಶ್ರಫ್ ಕರ್ನಿರೆ, ಆಟೊ ರಿಕ್ಷಾ ಚಾಲಕ ಮಾಲಕರ ಸಂಘ ಹೆಜಮಾಡಿ, ಪದ್ಮನಾ ಸುವರ್ಣ, ವಸಂತ ದೇವಾಡಿಗ, ಕುಸುಮ ಸಾಲ್ಯಾನ್, ಅಬ್ಬಾಸ್ ಹಾಜಿ ಕನ್ನಂಗಾರ್, ಶೇಕಬ್ಬ ಕೋಟೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X