Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳ...

ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳ ಕುರಿತು ಸಮಾಜ ಜಾಗೃತವಾಗಬೇಕು: ಪ್ರೊ.ಹಿಲ್ಡಾ ರಾಯಪ್ಪನ್

ವಾರ್ತಾಭಾರತಿವಾರ್ತಾಭಾರತಿ25 Jun 2016 10:00 PM IST
share
ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳ ಕುರಿತು ಸಮಾಜ ಜಾಗೃತವಾಗಬೇಕು: ಪ್ರೊ.ಹಿಲ್ಡಾ ರಾಯಪ್ಪನ್

ಬಂಟ್ವಾಳ, ಜೂ.25: ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತಾಗಿ ನಾಗರಿಕ ಸಮಾಜ ಜಾಗೃತವಾಗಬೇಕು. ಪೊಕ್ಸೊದಂತಹ ಕಾನೂನುಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ ಹಾಕಬೇಕಿದೆ ಎಂದು ಮಂಗಳೂರು ಪ್ರಜ್ಞಾ ಸಲಹಾ ಕೇಂದ್ರದ ನಿರ್ದೇಶಕಿ ಪ್ರೊ.ಹಿಲ್ಡಾ ರಾಯಪ್ಪನ್ ಹೇಳಿದರು.

ಮಂಗಳೂರಿನ ಪ್ರಜ್ಞಾ ಸಲಹಾ ಕೇಂದ್ರದ ಹೆಣ್ಣು ಮಕ್ಕಳ ಸಂರಕ್ಷಣಾ ಹಕ್ಕುಗಳನ್ನು ಬಲಪಡಿಸುವ ಯೋಜನೆಯ ವತಿಯಿಂದ ಅಧ್ಯಾಪಕ ಒಕ್ಕೂಟದ ಸದಸ್ಯರು, ಮಹಿಳಾ ಒಕ್ಕೂಟದ ಸದಸ್ಯರು ಹಾಗೂ ಯುವಕ ಸಂಘದ ಆಶ್ರಯದಲ್ಲಿ ಶನಿವಾರ ಬಿ.ಸಿ.ರೋಡಿನ ಎಸ್‌ಜೆಎಸ್‌ಆರ್‌ವೈ ಸಭಾಂಗಣದಲ್ಲಿ ನಡೆದ ಲಿಂಗಾಧಾರಿತ ತಾರತಮ್ಯ ಮತ್ತು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಕುರಿತ ಜಾಗೃತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.

ಸಾಮಾಜಿಕವಾಗಿ ಮಹಿಳೆಯರು ಮುನ್ನಡೆಯಬೇಕೆನ್ನುವ ಆಶಯವಿದ್ದರೂ ಅವರ ಮುನ್ನಡೆಗೆ ಲಿಂಗಾಧಾರಿತ ತಾರತಮ್ಯ ಅಡ್ಡಿಯಾಗುತ್ತಿದ್ದು, ಈ ಬಗ್ಗೆ ಜಾಗೃತಿ ಅಗತ್ಯ ಎಂದರು.

ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಕಾರ್ಯಗಾರವನ್ನು ಉದ್ಘಾಟಿಸಿದರು. ಹೆಣ್ಣು ಮಕ್ಕಳು ಮತ್ತು ಮಹಿಳೆಯರ ರಕ್ಷಣೆಗಾಗಿ ಇರುವಂತಹ ಕಾನೂನುಗಳ ಕುರಿತಾಗಿ ಮಹಿಳೆಯರಿಗೆ ಹೆಚ್ಚಿನ ಅರಿವು ಮೂಡಿಸುವ ಕೆಲಸ ಆಗಬೇಕಿದೆ ಎಂದರು. 

ಸಿದ್ದಕಟ್ಟೆ ಸರಕಾರಿ ಪ್ರೌಢಶಾಲೆಯ ಅಧ್ಯಾಪಕಿ ಮಾರ್ಗರೇಟ್ ಪಿಂಟೋ ಮಹಿಳಾ ದೌರ್ಜನ್ಯದ ಕುರಿತಾಗಿ ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ, ಅಧ್ಯಾಪಕರ ಸಂಘದ ಅಧ್ಯಕ್ಷ ರಮೇಶ್ ನಾಯಕ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ರೈ, ಪುರಸಭಾ ಸಮುದಾಯ ಅಧಿಕಾರಿ ಮತ್ತಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವೌನೇಶ ವಿಶ್ವಕರ್ಮ, ಮಕ್ಕಳ ಹಕ್ಕು, ಕಡ್ಡಾಯ ಶಿಕ್ಷಣ ಕಾಯ್ದೆ, ಲಿಂಗ ತಾರತಮ್ಯ, ಪೊಕ್ಸೊ ಕಾಯ್ದೆಯ ಕುರಿತಾಗಿ ಕಾರ್ಯಾಗಾರ ನಡೆಸಿಕೊಟ್ಟರು. ಯೋಜನೆಯ ಸಂಯೋಜಕಿ ಲಲಿತಾ ಶೆಟ್ಟಿ ಸ್ವಾಗತಿಸಿದರು. ಡೆನ್ನಿಸ್ ಡಿಸೋಜ ವಂದಿಸಿದರು. ವಿಶಾಲಾಕ್ಷಿ, ದಿವ್ಯಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X