Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 145 ಹೋವಿಟ್ಝರ್ ಫಿರಂಗಿಗಳ ಖರೀದಿಗೆ...

145 ಹೋವಿಟ್ಝರ್ ಫಿರಂಗಿಗಳ ಖರೀದಿಗೆ ರಕ್ಷಣಾ ಸಚಿವಾಲಯದ ಹಸಿರು ನಿಶಾನೆ

ವಾರ್ತಾಭಾರತಿವಾರ್ತಾಭಾರತಿ25 Jun 2016 11:38 PM IST
share
145 ಹೋವಿಟ್ಝರ್ ಫಿರಂಗಿಗಳ ಖರೀದಿಗೆ ರಕ್ಷಣಾ ಸಚಿವಾಲಯದ ಹಸಿರು ನಿಶಾನೆ

ಹೊಸದಿಲ್ಲಿ,ಜೂ.25: ಸುದೀರ್ಘ ಕಾಲದಿಂದ ನನೆಗುದಿಗೆ ಬಿದ್ದಿದ್ದ ಅಮೆರಿಕದಿಂದ 5,000 ಕೋ.ರೂ.ವೌಲ್ಯದ 145 ಹಗುರ ಹೋವಿಟ್ಝರ್‌ಗಳನ್ನು ಖರೀದಿಸುವ ಪ್ರಸ್ತಾವನೆಗೆ ರಕ್ಷಣಾ ಸಚಿವಾಲಯವು ಶನಿವಾರ ರಾತ್ರಿ ಹಸಿರು ನಿಶಾನೆಯನ್ನು ತೋರಿಸಿದೆ. 18 ಧನುಷ್ ಆರ್ಟಿಲರಿ ಗನ್‌ಗಳ ಸಗಟು ಉತ್ಪಾದನೆಗೂ ಅದು ಒಪ್ಪಿಗೆ ಸೂಚಿಸಿದೆ. ಬೋಫೊರ್ಸ್ ಹಗರಣದ ನಂತರ ಮೂರು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಇಂತಹ ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಖರೀದಿಸಲಾಗುತ್ತಿದೆ.

ರಕ್ಷಣಾ ಸಚಿವ ಮನೋಹರ ಪಾರಿಕ್ಕರ್ ಅಧ್ಯಕ್ಷತೆಯ ರಕ್ಷಣಾ ಖರೀದಿ ಮಂಡಳಿ(ಡಿಎಸಿ)ಯು 28,000 ಕೋ.ರೂ.ಗಳ ನೂತನ ಯೋಜನೆಗಳು ಸೇರಿದಂತೆ 18 ಪ್ರಸ್ತಾವನೆಗಳನ್ನು ಚರ್ಚೆಗೆತ್ತಿಕೊಂಡಿತ್ತು.

‘ಬಯ್ ಇಂಡಿಯನ್’ ವಿಭಾಗದಡಿ 13,000 ಕೋ.ರೂ.ವೆಚ್ಚದಲ್ಲಿ ಆರು ಮುಂದಿನ ಪೀಳಿಗೆಯ ಕ್ಷಿಪಣಿ ನೌಕೆಗಳ ನಿರ್ಮಾಣ ಪ್ರಸ್ತಾವನೆಗೂ ಸಚಿವಾಲಯದ ಒಪ್ಪಿಗೆ ದೊರಕಿದ್ದು, ಇದರಿಂದಾಗಿ ಟೆಂಡರ್‌ಗಳನ್ನು ಕರೆಯಲು ನೌಕಾಪಡೆಯ ಮಾರ್ಗ ಸುಗಮಗೊಂಡಿದೆ.

25 ಕಿ.ಮೀ.ದಾಳಿ ವ್ಯಾಪ್ತಿಯನ್ನು ಹೊಂದಿರುವ ಈ ಫಿರಂಗಿಗಳ ಪೂರೈಕೆ ಭಾರತದಲ್ಲಿ ಆಗಲಿದ್ದು, ಪೂರೈಕೆಯ ಅವಧಿಯನ್ನು ಡಿಎಸಿ ಕಡಿತಗೊಳಿಸಿದೆ. ಆದರೆ ನಿಖರವಾದ ಗಡುವಿನ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ ಎಂದು ಮೂಲಗಳು ತಿಳಿಸಿವೆ.ಫಿರಂಗಿಗಳ ಖರೀದಿಗೆ ಆಸಕ್ತಿ ವ್ಯಕ್ತಪಡಿಸಿ ಭಾರತವು ಅಮೆರಿಕಕ್ಕೆ ಮನವಿ ಪತ್ರವನ್ನು ಕಳುಹಿಸಿತ್ತು ಎಂದು ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಯೋರ್ವರು ತಿಳಿಸಿದರು.

ಈ ಫಿರಂಗಿಗಳನ್ನು ಚೀನಾಕ್ಕೆ ಹೊಂದಿಕೊಂಡಿರುವ ಅರುಣಾಚಲ ಪ್ರದೇಶ ಮತ್ತು ಲಡಾಖ್‌ಗಳಲ್ಲಿಯ ಎತ್ತರದ ಪ್ರದೇಶಗಳಲ್ಲಿ ನಿಯೋಜಿಸಲಾಗುವುದು.ಭಾರತದ ಮನವಿಗೆ ಸ್ಪಂದಿಸಿ ಅಮೆರಿಕವು ಒಪ್ಪಿಗೆ ಪತ್ರವನ್ನು ಕಳುಹಿಸಿತ್ತು. ಶನಿವಾರ ತನ್ನ ಸಭೆಯಲ್ಲಿ ಖರೀದಿ ಷರತ್ತುಗಳು ಮತ್ತು ನಿಬಂಧನೆಗಳನ್ನು ಪರಿಶೀಲಿಸಿದ ಡಿಎಸಿಯು ತನ್ನ ಒಪ್ಪಿಗೆಯನ್ನು ನೀಡಿತು.

ಫಿರಂಗಿಗಳ ತಯಾರಿಕೆ ಸಂಸ್ಥೆ ಬಿಎಇ ಸಿಸ್ಟಮ್ಸ್ 25 ಫಿರಂಗಿಗಳನ್ನು ಸಿದ್ಧ ಸ್ಥಿತಿಯಲ್ಲಿ ಪೂರೈಸಲಿದೆ. ಉಳಿದವುಗಳನ್ನು ಭಾರತದಲ್ಲಿ ಮಹೀಂದ್ರಾದ ಸಹಭಾಗಿತ್ವದಲ್ಲಿ ತಲೆಯೆತ್ತಲಿರುವ ಜೋಡಣೆ ಕೇಂದ್ರದಲ್ಲಿ ಜೋಡಿಸಲಿದೆ. ಹೆಲಿಕಾಪ್ಟರ್‌ಗಳಲ್ಲಿ ಸಾಗಿಸಬಹುದಾದ ಹೋವಿಟ್ಝರ್‌ಗಳ ಖರೀದಿಗಾಗಿ ಹತ್ತು ವರ್ಷಗಳ ಹಿಂದೆ ಪ್ರಸ್ತಾವಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X