Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಸಿದು ಬೀಳುವ ಸ್ಥಿತಿಯಲ್ಲಿ...

ಕುಸಿದು ಬೀಳುವ ಸ್ಥಿತಿಯಲ್ಲಿ ನೆಲ್ಲಿಕುಂಜೆ ಶಾಲಾ ಕಟ್ಟಡ

ಆತಂಕದಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರು

ವಾರ್ತಾಭಾರತಿವಾರ್ತಾಭಾರತಿ25 Jun 2016 11:45 PM IST
share
ಕುಸಿದು ಬೀಳುವ ಸ್ಥಿತಿಯಲ್ಲಿ ನೆಲ್ಲಿಕುಂಜೆ ಶಾಲಾ ಕಟ್ಟಡ

ಕಾಸರಗೋಡು, ಜೂ.25: ನಗರದ ನೆಲ್ಲಿಕುಂಜೆ ಗರ್ಲ್ಸ್ ಹಯರ್ ಸೆಕೆಂಡರಿ ಶಾಲೆಯು ಶಿಥಿಲಾವಸ್ಥೆ ಯಲ್ಲಿದ್ದು, ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಸಿಬ್ಬಂದಿ ಆತಂಕದಿಂದ ಕಾಲ ಕಳೆಯುವ ಪರಿಸ್ಥಿತಿ ಎದುರಾಗಿದೆ. ಯಾವುದೇ ಸಂದರ್ಭದಲ್ಲೂ ದುರಂತಕ್ಕೀಡಾ ಗಬಹುದಾದ ಈ ಶಾಲೆಯ ಬಗ್ಗೆ ಅಧಿಕಾರಿಗಳು ಕಿಂಚಿತ್ತೂ ಗಮನಹರಿಸಿಲ್ಲ. ಶಾಲಾ ಕಟ್ಟಡ ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಸಮೀಪವೇ ಇರುವ ಮತ್ತೊಂದು ಕಟ್ಟಡ ಜೀರ್ಣಾವಸ್ಥೆಗೆ ತಲುಪಿದೆ. ಶಾಲೆಯ ಪ್ರವೇಶದ್ವಾರ ಯಾವ ಸಂದರ್ಭದಲ್ಲಾದರೂ ನೆಲಕಚ್ಚುವ ಸ್ಥಿತಿಯಲ್ಲಿದೆ. ಇದರ ಆಧಾರ ಕಂಬಗಳು ಮುರಿದು ಬಿದ್ದಿದ್ದು, ಮೇಲ್ಛಾವಣಿ ಮಾತ್ರ ಉಳಿದುಕೊಂಡಿದೆ.

ಬಿಡುವಿಲ್ಲದೆ ಸುರಿಯುತ್ತಿರುವ ಮಳೆಯಿಂದ ಆತಂಕ ಮತ್ತಷ್ಟು ಹೆಚ್ಚಿದ್ದು, ಈ ಬಗ್ಗೆ ನಗರಸಭೆ ಮತ್ತು ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಎಚ್ಚೆತ್ತುಕೊಂಡಿಲ್ಲ ಎನ್ನಲಾಗಿದೆ. ದುರ್ಘಟನೆಗಳು ಸಂಭವಿಸಿದ ಸಂದರ್ಭಗಳಲ್ಲಿ ಮಾತ್ರ ಎಚ್ಚೆತ್ತುಕೊಂಡು ಕಾಳಜಿವಹಿಸುವ ಸರಕಾರ, ಸ್ಥಳೀಯಾಡಳಿತ ದುರಂತಗಳು ಸಂಭವಿಸುವ ಮೊದಲು ನಿರ್ಲಕ್ಷ ವಹಿಸುವುದು ವಿಪರ್ಯಾಸ.
  
ದುರವಸ್ಥೆ ಬಗ್ಗೆ ಶಾಲಾ ಮುಖ್ಯಸ್ಥರು ಈ ಹಿಂದೆಯೇ ಕಾಸರಗೋಡು ನಗರಸಭಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಆದರೆ ಯಾವುದೇ ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಜಿಲ್ಲಾ ಶಿಕ್ಷಣ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಗಮನ ಹರಿಸಿಲ್ಲ. ಸುಮಾರು 600ರಷ್ಟು ಮಕ್ಕಳು ಈ ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಹೆಣ್ಮಕ್ಕಳ ಸಬಲೀಕರಣದ ಉದ್ದೇಶದೊಂದಿಗೆ ರಚಿಸಲಾದ ಸೊಸೈಟಿಯ ಕಟ್ಟಡ ಶಾಲೆಯ ಪ್ರವೇಶ ದ್ವಾರದಲ್ಲಿದೆ. ಹೊಲಿಗೆ ಸೇರಿದಂತೆ ಹಲವು ರೀತಿಯ ಉದ್ಯೋಗ ತರಬೇತಿಗಳನ್ನು ಈ ಕಟ್ಟಡದಲ್ಲಿ ನೀಡಲಾಗುತ್ತಿತ್ತು.

ಆದರೆ ಕೆಲ ವರ್ಷಗಳ ಹಿಂದೆ ಈ ತರಬೇತಿ ಸ್ಥಗಿತಗೊಂಡಿದೆ. ಯಾವುದೇ ದುರಸ್ತಿ ನಡೆಸದೆ ಇರುವುದರಿಂದ ಈ ಕಟ್ಟಡ ಜೀರ್ಣಾವಸ್ಥೆಗೆ ತಲುಪಿದ್ದು, ಭಾಗಶಃ ಕುಸಿದಿದೆ. ಈ ಹಿಂದೆ ಕಟ್ಟಡ ತೆರವುಗೊಳಿಸಲು ಆದೇಶ ನೀಡಲಾಗಿತ್ತು. ಆದರೆ ಸೊಸೈಟಿ ಇದಕ್ಕೆ ತಡೆ ನೀಡಿತ್ತು. ಆದರೆ ಹೊಸ ಕಟ್ಟಡ ನಿರ್ಮಾಣ ಅಥವಾ ಹಳೆಯ ಕಟ್ಟಡ ತೆರವುಗೊಳಿಸಲು ಸೊಸೈಟಿ ಅಧಿಕಾರಿಗಳು ಮುಂದೆ ಬಂದಿಲ್ಲ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇನ್ನಾದರೂ ಸಂಬಂಧಪಟ್ಟವರು ಶಾಲೆ ಕಟ್ಟಡದ ದುರಸ್ತಿಗೆ ಕ್ರಮಕೈಗೊಳ್ಳಬೇಕು ಎನ್ನುವುದು ಸಾರ್ವಜನಿಕರ ಆಗ್ರಹ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X