Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಲಾ ವಾಹನಗಳ ತಪಾಸಣೆಯನ್ನು ಪೊಲೀಸ್ ...

ಶಾಲಾ ವಾಹನಗಳ ತಪಾಸಣೆಯನ್ನು ಪೊಲೀಸ್ ಪ್ರತಿನಿತ್ಯ ನಡೆಸುವಂತೆ ಆಗ್ರಹ

ದಲಿತ ಕುಂದುಕೊರತೆ ಸಭೆ

ವಾರ್ತಾಭಾರತಿವಾರ್ತಾಭಾರತಿ26 Jun 2016 2:08 PM IST
share
ಶಾಲಾ ವಾಹನಗಳ ತಪಾಸಣೆಯನ್ನು ಪೊಲೀಸ್  ಪ್ರತಿನಿತ್ಯ ನಡೆಸುವಂತೆ ಆಗ್ರಹ

ಮಂಗಳೂರು, ಜೂ.25: ಇತ್ತೀಚೆಗೆ ಕುಂದಾಪುರದ ತ್ರಾಸಿಯಲ್ಲಿ ನಡೆದ ಭೀಕರ ಅಪಘಾತದ ನಂತರ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಶಾಲಾ ವಾಹನಗಳ ತಪಾಸಣೆಯನ್ನು ಪೊಲೀಸ್ ಇಲಾಖೆಯು ಒಂದು ತಿಂಗಳಿಗೆ ಸೀಮಿತಗೊಳಿಸದೆ ಪ್ರತಿನಿತ್ಯವು ನಡೆಸಬೇಕು ಎಂದು ಇಂದು  ಮಂಗಳೂರು ಪೊಲೀಸ್ ಕಮೀಷನರ್ ಕಚೇರಿಯಲ್ಲಿ  ಡಿಸಿಪಿಗಳಾದ ಕೆ.ಎಂ.ಶಾಂತರಾಜು ಮತ್ತು ಸಂದೀಪ್ ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ದಲಿತ ಕುಂದುಕೊರತೆ ಸಭೆಯಲ್ಲಿ ಆಗ್ರಹ ಕೇಳಿಬಂತು.

ಸಭೆಯಲ್ಲಿ ಮಾತನಾಡಿದ ದಲಿತ ಮುಖಂಡ ರಘುರಾಜ್ ಅವರು ದಲಿತ ಸಮುದಾಯದ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗಲು ವಾಹನ ವ್ಯವಸ್ಥೆ ಮನೆಯಲ್ಲಿ ಇಲ್ಲದೆ ಇರುವುದರಿಂದ ಅನಿವಾರ್ಯವಾಗಿ ಶಾಲಾ ವಾಹನವನ್ನು ಬಳಸಬೇಕಾಗುತ್ತದೆ. ಈ ಕಾರಣದಿಂದ ಮುಂದೆ ಕುಂದಾಪುರದಲ್ಲಿ ನಡೆದಂತಹ ಅವಘಡಗಳು ಸಂಭವಿಸದೆ ಇರಲು ಶಾಲಾ ವಾಹನಗಳನ್ನು ಪ್ರತಿನಿತ್ಯ ತಪಾಸಣೆ ನಡೆಸಬೇಕು ಎಂದು ಹೇಳಿದರು.

ಈ ಬಗ್ಗೆ ದಲಿತ ಮುಖಂಡ ರಘುವೀರ್ ಮಾತನಾಡಿ  ಜಿಲ್ಲೆಯಲ್ಲಿ ಅಪಘಾತ ತಡೆಯಲು ಸೂಕ್ತ ಕ್ರಮವನ್ನು ಪೊಲೀಸ್ ಇಲಾಖೆ ತೆಗೆದುಕೊಳ್ಳಬೇಕಾಗಿದೆ. ಠಾಣಾಧಿಕಾರಿಗಳ ಸಮ್ಮುಖದಲ್ಲಿ ಠಾಣಾ ಮಟ್ಟದ ಸಭೆಗಳನ್ನು ನಡೆಸಿ ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಹಾಜರಿದ್ದ ಮಂಕಿಸ್ಟಾಂಡ್ನ ಶಾಂತ ಆಳ್ವ ಕಂಪೌಂಡ್ ನಿವಾಸಿಗಳು ಮಾತನಾಡಿ ಪಾಂಡೇಶ್ವರ ಠಾಣೆಯ ವ್ಯಾಪ್ತಿಯಲ್ಲಿ ಸಂದೀಪ್  ಎಂಬಾತನ ಮೇಲೆ ನಡೆದ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ವಿಜಯ್ ಎಂಬಾತನನ್ನು ಹುಡುಕುತ್ತಿರುವ ಪೊಲೀಸರು  ಶಾಂತಾ ಆಳ್ವ ಕಂಪೌಂಡ್ ನ ದಲಿತ ಕುಟುಂಬದ ನಿವಾಸಿಗಳಿಗೆ ವೃಥಾ ಉಪಟಳ ನೀಡುತ್ತಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ ಎಂದು ಆಪಾದಿಸಿದರು.
 ಭಾರತಿ ಎಂಬವರು ಮಾತನಾಡಿ ತನಗೆ ಕೃಷ್ಣ ಎಂಬವರಿಂದ ಹಲ್ಲೆಯಾಗಿದ್ದರೂ ಉರ್ವ ಠಾಣಾಧಿಕಾರಿ ರವೀಶ್ ನಾಯಕ್ ಅವರು ಅದನ್ನು ನಿರ್ಲಕ್ಷಿಸಿ ಆರೋಪಿಯ ಪರ ವಹಿಸಿದ್ದಾರೆ. ಮಹಿಳೆ ಎಂದು ಗೌರವ ಕೊಡದೆ ಪ್ರಕರಣಕ್ಕೆ ನ್ಯಾಯವನ್ನು ನೀಡಿಲ್ಲ ಎಂದು ಆಪಾದಿಸಿದರು.

ದಲಿತ ಮುಖಂಡ ರಘುವೀರ್ ಮಾತನಾಡಿ ಮಾದಕವಸ್ತುಗಳ ಬಗ್ಗೆ ಜಾಗೃತಿ ಮಾಡುವ ಕಾರ್ಯಕ್ರಮವನ್ನು ಪೊಲೀಸ್ ಇಲಾಖೆ ದಲಿತ ಕಾಲನಿಗಳಲ್ಲಿಯೂ ಮಾಡುವಂತೆ ಆಗ್ರಹಿಸಿದರು.

ಉಮೇಶ್ ಎಂಬವರು ಮಾತನಾಡಿ ನೀರಿನ ಟ್ಯಾಂಕಿಗೆ ವಿಷವನ್ನು ಹಾಕಿ ಕೊಲೆಗೈಯಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರು ವರ್ಷವಾದರೂ ನ್ಯಾಯ ಸಿಕ್ಕಿಲ್ಲ. ಈ ಬಗ್ಗೆ ವಿಚಾರಣೆ ನಡೆಸಿದ ಎಸ್ ಐ ಅವರು ನಾನೇ ವಿಷ ಹಾಕಿದ್ದು ಎಂದು ದರ್ಪದಿಂದ ಹೇಳುತ್ತಾರೆ ಎಂದು ದೂರು ನೀಡಿದಾಗ  ಡಿಸಿಪಿ ಕೆ.ಎಂ ಶಾಂತರಾಜು ಅವರು ಎಸಿಪಿಯವರಿಗೆ ಒಂದು ವಾರದಲ್ಲಿ ಅರ್ಜಿದಾರರ ಹೇಳಿಕೆಯನ್ನು ಪಡೆದು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X